ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ರಾಹುಲ್​ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗವು ಯತ್ನಾಳ್​ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?
ಬಸನಗೌಡ ಪಾಟೀಲ್ ಯತ್ನಾಳ್
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 18, 2024 | 10:17 PM

ಬೆಂಗಳೂರು, ಸೆ.18: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಿಸಲಾಗಿದೆ.

ದೂರಿನಲ್ಲೇನಿದೆ?

ಹೌದು, ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್‌ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್‌‍ ಇಲಾಖೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ

ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us