ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹9.67 ಕೋಟಿ ಮೌಲ್ಯದ 27 ಕೆಜಿಗೂ ಹೆಚ್ಚು ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಾದಕವಸ್ತು ಜಾಲದ ಕುರಿತು ತನಿಖೆ ತೀವ್ರಗೊಂಡಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್
Image Credit source: Tv9 kannada
Edited By:

Updated on: Oct 20, 2026 | 3:42 PM

ದೇವನಹಳ್ಳಿ, ಅ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ವಿದೇಶದಿಂದ ತರಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ.

ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಎರಡು ಪ್ರತ್ಯೇಕ ವಿಮಾನಗಳಲ್ಲಿ ಕೆಐಎಬಿಗೆ ಬಂದಿಳಿದ ಇಬ್ಬರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಅಡಗಿಸಿಡಲಾಗಿದ್ದ ಒಟ್ಟು 27 ಕೆಜಿ 600 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾ  ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ಅಂದಾಜು 9.27 ಕೋಟಿ ರೂ.ನಿಂದ 9.67 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ಬಂದ ಮೊದಲ ಪ್ರಯಾಣಿಕನ ಲಗೇಜ್ ಬ್ಯಾಗ್‌ನಿಂದ 5.43 ಕೋಟಿ ಮೌಲ್ಯದ 15.5 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಮತ್ತೊಂದು ವಿಮಾನದಲ್ಲಿ ಬಂದಿದ್ದ ಎರಡನೇ ಪ್ರಯಾಣಿಕನ ಬಳಿಯಿಂದ ₹4.24 ಕೋಟಿ ಮೌಲ್ಯದ 12.1 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ವಿದೇಶದಿಂದ ಅಕ್ರಮವಾಗಿ ಮಾದಕ ದ್ರವ್ಯ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಜಾಲದ ಹಿಂದಿರುವ ಕ್ರಿಮಿನಲ್ ನೆಟ್‌ವರ್ಕ್ ಹಾಗೂ ಬೆಂಗಳೂರಿನಲ್ಲಿ ಮಾದಕ ದ್ರವ್ಯ ಯಾರಿಗೆ ತಲುಪಬೇಕಿತ್ತು ಎಂಬ ಕುರಿತು ತನಿಖೆ ಚುರುಕುಗೊಳಿಸಲಾಗಿದೆ.

ಇದನ್ನೂ ಓದಿ: ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 5 ಕೆಜಿ ಡ್ರಗ್ಸ್ ವಶ: ಬೆಂಗಳೂರು ಸೇರಿ ದೇಶಾದ್ಯಂತ ಡಿಆರ್​ಐ ಅಧಿಕಾರಿಗಳ ಕಾರ್ಯಾಚರಣೆ

ಬೆಂಗಳೂರು ಸೇರಿ ದೇಶಾದ್ಯಂತ ಡಿಆರ್​ಐ ಅಧಿಕಾರಿಗಳ ಕಾರ್ಯಾಚರಣೆ

ದೇಶಾದ್ಯಂತ ಮಾದಕವಸ್ತುಗಳ ಸಾಗಾಟ ತಡೆಗಟ್ಟಲು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಅಧಿಕಾರಿಗಳು ಇತ್ತೀಚೆಗೆ ವ್ಯಾಪಕ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಗಳು ಬೆಂಗಳೂರು, ದೆಹಲಿ ಮತ್ತು ನಾಗಪುರ ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇಂದ್ರೀಕೃತವಾಗಿದ್ದವು. ಈ ಕಾರ್ಯಾಚರಣೆಗಳಲ್ಲಿ ಒಟ್ಟು 9 ಕೆ.ಜಿಗೂ ಅಧಿಕ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) 5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೆಜಿ ಕೊಕೇನ್ ಪತ್ತೆಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Tue, 20 October 26

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us