Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸರ್ವ ಪಕ್ಷ ಸಭೆಯಲ್ಲಿ ನಡೆಯಿತು ಮಹತ್ವದ ಚರ್ಚೆ

ಗ್ರೇಟರ್ ಬೆಂಗಳೂರು ಅಥಾರಿಟಿ. ಇದು ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ವಿಷಯ. ಇದೇ ಗ್ರೇಟರ್ ಬೆಂಗಳೂರು ಅಥಾರಿಟಿ ವಿಚಾರ, ಸರ್ವ ಪಕ್ಷ ಸಭೆ ಸೇರುವಂತೆ ಮಾಡಿದೆ. ಬೆಂಗಳೂರು ಅಭಿವೃದ್ಧಿ ವಿಷಯದಲ್ಲಿ ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂಬ ಅಭಿವೃದ್ಧಿ ಮಂತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಜಪಿಸಿದಂತಿದೆ. ಸರ್ವ ಪಕ್ಷ ಸಭೆಯಲ್ಲಿ ಏನೇನು ಚರ್ಚೆ ನಡೆಯಿತು ಎಂಬ ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸರ್ವ ಪಕ್ಷ ಸಭೆಯಲ್ಲಿ ನಡೆಯಿತು ಮಹತ್ವದ ಚರ್ಚೆ
ಆರ್ ಅಶೋಕ್ ಮತ್ತು ಡಿಕೆ ಶಿವಕುಮಾರ್
Follow us
Jagadisha B
| Updated By: Ganapathi Sharma

Updated on: Jul 27, 2024 | 6:00 PM

ಬೆಂಗಳೂರು, ಜುಲೈ 27: ಬೆಂಗಳೂರಿನ ಬಿಬಿಎಂಪಿಯನ್ನು ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡಲು ಸರ್ಕಾರ ಮುಂದಾಗಿದೆ. ಆದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವುದರಿಂದ ಸರ್ಕಾರ ಇವತ್ತು ಸರ್ವ ಪಕ್ಷ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾದ ಬೆನ್ನಲ್ಲೇ, ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋ ಕೆಲಸ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ‘ನಾಗರೀಕರ ಧ್ವನಿ, ಅದೇ ಸರ್ಕಾರದ ಧ್ವನಿ’ ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸರ್ವ ಪಕ್ಷ ಸಭೆ ಕರೆದಿದ್ದರು. ಇದರಲ್ಲಿ ಬೆಂಗಳೂರಿನ‌ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಭಾಗಿಯಾದರು. ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಎಸ್​​ಟಿ ಸೋಮಶೇಖರ್ ಕೂಡ ಭಾಗಿಯಾದರು. ಸಭೆಯಲ್ಲಿ ಟ್ರಾಫಿಕ್, ಕುಡಿಯುವ ನೀರು, ಮೆಟ್ರೋ, ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಚರ್ಚೆಯಾಗಿದೆ.

ಸಭೆಯಲ್ಲಿ, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಗಾಬರಿಯಾಗುವುದು ಬೇಡ. ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂದು ಡಿಸಿಎಂ ಕೋರಿದರು.

ಜೊತೆಗೆ ವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸ್ಸು ಮಾಡಿದರೆ ಇಂದೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು ಅಂತ ಹೇಳಿದರು.

ಸಭೆಯಲ್ಲಿ ಇನ್ನೂ ಏನೇನು ಚರ್ಚೆಯಾಯಿತು?

  • ತಂತ್ರಜ್ಞಾನ, ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ.
  • ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದೆ.
  • ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ.
  • ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು.
  • ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು.
  • ಕಸದ ವಿಚಾರ, ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ.
  • ಕಸ ಹಾಗೂ ಸಂಚಾರಿ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳು ಬಂದಿವೆ.
  • ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
  • ಎಸ್ಟೇಮ್ ಮಾಲ್ ಟು ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ಮಾಡುವ ಬಗ್ಗೆ ಚರ್ಚೆಯಾಗಿದೆ.
  • 100 ಕಿಮೀ ಸಿಗ್ನಲ್ ಫ್ರೀ ಕಾರಿಡಾರ್ 12 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡುವ ತೀರ್ಮಾನ.

ಇದನ್ನೂ ಓದಿ: ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​ ಮಾಡಲು ತಿರ್ಮಾನ: ಡಿಕೆ ಶಿವಕುಮಾರ್​​

ಇನ್ನು, ಯಶವಂತಪುರ ಬಿಜೆಪಿ ಶಾಸಕ ಎಸ್​​​ಟಿ ಸೋಮಶೇಖರ್, ಗ್ರೇಟರ್ ಬೆಂಗಳೂರು ಅಥಾರಿಟಿ ನಿರ್ಧಾರವನ್ನು ಸ್ವಾಗತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​