ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ (Omicron) ರೂಪಾಂತರಿ BQ.1 ತಳಿಯ ಮೊದಲ ಪ್ರಕರಣ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಸಲಹಾ ಪತ್ರ ಹೊರಡಿಸಲಾಗಿದ್ದು, ಪ್ರತಿಯೊಬ್ಬರು ತಪ್ಪದೇ ಮೂರು ಡೋಸ್ ಲಸಿಕೆ ಹಾಗೂ ಕೊರೊನಾ ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಟ್ವೀಟ್ರಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ದೀಪಾವಳಿ ಹಬ್ಬ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಸಲಹಾ ಪತ್ರವನ್ನು ಹೊರಡಿಸಲಾಗುತ್ತಿದೆ.
ಆರೋಗ್ಯ ಇಲಾಖೆ ಹೊರಡಿಸಿರುವ ಪತ್ರದಲ್ಲಿ ಏನಿದೆ?
ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಹತ್ತಿರದ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್ 19 ಪರೀಕ್ಷೆ ( ಕ್ಯಾಪಿಡ್ ಆಂಟಿಜೆನ್ ಟೆಸ್ಟಿಂಗ್ ಮಾಡಿಸಿಕೊಳ್ಳುವುದು.ನೆಗೆಟಿವ್ ಫಲಿತಾಂಶ ಬಂದಲ್ಲಿ, ಆರ್‌ಟಿಪಿಸಿಆರ್ ಪರೀಕ್ಷೆ ) ಮಾಡಿಸಿಕೊಳ್ಳುವುದು ಹಾಗೂ ಫಲಿತಾಂಶ ದೊರೆಯುವವರೆಗೂ ಸ್ವಯಂ ಪ್ರತ್ಯೇಕತೆಯಲ್ಲಿ ಇರುವುದು.
ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ BQ.1 ತಳಿಯ ಮೊದಲ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಸಲಹಾ ಪತ್ರ ಹೊರಡಿಸಲಾಗಿದೆ.
ಪ್ರತಿಯೊಬ್ಬರು ತಪ್ಪದೇ ಮೂರು ಡೋಸ್ ಲಸಿಕೆ ಪಡೆದುಕೊಳ್ಳಬೇಕು ಹಾಗೂ ಕೊರೊನಾ ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೋರುತ್ತೇನೆ. pic.twitter.com/q652lUJwz8
— Dr Sudhakar K (@mla_sudhakar) October 25, 2022
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆಯನ್ನು ಪಡೆಯುವುದು. ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ- ಬೆಳಕಿಲ್ಲದಿರುವ ಸ್ಥಳಗಳು, ಮಚ್ಚಿದ ಸಂರಕ್ಷಣೆಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು, ಆರೋಗ್ಯ ಸಂಸ್ಥೆಗಳು ಈ ಸ್ಥಳಗಳಲ್ಲಿ (ಓ-95) ಮಾಸ್ಕ್ ಧರಿಸಬೇಕು. ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸುವುದು ಹಾಗೂ ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವುದು.
ಕೋವಿಡ್ 19 ಲಸಿಕೆಯ ಬೂಸ್ಟರ್/ ಮುಂಜಾಗ್ರತಾ ಡೋಸ್ ಬಾಕಿ ಇರುವವರು ಲಸಿಕೆಯನ್ನು ಪಡೆಯುವುದು. 60 ವರ್ಷ ವಯಸ್ಸು ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಈ ಹಿಂದೆ ಕೋವಿಡ್ 19 ಸೋಂಕಿಗೆ ತುತ್ತಾಗದವರು) ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಇದೇ ಅಲ್ಲದೇ, immunodeficient ಹಾಗೂ immunosuppressed, ರೀನಲ್ ಡಯಾಲಿಸಿಸ್ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಮಾಲೋಚನೆಯ ನಂತರ, ಆದ್ಯತೆಯ ಮೇಲೆ ಕೋವಿಡ್ 19 ಲಸಿಕೆಯನ್ನು ಪಡೆಯುವುದು ಸೂಕ್ತವಾಗಿದೆ ಹೀಗೆ ಹಲವು ಅಂಶಗಳನ್ನಿಟ್ಟಿಕೊಂಡು ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಸಲಹಾ ಪತ್ರ ಬಿಡುಗಡೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:19 pm, Tue, 25 October 22