ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್

ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಇಂದು ಸಭೆ ಮಾಡಿರುವ ಡಿಜಿ-ಐಜಿಪಿ ಅಲೋಕ್ ಮೋಹನ್ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಡಿಜಿ-ಐಜಿಪಿ ಅಲೋಕ್ ಮೋಹನ್

Updated on: Jun 22, 2023 | 4:11 PM

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರ‌ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು‌ ಸುವ್ಯವಸ್ಥೆ, ಟ್ರಾಫಿಕ್‌ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ದೂರುಗಳಿಗೆ ಸ್ಪಂದನೆ

ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್​ಪಿಗಳಿಗೆ ನಿರ್ದೇಶನ‌ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ

ಠಾಣೆಗಳ ಮುಂದೆ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಕುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚನೆ ನೀಡಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್​ ನಂಬರ್ ಹಾಕದಿರುವ ಬಗ್ಗೆ ದೂರುಗಳಿವೆ. ಫೋನ್ ನಂಬರ್​ ಹಾಕದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಒಂದು ಠಾಣೆಗೆ ದಿಢೀರ್​ ಭೇಟಿ: ಹಿರಿಯ ಅಧಿಕಾರಿಗಳಿಗೆ ಸೂಚನೆ

ಬುಧವಾರ ಕೂಡ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದ ಡಿಜಿ-ಐಜಿಪಿ ಅಲೋಕ್ ಮೋಹನ್​  ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​​ಪಿಗಳಿಗೆ ಪ್ರತಿದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್​ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us