ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್​: ದೂರು ದಾಖಲು

|

Updated on: Nov 25, 2024 | 1:11 PM

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್​ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ. ಅವಹೇಳನಕಾರಿ ಕಾಮೆಂಟ್​ ಮಾಡಿದ ವ್ಯಕ್ತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್​: ದೂರು ದಾಖಲು
ದೂರು, ಅವಹೇಳನಕಾರಿ ಕಾಮೆಂಟ್​
Follow us on

ಬೆಂಗಳೂರು, ನವೆಂಬರ್​ 25: ಹಿಂದೂ (Hindu) ಧರ್ಮದ ದೇವರುಗಳ (Gods) ಬಗ್ಗೆ ಸಾಮಾಜಿ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಕಾಮೆಂಟ್​ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ.
ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್​ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಈ ವಿಚಾರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್​ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.

ಇದನ್ನೂ ಓದಿ: ಬೀದರ್: ಮದಾರ ಸಾಹೆಬ್ ಉರೂಸ್​ಗೆ ಹಿಂದೂಗಳದ್ದೇ ಸಾರಥ್ಯ! ಕೋಮು ಸೌಹಾರ್ದತೆಗೆ ಸಾಕ್ಷಿ ಕೋಹಿನೂರು ಜಾತ್ರೆ

ಅವರ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ. ನಾವು ರಾಮನ ತರಹ ಇದ್ದೀವಿ, ಆದರೆ ಪರಶುರಾಮ ಆಗಬೇಕಾಗುತ್ತದೆ ಎಂದರು.

ವರದಿ: ಪ್ರದೀಪ್​

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ