ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಖಡಕ್​ ಸೂಚನೆ ನೀಡಿದ್ದಾರೆ.

ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
Follow us
|

Updated on:Jun 21, 2023 | 9:52 PM

ಬೆಂಗಳೂರು: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಸೂಚನೆ ನೀಡಿದ್ದಾರೆ. ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ಪ್ರತಿ ದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಹೆಡ್​ ಕಾನ್ಸ್​ಟೇಬಲ್, ಕಾನ್ಸ್​ಟೇಬಲ್​ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್​ಪಿ ವಾರದಲ್ಲಿ ಒಂದು ದಿನ ನೈಟ್​ ರೌಂಡ್ಸ್ ಮಾಡಬೇಕು. ನೈಟ್​ ಬೀಟ್​ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್​ ಅವರು ಮೇ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಆಯ್ತು, ಇನ್ನು ದುಬಾರಿಯಾಗಲಿದೆ ಅಕ್ಕಿ; ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ

ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 21 June 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ