AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ವಿಧಿವಶ: ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

ಲೀವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗೆಳೆಯನ ಸಾವಿಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ವಿಧಿವಶ: ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 23, 2022 | 7:09 AM

Share

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ (ananda mamani) (56) ಭಾನುವಾರ (ಅ. 23) ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗೆಳೆಯನ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ಆನಂದ್ ಮಾಮನಿ ಅಂತಿಮ ದರ್ಶನ ಪಡೆದ ಸಿಎಂ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕ್ರಿಯಾಶೀಲ‌ ರಾಜಕಾರಣಿಯಾಗಿದ್ದ ಮಾಮನಿ ನಮ್ಮೊಂದಿಗಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಸ್ನೇಹಿತನನ್ನ ಕಳೆದುಕೊಂಡಿದ್ದೇನೆ. ಇತ್ತೀಚೆಗಷ್ಟೇ ಉಮೇಶ್ ಕತ್ತಿ ಅವರನ್ನ ಕಳೆದುಕೊಂಡಿದ್ದೇವೆ. ಈಗ ಮತ್ತೆ ಬೆಳಗಾವಿ ಜಿಲ್ಲೆಯ ಮತ್ತೊಬ್ಬರನ್ನ ಕಳೆದುಕೊಂಡಿದ್ದೇವೆ. ಮಾಮನಿ ಬಹಳ ಸಣ್ಣ ವಯಸ್ಸಿನಲ್ಲಿ ರಾಜಕಾರಣಕ್ಕೆ ಬಂದವರು. ಮಾದರಿ ಶಾಸಕ, ನೀರಾವರಿ, ರಸ್ತೆ, ಶಾಲಾ ಕಟ್ಟಡಗಳು ಸೇರಿ, ತಮ್ಮ ಕ್ಷೇತ್ರವನ್ನ ಪ್ರೀತಿಸುತ್ತಿದ್ದ ಶಾಸಕ ಆನಂದ್​ ಮಾಮನಿ. ಕ್ಷೇತ್ರದ ಜನರು ಕೂಡ ಅವರನ್ನು ಅಷ್ಟೇ ಪ್ರೀತಿ‌ ಮಾಡುತ್ತಿದ್ದರು.

ಮಾಮನಿ ಹಾಗೂ ನಮ್ಮ ನಡುವೆ ಉತ್ತಮ ಒಡನಾಟವಿತ್ತು. ಇಷ್ಟು ಬೇಗ ನಮ್ಮನ್ನ ಬಿಟ್ಟು ಹೋಗುತ್ತಾರೆ ಅಂದುಕೊಂಡಿರಲಿಲ್ಲ. ಸವದತ್ತಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಇಂದು ಸಂಜೆ ನಾಲ್ಕು ಗಂಟೆಗೆ ಸಕಲ‌ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಭಗವಂತ ಆನಂದ್ ಮಾಮನಿ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ರಾಜಕೀಯ ಜೀವನ

ಆನಂದ್ ಮಾಮನಿ ಅವರು 2000 ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶ್ವರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾದರು. 2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌಂದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದಾರೆ.

13 ಜೂನ್ 2015 ರಂದು ಅವರು ಡಿಸಿಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾದರು. 23-03-2020 ರಲ್ಲಿ ಅವರು ಕರ್ನಾಟಕ ವಿಧಾನಸಭೆಯ ಉಪಸ್ಪೀಕರ್ ಆದರು. ಮತ್ತೊಮ್ಮೆ 07-09-2020 ರಂದು ರೇಣುಕಾ ದೇವಸ್ತಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಎರಡನೇ ಬಾರಿಗೆ 06-11-2020 ರಿಂದ ಡಿಸಿಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಮತ್ತೊಮ್ಮೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ತಾನ ವ್ಯವಸ್ಥಾಪನಾ ಸಮಿತಿ, ಯಲ್ಲಮ್ಮನಗುಡ್ಡ 2008 ರಿಂದ 2013ವರೆಗೆ ಅಧ್ಯಕ್ಷರಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!