ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜೂನ್‌ನಲ್ಲಿ ಸಂಚಾರ ಸಾಧ್ಯತೆ

ಧಾರವಾಡ-ಬೆಂಗಳೂರು ಮಾರ್ಗವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜೂನ್‌ನಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಯಿದ್ದು. ಇನ್ನೂ ರೈಲಿನ ಸಮಯ, ಟಿಕೆಟ್ ದರ ಮತ್ತು ವೇಗದ ವಿವರಗಳು ಅಂತಿಮಗೊಂಡಿಲ್ಲ.

ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜೂನ್‌ನಲ್ಲಿ ಸಂಚಾರ ಸಾಧ್ಯತೆ
ಶೀಘ್ರದಲ್ಲೇ ಧಾರವಾಡ-ಬೆಂಗಳೂರು ವಂದೇ ಭಾರತ್​ ಎಕ್ಸಪ್ರೇಸ್​ ರೈಲು ಸೇವೆ ಆರಂಭ ಸಾದ್ಯತೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 29, 2023 | 1:52 PM

ಬೆಂಗಳೂರು: ಕರ್ನಾಟಕದ ಅತ್ಯಂತ ಜನನಿಬಿಡ ಮಾರ್ಗಗಳಲ್ಲಿ ಒಂದಾದ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲು ಜೂನ್‌ನಲ್ಲಿ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆಯಿದೆ. ಈಗಾಗಲೇ ಮೇ ಮೊದಲ ವಾರದಲ್ಲಿ ಧಾರವಾಡ ಮತ್ತು ಬೆಂಗಳೂರು ನಡುವೆ ಪ್ರಾಯೋಗಿಕ ಸಂಚಾರ ನಡೆಸಲು ರೈಲ್ವೆ ಅಧಿಕಾರಿಗಳು ಸಜ್ಜಾಗಿದ್ದಾರೆ. ನೈಋತ್ಯ ರೈಲ್ವೆಯು ಪ್ರಸ್ತುತ ಧಾರವಾಡ ಮತ್ತು ಹುಬ್ಬಳ್ಳಿ ನಡುವಿನ ವಿದ್ಯುದ್ದೀಕರಣ ಕಾಮಗಾರಿಯನ್ನ ಪೂರ್ಣಗೊಳಿಸುತ್ತಿದ್ದು, ಅದು ಪೂರ್ಣಗೊಂಡ ನಂತರ ಎರಡು ನಗರಗಳ ನಡುವೆ ಪ್ರಾಯೋಗಿಕ ಚಾಲನೆಯನ್ನು ಮೊದಲು ಪ್ರಾರಂಭಿಸಲಾಗುತ್ತದೆ ಎಂದಿದ್ದಾರೆ.

ಇನ್ನು ರೈಲ್ವೇ ಇಲಾಖೆ ಪ್ರಕಾರ, ಏಪ್ರಿಲ್‌ನಲ್ಲಿ ಪ್ರಾಯೋಗಿಕ ಚಾಲನೆ ಪ್ರಾರಂಭವಾಗಬೇಕಿತ್ತು. ಆದರೆ ವಿದ್ಯುದ್ದೀಕರಣ ಕಾಮಗಾರಿ ವಿಳಂಬವಾದ ಕಾರಣ ಅದನ್ನು ಮೇ ಗೆ ಮುಂದೂಡಲಾಗಿದೆ. ಈ ವರ್ಷದ ಆರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಏಪ್ರಿಲ್‌ನಲ್ಲಿ ಬೆಂಗಳೂರು ಮತ್ತು ಧಾರವಾಡಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಪರ್ಕ ಕಲ್ಪಿಸಬೇಕಿತ್ತು. ಆದರೆ, ಎರಡು ತಿಂಗಳು ವಿಳಂಬವಾಗಿದೆ ಎಂದು ಹೇಳಿದ್ದರು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜಕಾರಣಿಗಳು ಹೊಸ ಯೋಜನೆಗಳನ್ನು ಉದ್ಘಾಟನೆ ಮಾಡುವಂತಿಲ್ಲ. ಈ ಕಾರಣದಿಂದಾಗಿ ಜೂನ್‌ನಲ್ಲಿ ವಾಣಿಜ್ಯ ಸಂಚಾರ ಪ್ರಾರಂಭವಾಗಬಹುದು. ರೈಲು ಸಮಯ, ಟಿಕೆಟ್ ದರ ಮತ್ತು ವೇಗದ ವಿವರಗಳನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ ಎಂದರು.

ಇದನ್ನೂ ಓದಿ:Vande Bharat Express: ಪ್ರಾಯೋಗಿಕ ಸಂಚಾರ ನಡೆಸಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

ಕಳೆದ ವರ್ಷ ನವೆಂಬರ್‌ನಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಇದು ದಕ್ಷಿಣದ ಮೊದಲ ಸೆಮಿ ಹೈಸ್ಪೀಡ್ ರೈಲಾಗಿದೆ. ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮೈಸೂರು ಮತ್ತು ಚೆನ್ನೈ ನಡುವೆ ಚಲಿಸುತ್ತಿದ್ದು, ಈ ಹೈಸ್ಪೀಡ್​ಯಿಂದ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಉದ್ಘಾಟನೆಗೊಂಡು ನಂತರ ಚೆನ್ನೈಗೆ ಆಗಮಿಸಿತ್ತು. ಅದ್ದೂರಿ ಸಮಾರಂಭದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:51 pm, Sat, 29 April 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ