AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನದ ವೇಳೆ ಹಲ್ಲೆ ಯತ್ನ: ಗುಂಡೇಟು ನೀಡಿ ವಿಕೃತ ಕಾಮಿಯನ್ನು ಅರೆಸ್ಟ್​​ ಮಾಡಿದ ದೇವನಹಳ್ಳಿ ಪೊಲೀಸರು

ಬಂಧನದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ವಿಕೃತ ಕಾಮಿ ಬೆಟ್ಟ ನರೇಶ್ ಕಾಲಿಗೆ ಚಿಕ್ಕಜಾಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಮಹಿಳಾ ಪಿಜಿಗಳಿಗೆ ನುಗ್ಗಿ ದೌರ್ಜನ್ಯ ಎಸಗುತ್ತಿದ್ದ ಈತನ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣಗಳಿವೆ. ನಿನ್ನೆಯೂ ಚಿಕ್ಕಜಾಲ ಮತ್ತು ಯಲಹಂಕದಲ್ಲಿನ‌ ಖಾಸಗಿ ಮಹಿಳಾ ಪಿಜಿಗಳಿಗೆ ನುಗ್ಗಿದ್ದ ಈತ ವಿಕೃತಿ ಮೆರೆದಿದ್ದ. ಒರ್ವ ಯುವತಿಯ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದ ಎನ್ನಲಾಗಿದೆ.

ಬಂಧನದ ವೇಳೆ ಹಲ್ಲೆ ಯತ್ನ: ಗುಂಡೇಟು ನೀಡಿ ವಿಕೃತ ಕಾಮಿಯನ್ನು ಅರೆಸ್ಟ್​​ ಮಾಡಿದ ದೇವನಹಳ್ಳಿ ಪೊಲೀಸರು
ಗುಂಡೇಟು ನೀಡಿ ವಿಕೃತ ಕಾಮಿಯನ್ನು ಅರೆಸ್ಟ್​​ ಮಾಡಿದ ದೇವನಹಳ್ಳಿ ಪೊಲೀಸರು
ನವೀನ್ ಕುಮಾರ್ ಟಿ.
| Edited By: |

Updated on:Nov 28, 2026 | 7:44 AM

Share

ದೇವನಹಳ್ಳಿ, ನವೆಂಬರ್​​ 28: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕಾರಣ ಗುಂಡಿನ ದಾಳಿ ನಡೆಸಿ ವಿಕೃತ ಕಾಮಿಯೋರ್ವನನ್ನು ಬಂಧಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಹುಣಸೆಯ ಟೆರ್ರಾಫಾರಂ ಬಳಿ ನಡೆದಿದೆ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ನಿವಾಸಿ ಬೆಟ್ಟ ನರೇಶ್ ಬಂಧಿತ ಆರೋಪಿಯಾಗಿದ್ದು, ನರೇಶ್ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಅರೆಸ್ಟ್​​ ಮಾಡಿದ್ದಾರೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ, ಅತ್ಯಾಚಾರ ಯತ್ನ ಸೇರಿ ಆರೋಪಿ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು ಎನ್ನಲಾಗಿದೆ.

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆರೋಪಿ ಬೆಟ್ಟ ನರೇಶ್​​ನ ಬಂಧನಕ್ಕಾಗಿ ಪೊಲೀಸರು ತೆರಳಿದ್ದರು. ಆದರೆ ಈ ವೇಳೆ ಮೊಂಡಾಟ ತೋರಿರುವ ಆತ ಅವರ ಮೇಲೆಯೇ ಹಲ್ಲೆಗೆ ಯತ್ನ ನಡೆಸಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು‌ ಹಾರಿಸಿ ವಾರ್ನಿಂಗ್ ನೀಡಿದರೂ ಎಚ್ಚೆತ್ತುಕೊಳ್ಳದ ಆರೋಪಿ ಅಟ್ಯಾಕ್​​ ಮಾಡಿ ಎಸ್ಕೇಪ್​​ ಆಗಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಯ ಅನಿವಾರ್ಯತೆಯಿಂದಾಗಿ ಚಿಕ್ಕಜಾಲ ಪೊಲೀಸ್​​ ಇನ್​​​ಸ್ಪೆಕ್ಟರ್​ ಮಲ್ಲಿಕಾರ್ಜುನ್​​ ಅವರು ಫೈರಿಂಗ್​​ ಮಾಡಿದ್ದಾರೆ. ನರೇಶ್​​ ಕಾಲಿಗೆ ಗುಂಡು ತಾಗಿದೆ. ಆರೋಪಿ ಮತ್ತು ಗಾಯಗೊಂಡ ಪೊಲೀಸರಿಗೆ ಯಲಹಂಕ‌ ಬಳಿಯ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸಿಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಅನುಮಾನದ ಭೂತಕ್ಕೆ ಯುವತಿ ಬಲಿ: ರೆಜೆನ್ಸಿ ಲಾಡ್ಜ್‌ನಲ್ಲಿ ಕೇರಳ ಮೂಲದ ಯುವತಿಯನ್ನು ಕೊಂದ ಪ್ರಿಯಕರ

ಇನ್ನು ವಿಕೃತ ಕಾಮಿಯಾಗಿರುವ ಈ ನರೇಶ್​​, ಮಹಿಳೆಯರ‌‌ ಪಿಜಿಗೆ ನುಗ್ಗಿ ಖಾಸಗಿ ಅಂಗ ಪ್ರದರ್ಶನ ಮಾಡ್ತಿದ್ದ. ನಿನ್ನೆಯೂ ಚಿಕ್ಕಜಾಲ ಮತ್ತು ಯಲಹಂಕದಲ್ಲಿನ‌ ಖಾಸಗಿ ಮಹಿಳಾ ಪಿಜಿಗಳಿಗೆ ನುಗ್ಗಿದ್ದ ಈತ ಇದೇ ರೀತಿ ಮಾಡಿ ಮೊಬೈಲ್ ಕಸಿದುಕೊಂಡಿದ್ದ. ಒರ್ವ ಯುವತಿಯ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದ. ಒಂದೇ ದಿನ ನಡೆದ ಎರಡು ಪ್ರಕರಣದಿಂದ‌ ಪಿಜಿಯಲ್ಲಿನ ಯುವತಿಯರು ಬೆಚ್ವಿಬಿದ್ದಿದ್ದರು. ಘಟನೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ಆರೋಪಿಯ ಬೆನ್ನು ಬಿದ್ದಿದ್ದರು. ದೇವನಹಳ್ಳಿ ಎಸಿಪಿ ಶ್ರೀಹರ್ಷ ನೇತೃತ್ವದಲ್ಲಿ ನಟೇಶ್ ಬಂಧನಕ್ಕೆಂದು ತೆರಳಲಾಗಿತ್ತು. ಆದರೆ ಆರೋಪಿ ಪೊಲೀಸರ ಮೇಲೆಯೇ ದಾಳಿಗೆ ಮುಂದಾದ ಕಾರಣ ಗುಂಡೇಟು ನೀಡಿ ಅರೆಸ್ಟ್​​ ಮಾಡಲಾಗಿದೆ.​​

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:42 am, Sat, 28 November 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More