ಬೆಂಗಳೂರು: ಕರ್ನಾಟಕದ ಅತ್ಯಂತ ಜನನಿಬಿಡ ಮಾರ್ಗಗಳಲ್ಲಿ ಒಂದಾದ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲು ಜೂನ್‌ನಲ್ಲಿ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆಯಿದೆ. ಈಗಾಗಲೇ ಮೇ ಮೊದಲ ವಾರದಲ್ಲಿ ಧಾರವಾಡ ಮತ್ತು ಬೆಂಗಳೂರು ನಡುವೆ ಪ್ರಾಯೋಗಿಕ ಸಂಚಾರ ನಡೆಸಲು ರೈಲ್ವೆ ಅಧಿಕಾರಿಗಳು ಸಜ್ಜಾಗಿದ್ದಾರೆ. ನೈಋತ್ಯ ರೈಲ್ವೆಯು ಪ್ರಸ್ತುತ ಧಾರವಾಡ ಮತ್ತು ಹುಬ್ಬಳ್ಳಿ ನಡುವಿನ ವಿದ್ಯುದ್ದೀಕರಣ ಕಾಮಗಾರಿಯನ್ನ ಪೂರ್ಣಗೊಳಿಸುತ್ತಿದ್ದು, ಅದು ಪೂರ್ಣಗೊಂಡ ನಂತರ ಎರಡು ನಗರಗಳ ನಡುವೆ ಪ್ರಾಯೋಗಿಕ ಚಾಲನೆಯನ್ನು ಮೊದಲು ಪ್ರಾರಂಭಿಸಲಾಗುತ್ತದೆ ಎಂದಿದ್ದಾರೆ.
ಇನ್ನು ರೈಲ್ವೇ ಇಲಾಖೆ ಪ್ರಕಾರ, ಏಪ್ರಿಲ್‌ನಲ್ಲಿ ಪ್ರಾಯೋಗಿಕ ಚಾಲನೆ ಪ್ರಾರಂಭವಾಗಬೇಕಿತ್ತು. ಆದರೆ ವಿದ್ಯುದ್ದೀಕರಣ ಕಾಮಗಾರಿ ವಿಳಂಬವಾದ ಕಾರಣ ಅದನ್ನು ಮೇ ಗೆ ಮುಂದೂಡಲಾಗಿದೆ. ಈ ವರ್ಷದ ಆರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಏಪ್ರಿಲ್‌ನಲ್ಲಿ ಬೆಂಗಳೂರು ಮತ್ತು ಧಾರವಾಡಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಪರ್ಕ ಕಲ್ಪಿಸಬೇಕಿತ್ತು. ಆದರೆ, ಎರಡು ತಿಂಗಳು ವಿಳಂಬವಾಗಿದೆ ಎಂದು ಹೇಳಿದ್ದರು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜಕಾರಣಿಗಳು ಹೊಸ ಯೋಜನೆಗಳನ್ನು ಉದ್ಘಾಟನೆ ಮಾಡುವಂತಿಲ್ಲ. ಈ ಕಾರಣದಿಂದಾಗಿ ಜೂನ್‌ನಲ್ಲಿ ವಾಣಿಜ್ಯ ಸಂಚಾರ ಪ್ರಾರಂಭವಾಗಬಹುದು. ರೈಲು ಸಮಯ, ಟಿಕೆಟ್ ದರ ಮತ್ತು ವೇಗದ ವಿವರಗಳನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ ಎಂದರು.
ಇದನ್ನೂ ಓದಿ:Vande Bharat Express: ಪ್ರಾಯೋಗಿಕ ಸಂಚಾರ ನಡೆಸಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
ಕಳೆದ ವರ್ಷ ನವೆಂಬರ್‌ನಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಇದು ದಕ್ಷಿಣದ ಮೊದಲ ಸೆಮಿ ಹೈಸ್ಪೀಡ್ ರೈಲಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮೈಸೂರು ಮತ್ತು ಚೆನ್ನೈ ನಡುವೆ ಚಲಿಸುತ್ತಿದ್ದು, ಈ ಹೈಸ್ಪೀಡ್ಯಿಂದ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಉದ್ಘಾಟನೆಗೊಂಡು ನಂತರ ಚೆನ್ನೈಗೆ ಆಗಮಿಸಿತ್ತು. ಅದ್ದೂರಿ ಸಮಾರಂಭದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡದ್ದರು.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:51 pm, Sat, 29 April 23