AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bike Accident: ಬೆಂಗಳೂರಿನಲ್ಲಿ ಕಾಂಗ್ರೆಸ್​ ಶಾಸಕ ಪುತ್ರನ ಬೈಕ್ ಅಪಘಾತ

ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಪುತ್ರ ಚಲಾಯಿಸುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ ಅಪಘಾತವಾಗಿದೆ.

Bike Accident: ಬೆಂಗಳೂರಿನಲ್ಲಿ ಕಾಂಗ್ರೆಸ್​ ಶಾಸಕ ಪುತ್ರನ ಬೈಕ್ ಅಪಘಾತ
ವಿನಯ್ ಕುಲಕರ್ಣಿ, ಪುತ್ರ ಹೇಮಂತ್
TV9 Web
| Edited By: |

Updated on:Apr 11, 2024 | 9:36 PM

Share

ಬೆಂಗಳೂರು, (ಏಪ್ರಿಲ್ 11): ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ(Dharwad Congress MLA Vinay Kulkarni)  ಪುತ್ರನ ಬೈಕ್ ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ( Bengaluru Outer Ring Road) ಅಪಘಾತವಾಗಿದ್ದು, ವಿನಯ್ ಕುಲಕರ್ಣಿ ಪುತ್ರ ಹೇಮಂತ್​ಗೆ ಗಾಯಗಳಾಗಿವೆ. ಇಂದು ಬೆಳಿಗ್ಗೆ ಐದು ಗಂಟೆಗೆ ತೆರಳುತಿದ್ದ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ಬೈಕ್​ ಉರುಳಿ ಬಿದ್ದಿದೆ. ಪರಿಣಾಮ ಹೇಮಂತ್ ಕಾಲಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ – ಓಮ್ನಿ ಅಪಘಾತ: ಮೂವರು ದಾರುಣ ಸಾವು

ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದರು. ಇನ್ನೂ ಬಸ್ಸಿನ ಮುಂಭಾಗವು ಛಿದ್ರಗೊಂಡಿತ್ತು. ಘಟನೆಯಲ್ಲಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 9:11 pm, Thu, 11 April 24