AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರೇ ಅಪರಾಧಗಳಲ್ಲಿ ಶಾಮೀಲು: ಡಿಜಿ, ಐಜಿಪಿ ಸಲೀಂರಿಂದ ಖಾಕಿ, ಹಿರಿಯ ಅಧಿಕಾರಿಗಳಿಗೆ ಬಂತು ಖಡಕ್ ಎಚ್ಚರಿಕೆ

ಬೆಂಗಳೂರಿನಲ್ಲಿ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಶಾಮೀಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಡಿಜಿಪಿ ಸಲೀಂ ಇಲಾಖೆ ಘನತೆ ಕಾಪಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ಸಿಬ್ಬಂದಿ ಮೇಲೆ ನಿಗಾ ವಹಿಸಿ, ಅಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ದುರ್ನಡತೆ ತೋರಿದರೆ ಕಠಿಣ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸರೇ ಅಪರಾಧಗಳಲ್ಲಿ ಶಾಮೀಲು: ಡಿಜಿ, ಐಜಿಪಿ ಸಲೀಂರಿಂದ ಖಾಕಿ, ಹಿರಿಯ ಅಧಿಕಾರಿಗಳಿಗೆ ಬಂತು ಖಡಕ್ ಎಚ್ಚರಿಕೆ
ಡಿಜಿ, ಐಜಿಪಿ ಸಲೀಂ
ಗಣಪತಿ ಶರ್ಮಾ
|

Updated on: Dec 06, 2025 | 6:38 AM

Share

ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನಲ್ಲಿ (Bengaluru) ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡಿಜಿ ಹಾಗೂ ಐಜಿಪಿ ಸಲೀಂ ಕೆಲವು ಕ್ರಮಗಳನ್ನು ಅನುಸುರಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸರೇ ಕ್ರೈಂನಲ್ಲಿ ಶಾಮೀಲಾಗುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದಿರುವ ಅವರು, ಅಪರಾಧ ಕೃತ್ಯದಲ್ಲಿ ಶಾಮೀಲಾಗುವ ಅಧಿಕಾರಿ ಅಥವಾ ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಠಿಣ ಶಿಸ್ತಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜ್ಞಾಪನಾ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ. ಅಲ್ಲದೆ, ಘಟಕಾಧಿಕಾರಿಗಳಿಗೆ ಹಲವು ಅಂಶಗಳ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಡಿಜಿ, ಐಜಿಪಿ ಸಲೀಂ ಪೊಲೀಸರಿಗೆ ನೀಡಿರುವ ಸೂಚನೆ ಏನು?

  1. ಘಟಕದ ಎಲ್ಲಾ ಅಧಿಕಾರಿಗಳು ಅಧೀನದ ಪೊಲೀಸ್ ಸಿಬ್ಬಂದಿಯವರ ಮೇಲೆ ನಿಗಾ ವಹಿಸಬೇಕು.
  2. ನೈತಿಕ ಮಾನದಂಡಗಳು, ಕಾನೂನುಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ , ಅಪರಾಧಗಳ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು.
  3. ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
  4. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ವರ್ತನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡಬೇಕು.
  5. ಇಲಾಖೆಯ ಘನತೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸಮಗ್ರತೆಯ ಸಂಸ್ಕೃತಿಯು ಅಧಿಕಾರಿ ಮತ್ತು ಸಿಬ್ಬಂದಿಗಳ ಸಮಾನ ಹೊಣೆಗಾರಿಕೆಯಾಗಿರುತ್ತದೆ.
  6. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ಮನೋಬಲ ಕಗ್ಗುವಿಕೆಯನ್ನು ಮತ್ತು ಇತರ ನೈತಿಕ ಲೋಪದೋಷಗಳಿಗೆ ಕಾರಣವಾಗುವ ಅಂಶಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು.
  7. ಪ್ರಸ್ತುತ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.
  8. ಈ ನೀತಿ ಸಂಹಿತೆಯು ಅಡ್ಡದಾರಿಗಳಿಗೆ ಆಸ್ಪದವಾಗದಂತೆ ಕ್ರಮವಹಿಸಬೇಕು. ಇಲಾಖೆಯಲ್ಲಿ ದುರ್ನಡತೆಯನ್ನು ತಡೆಯುವ ಮೇಲ್ಕಂಡ ಎಲ್ಲಾ ಕ್ರಮಗಳನ್ನು ಅನುಷ್ಠಾನಗೊಳಿಸಲು ಸೂಚನೆ.
  9. ಅನುಷ್ಠಾನಗೊಳಿಸುವಲ್ಲಿ ವಿಫಲರಾಗುವ ಘಟಕಾಧಿಕಾರಿಗಳ ವಿರುದ್ಧ ಘೋರ ನಿರ್ಲಕ್ಷತೆ ಎಂದು ಪರಿಗಣನೆ ಮಾಡಲಾಗುತ್ತೆ.
  10. ನಿರ್ಲಕ್ಷ್ಯತೆ ತೋರಿದರೆ‌ ಇಲಾಖಾ ಶಿಸ್ತಿನ ಕ್ರಮಕ್ಕೆ ಗುರಿಪಡಿಸಲಾಗುವುದು. ಪೊಲೀಸ್ ಇಲಾಖೆಯ ಘನತೆ, ಗೌರವ ಮತ್ತು ಸಮಗ್ರತೆಗಳಲ್ಲಿನ ರಾಜಿ ಸಮಂಜಸವಲ್ಲ ಮತ್ತು ಸಹಿಸಲು ಸಾಧ್ಯವಿಲ್ಲ.
  11. ಪೊಲೀಸ್ ಇಲಾಖೆಯ ಹಿರಿಮೆ ಮತ್ತು ಗೌರವಾದರಗಳನ್ನು ಹೆಚ್ಚಿಸುವ ಶಿಸ್ತುಬದ್ಧ, ಜವಾಬ್ದಾರಿಗಳು ಘಟಕಾಧಿಕಾರಿಗಳದ್ದಾಗಿರುತ್ತದೆ
  12. ಇಲಾಖೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂಬುದನ್ನು ನಾವು ಮರೆಯಕೂಡದು ಎಂದು ಎಚ್ಚರಿಕೆ.

ಇದನ್ನೂ ಓದಿ: ಕಳ್ಳತನ, ದರೋಡೆಯಲ್ಲಿ ಖಾಕಿ ಶಾಮೀಲು: ವಿಚಾರಣೆಗೆ ಬಂದಿದ್ದ ಆರೋಪಿಯಿಂದಲೇ ಹಣ ಎಗರಿಸಿದ ಹೆಡ್ ಕಾನ್ಸ್​​ಟೇಬಲ್

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಎಟಿಎಂಗೆ ದುಡ್ಡು ತುಂಬ ವಾಹನದ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್​​​ಸ್ಟೇಬಲ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಇದಾದ ಬಳಿಕ, ಕಳ್ಳತನ ಆರೋಪಿಯೊಬ್ಬನನ್ನು ಬಂಧಿಸಿದ ನಂತರ ಆತನಿಂದಲೇ ಹಣ ವಸೂಲು ಮಾಡಿದ ಆರೋಪ ಬೆಂಗಳೂರಿನ ಒಬ್ಬ ಪೊಲೀಸ್ ಹೆಡ್ ಕಾನ್​​​ಸ್ಟೇಬಲ್ ವಿರುದ್ಧ ಕೇಳಿ ಬಂದಿತ್ತು. ಇಷ್ಟೇ ಅಲ್ಲದೆ ಇಂಥ ಕೆಲವು ಪ್ರಕರಣಗಳು ಇತ್ತೀಚೆಗೆ ವರದಿಯಾಗಿವೆ. ಹೀಗಾಗಿ ಸಲೀಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ: ವಿಕಾಸ್, ಟಿವಿ9 ಬೆಂಗಳೂರು

Follow Us
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ