ನಗರದಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಟ್ರಾಫಿಕ್ ಪೊಲೀಸರು ಬೇಕಾಬಿಟ್ಟಿ ವಾಹನಗಳನ್ನು ತಡೆಯುವಂತಿಲ್ಲ.

ನಗರದಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ
ಸಂಗ್ರಹ ಚಿತ್ರ
TV9kannada Web Team

| Edited By: Ayesha Banu

Jun 27, 2022 | 4:26 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆ(Bengaluru Traffic Police) ನಿರ್ವಹಣೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಮತ್ತೊಂದೆಡೆ ಟ್ವೀಟ್ ಮೂಲಕ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಡಿಜಿ&ಐಜಿಪಿ ಪ್ರವೀಣ್ ಸೂದ್(DG IGP Praveen Sood) ಸೂಚನೆ ನೀಡಿದ್ದಾರೆ.

ಸಂಚಾರ ದಟ್ಟಣೆ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆಗೆ ಡಾ.ರಜನೀಶ್ ಗೋಯಲ್ ಮಹತ್ವದ ಸಭೆ ನಡೆಸಿದ್ದಾರೆ. ಸರ್ಕಾರದ ಹೆಚ್ಚುವರಿ‌ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರ ಪೋಲಿಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಜಯರಾಂ, ಬಿಎಂಆರ್ ಸಿಎಲ್ ನ ಎಂಡಿ ಅಂಜುಂ ಪರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಸಂಚಾರಿ ಪೋಲಿಸ್ ಜಂಟಿ ಆಯುಕ್ತ ರವಿಕಾಂತೆ ಗೌಡ, ಸ್ಮಾರ್ಟ್ ಸಿಟಿ ಎಂಡಿ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕ ಸೂರ್ಯ ಸೇನ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಇನ್ನು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಟ್ರಾಫಿಕ್ ಪೊಲೀಸರು ಬೇಕಾಬಿಟ್ಟಿ ವಾಹನಗಳನ್ನು ತಡೆಯುವಂತಿಲ್ಲ. ಸುಖಾಸುಮ್ಮನೆ ವಾಹನಗಳನ್ನ ತಡೆದು ಪರಿಶೀಲಿಸದಂತೆ ಸೂಚನೆ ನೀಡಿದ್ದಾರೆ. ಡ್ರಂಕ್ & ಡ್ರೈವ್ ಮಾಡುವವರನ್ನು ಮಾತ್ರ ತಪಾಸಣೆ ಮಾಡಬೇಕು. ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಆದ್ರೆ ಸುಖಾಸುಮ್ಮನೆ ವಾಹನ ತಡೆದು ಪರಿಶೀಲನೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದಿದೆ. ಹೀಗಾಗಿ ವಾಹನಗಳನ್ನು ತಡೆಯದಂತೆ ಸಂಚಾರಿ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಡಿಜಿಪಿ ಪ್ರವೀಣ್ ಸೂದ್ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದಾಖಲೆಗಳ ಪರಿಶೀಲನೆ ವಿಷಯದಲ್ಲಿ ನಿಯಮ ಉಲ್ಲಂಘನೆ ಆಗಿದ್ದಲ್ಲಿ ಸ್ಥಳ, ದಿನಾಂಕ ಹಾಗೂ ಸಮಯವನ್ನು ತಿಳಿಸಿ ನಾವು ಕೂಡಲೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.

ಮಾಹಿತಿ ತಂತ್ರಜ್ಞಾನ ಬರದಿದ್ದರೆ ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ ಇನ್ನು ನಗರದ ಟ್ರಾಫಿಕ್ ಜಾಮ್ ಬಗ್ಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿಕೆ ನೀಡಿದ್ದು ಮಾಹಿತಿ ತಂತ್ರಜ್ಞಾನ ಬರದಿದ್ದರೆ ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ. ಬೆಂಗಳೂರಿಗೆ ಐಟಿ ಬರದಿದ್ದರೆ ಸಂಚಾರ ದಟ್ಟಣೆ ಇರುತ್ತಿರಲಿಲ್ಲ. ಆದರೆ ನಮ್ಮ ಮಕ್ಕಳು ನಮ್ಮ ಜೊತೆಯೇ ಇದ್ದಾರೆ. ಮೊದಲೆಲ್ಲಾ ಕೆಲಸ ಹುಡುಕಿಕೊಂಡು ಬೇರೆ ಕಡೆ ಹೋಗಬೇಕಿತ್ತು. ಈಗ ನಮ್ಮ ಮಕ್ಕಳಿಗೆ ಬೆಂಗಳೂರಿನಲ್ಲೇ ಉದ್ಯೋಗ ಸಿಗುತ್ತಿದೆ. ಇಲ್ಲೇ ಇದ್ದು ಕನ್ನಡದ ಹುಡುಗಿಯರನ್ನೇ ಮದುವೆಯಾಗುತ್ತಿದ್ದಾರೆ. ಐಟಿ ಬೆಳವಣಿಗೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕೊಡುಗೆ ಅಪಾರ. ಹುಬ್ಬಳ್ಳಿಯಲ್ಲಿ ಕೂಡ ಬೆಂಗಳೂರಿನ ರೀತಿ ಅಭಿವೃದ್ಧಿ ಆಗಲಿ. ಸಿಎಂ ಬಸವರಾಜ ಬೊಮ್ಮಾಯಿ‌ ಅವರಲ್ಲಿ ಮನವಿ ಮಾಡ್ತೇನೆ ಎಂದು ಸಮಾರಂಭವೊಂದರಲ್ಲಿ ಸುಧಾ ಮೂರ್ತಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದ ಅಕ್ಕುಂದಾದಲ್ಲಿ ಕ್ವಾರಿ ನಡೆಸುತ್ತಿರುವರಿಗೆ ಜನರ ಸುರಕ್ಷತೆ ಬಗ್ಗೆ ಕಾಳಜಿ ಇದ್ದಂತಿಲ್ಲ!

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada