AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ವಿರುದ್ಧ ಎಫ್​ಐಆರ್

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಎಕ್ಸ್​ನಲ್ಲಿ ವಿವಾದಾತ್ಮಕ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆತ ಮಾಡಿದ ಪೋಸ್ಟ್​​ನಲ್ಲೇನಿತ್ತು? ದೂರುದಾರರು ಹೇಳಿದ್ದೇನು? ಇಲ್ಲಿದೆ ವಿವರ.

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ವಿರುದ್ಧ ಎಫ್​ಐಆರ್
ರಾಹುಲ್ ಗಾಂಧಿ & ಸೋನಿಯಾ ಗಾಂಧಿ
ರಾಚಪ್ಪಾಜಿ ನಾಯ್ಕ್
| Updated By: Ganapathi Sharma|

Updated on: Sep 13, 2024 | 9:04 AM

Share

ಬೆಂಗಳೂರು, ಸೆಪ್ಟೆಂಬರ್ 13: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ತಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಹೀಗಾಗಿ ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ.

ಅವಹೇಳನಕಾರಿ ಪೋಸ್ಟ್​ನಲ್ಲೇನಿತ್ತು?

‘‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ‌ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ’’ ಎಂದು ಸಲಾಲುದ್ದೀನ್ ಸುಹೇಬ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ.

ಇಷ್ಟೇ ಅಲ್ಲದೆ, ‘‘ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ’’ ಎಂದು ಪೋಸ್ಟ್ ಮಾಡಿದ್ದ. ಇದನ್ನು ‘ದಿ ಜೈಪುರ್ ಡೈಲಾಗ್ಸ್’ ವೆಬ್​ಸೈಟ್ ಮೂಲಕ ರಿಟ್ವೀಟ್ ಮಾಡಿಸಲಾಗಿತ್ತು.

ಈ ಮಧ್ಯೆ ಅದಿತಿ ಘೋಷ್ ಎಂಬುವವರು, ‘‘ರೀಪೋಸ್ಟ್ ಮಾಡಿ ಜನರಿಗೆ ತಲುಪಿಸಿ, ಕೋಮು ಸೌಹಾರ್ದ್ಯತೆಗೆ ಧಕ್ಕೆ ತರುತ್ತಿದ್ದಾರೆ’’ ಎಂದು ದೂರಿದ್ದರು. ಈ ಸಂಬಂಧ ವಕೀಲ ಶ್ರೀನಿವಾಸ್ ಎಂಬುವವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಫ್​ಐಆರ್​ನಲ್ಲೇನಿದೆ?

ದಿನಾಂಕ 23.08.2024 ರಂದು ಬಾಂಗ್ಲಾದೇಶ ಮೂಲದವರಾದ ಸಲಾಲುದ್ದೀನ್ ಸುಹೇಬ್ ತಮ್ಮ ‘X’ ಅಕೌಂಟ್ ಹೆಸರಿನ @salaha_shoaib, ಟ್ವಿಟರ್ ಖಾತೆಯ ಲಿಂಕ್ ಮುಖಾಂತರ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬಗ್ಗೆ, ಟೀಟ್ ಮಾಡಿದ್ದಾನೆ. ಟ್ವೀಟ್​​ನಲ್ಲಿ ಸೋನಿಯಾ ಗಾಂಧಿ ಅಂತರ್ ಧರ್ಮ ಮದುವೆಯಾಗಿ ಭಾರತೀಯ ಪೌರತ್ನವನ್ನು ಹೊಂದಿದ್ದಾರೆ. ಅವರು ಕ್ರಿಶ್ಚನ್ ಧರ್ಮವನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನಿ ಐಎಸ್​​ಐ ಎಜೆಂಟ್ ರೀತಿ ಬಿಂಬಿಸಿ ಟ್ವಿಟ್ ಮಾಡಿರುತ್ತಾರೆ. ರಾಹುಲ್‌ ಗಾಂಧಿ ಅವರ ವಿದೇಶಿ ಸ್ನೇಹಿತರೊಂದಿಗೆ ಸೇರಿಕೊಂಡು ಒಬ್ಬ ಮಹಿಳೆಗೆ ಅತ್ಯಾಚಾರ ಮಾಡಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ ಎಂದು ಶ್ರೀನಿವಾಸ್ ಅವರು ನೀಡಿದ ದೂರಿನಲ್ಲಿದೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಜ್ಞಾನಭಾರತಿ ವಿಶ್ವವಿದ್ಯಾಲಯ ಆವರಣದಲ್ಲೂ ಜಾರಿಯಾಗಲಿದೆ ಕಬ್ಬನ್ ಪಾರ್ಕ್ ಮಾದರಿ ಸಂಚಾರ ನಿಯಮ

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ, ಪಕ್ಷವೊಂದರ ನಾಯಕರ ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮತ್ತು ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧರೆಯಾಗಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಕದಡುವ ರೀತಿಯಲ್ಲಿ ಟ್ವೀಟ್ ಮಾಡಿರುತ್ತಾರೆ. ಇದನ್ನು ಅದಿತಿ ಘೋಷ ರವರು ‘‘The Jaipur Dialogues” ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ತಲುವುವ ರೀತಿಯಲ್ಲಿ ಪ್ರಚಾರ ಮಾಡಿರುತ್ತಾರೆ. ಇದರಿಂದ ಅವರು ಸಹ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಗೌರವಕ್ಕೆ ಧಕ್ಕೆ ತರುವಂತೆ ಮಾಡಿದ್ದಲ್ಲದೆ, ಅಪಪ್ರಚಾರ ಮಾಡಲು ಕಾರಣಕರ್ತರಾಗಿರುತ್ತಾರೆ. ಇವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಶ್ರೀನಿವಾಸ್ ಮನವಿ ಮಾಡಿರುವುದನ್ನೂ ಎಫ್​ಐಆರ್ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?