ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್​ ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Jan 13, 2024 | 6:18 PM

ಫೇಸ್​ಬುಕ್ ಮತ್ತು ಇನ್ಸ್​ಟಾಗ್ರಾಂನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ IPC ಸೆಕ್ಷನ್ 153,153A,505(2) ಅಡಿ ಎಫ್​ಐಆರ್​ ದಾಖಲಿಸಲಾಗಿದೆ. ಕಾಂಗ್ರೆಸ್​ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್​ ದಾಖಲು
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಜನವರಿ 13: ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ IPC ಸೆಕ್ಷನ್ 153,153A,505(2) ಅಡಿ ಎಫ್​ಐಆರ್​ ದಾಖಲಿಸಲಾಗಿದೆ. ಫೇಸ್​ಬುಕ್, ಇನ್ಸ್​ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್​ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಎಫ್​ಐಆರ್​​ ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ? 

ಸಾಮಾಜಿಕ ಜಾಲತಾಣಗಳಲ್ಲಿ ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಜೊತೆಗೆ ಗೌರವಕ್ಕೆ ಧಕ್ಕೆ ತರಲಾಗಿದೆ. ಹಾಗಾಗಿ ಈ ಪೋಸ್ಟ್‌ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ: ಸಚಿವ ಎಂಬಿ ಪಾಟೀಲ್ ಸುಳಿವು

ದಿನಾಂಕ 11.01.2024 ರಂದು ಸಾಮಾಜಿಕ ಜಾಲತಾಣದ ಟ್ರೋಲ್ ಕನ್ನಡಿಗ ಎಂಬ ಖಾತೆಯಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಟೋಪಿ ಹಾಗೂ ಗಡ್ಡ ಹಾಕಿ ಒಂದು ಸಮುದಾಯಕ್ಕೆ ಸೇರಿದವರಂತೆ ಬಿಂಬಿಸಲಾಗಿದೆ. ಅಲ್ಲದೇ ಮಿಸ್ಟೇಕ್ ಆಗಿ ಕುರುಬರ ವಂಶದಲ್ಲಿ ಹುಟ್ಟಿದ್ದಾನೆ. ಇವನು ಮಂಡ  ಸಾಬ್ರಿಗೆ ಹುಟ್ಟಬೇಕಾಗಿತ್ತು ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ನನ್ನ ಐಡಿಯ ಅಲ್ಲ, ಸಾಫ್ಟ್‌ವೇರ್ ಜೊತೆಗೆ ಸಂಸ್ಕೃತಿ ಸ್ವಚ್ಚತೆಯಲ್ಲೂ ಹೆಸರು ಮಾಡಬೇಕು ಎಂದ ಸುಧಾಮೂರ್ತಿ

ಇದೇ ರೀತಿಯಾಗಿ ಸಿದ್ದರಾಮಯ್ಯ ಅವರಿಗೆ ತಲೆಗಳನ್ನು ಜೋಡಿಸಿ ರಾಮಭಕ್ತರನ್ನು ಕಾಡುತ್ತಿರುವ ಸಿದ್ಧರಾವಣ ಎಂದು ಡಿಸೈನ್ ಮಾಡಿ ಅವಾಚ್ಯಾವಾಗಿ ನಿಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:55 pm, Sat, 13 January 24