ಕೊರೊನಾ ಕಡಿಮೆಯಾಗುತ್ತಿದ್ದಂತೆ ಮಧುಮೇಹಿಗಳ ಸಂಖ್ಯೆ ಹೆಚ್ಚಳ; 27,990 ಜನರಲ್ಲಿ ಮಧುಮೇಹ ಪತ್ತೆ

ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ 12.80 ಲಕ್ಷ ಜನರಿಗೆ ತಪಾಸಣೆ ಮಾಡಲಾಗಿದ್ದು, ಈ ಪೈಕಿ 27,990 ಜನರಲ್ಲಿ ಮಧುಮೇಹ ಪತ್ತೆಯಾಗಿದೆ. ಇನ್ನೂ ಮಧುಮೇಹ ಕೇಸ್​ಗಳು ಏರಿಕೆಯಾಗಲು ಕಾರಣ ಕೊರೊನಾ ಬಳಿಕ ಜನರ ಜೀವನಶೈಲಿಯಲ್ಲಿನ ಬದಲಾವಣೆ.

ಕೊರೊನಾ ಕಡಿಮೆಯಾಗುತ್ತಿದ್ದಂತೆ ಮಧುಮೇಹಿಗಳ ಸಂಖ್ಯೆ ಹೆಚ್ಚಳ; 27,990 ಜನರಲ್ಲಿ ಮಧುಮೇಹ ಪತ್ತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Nov 15, 2021 | 11:52 AM

ಬೆಂಗಳೂರು: ಕೊರೊನಾ ಕಡಿಮೆಯಾಗುತ್ತಿದ್ದಂತೆ ಮಧುಮೇಹಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ತಪಾಸಣೆಗಾಗಿ ಆಸ್ಪತ್ರೆಗೆ ಹೋಗುವವರ ಸಂಖ್ಯೆಯಲ್ಲಿಯೂ ಏರಿಕೆ ಕಂಡುಬಂದಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ 12.80 ಲಕ್ಷ ಜನರಿಗೆ ತಪಾಸಣೆ ಮಾಡಲಾಗಿದ್ದು, ಈ ಪೈಕಿ 27,990 ಜನರಲ್ಲಿ ಮಧುಮೇಹ (Diabetes) ಪತ್ತೆಯಾಗಿದೆ. ಇನ್ನೂ ಮಧುಮೇಹ ಕೇಸ್​ಗಳು ಏರಿಕೆಯಾಗಲು ಕಾರಣ ಕೊರೊನಾ ಬಳಿಕ ಜನರ ಜೀವನಶೈಲಿಯಲ್ಲಿನ (lifestyle) ಬದಲಾವಣೆ. ವ್ಯಾಯಾಮ ಕೊರತೆ, ಬದಲಾಗಿರುವ ಆಹಾರ ಪದ್ಧತಿ, ಬೊಜ್ಜು ಹೆಚ್ಚಾಗಿ ಜನರು ಮಧುಮೇಹಕ್ಕೆ ತುತ್ತಾಗುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸೋಂಕಿತರೇ ಹೆಚ್ಚಾಗಿ ಮಧುಮೇಹಕ್ಕೆ ತುತ್ತಾಗುತ್ತಿದ್ದಾರೆ ಎರಡನೇ ಅಲೆ ನಿಯಂತ್ರಣಗೊಳ್ಳುತ್ತಿದ್ದಂತೆ ಕೊವಿಡೇತರ ಚಿಕಿತ್ಸೆಗಳು ಹೆಚ್ಚಳವಾಗಿವೆ. ಅದರಲ್ಲೂ ಕೊರೊನಾ ಸೋಂಕಿತರೇ ಹೆಚ್ಚಾಗಿ ಮಧುಮೇಹಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳಲ್ಲಿಯೂ ಕೂಡ ಟೈಪ್-2 ಮಧುಮೇಹ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ 5 ರಿಂದ 8 ವರ್ಷದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮಧುಮೇಹಕ್ಕೆ ತುತ್ತಾಗುತ್ತಿದ್ದಾರೆ.

Diabetes

ಇನ್ನು ಮಧುಮೇಹದ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಭಾರಿ ತೊಂದರೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಮಾಡಿದಲ್ಲಿ ಮಾತ್ರ ನಿಂಯತ್ರಿಸಲು ಸಾಧ್ಯ. ಸಮತೋಲನ ಆಹಾರ ಸೇವನೆ, ದೈಹಿಕ ಚಟುವಟಿಕೆ ಜೊತಗೆ ಉತ್ತಮ ಜೀವನ ಅಳವಡಿಸಿಕೊಳ್ಳಬೇಕು, ಅಲ್ಲದೇ ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರಳಿತದ ಮೇಲೆ ಹೆಚ್ಚು ಗಮನವಿರಬೇಕು.

ಮಧುಮೇಹಕ್ಕೆ ಕಾರಣ ಕಳಪೆ ಜೀವನ ಶೈಲಿ, ಬೊಜ್ಜು ಮೈ ಅಥವಾ ಸ್ಥೂಲಕಾಯ ಮಧುಮೇಹಕ್ಕೆ ಕಾರಣವಾಗುತ್ತಿದೆ. ಯಾವುದೇ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೋಳ್ಳದೇ ಇರುವುದು, ಕಂಪ್ಯೂಟರ್, ಮೊಬೈಲ್, ಟಿವಿ ಎದುರು ಬಳಹ ಕಾಲ ಕುಳಿತುಕೊಳ್ಳುವುದು, ಆಹಾರ ಪದ್ಧತಿಗಳಿಂದಾಗಿ ಮಧುಮೇಹ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಕೊರೊನಾ ಕಂಟಕ; ಕೊವಿಡ್ ಮಾರ್ಗಸೂಚಿಗಳಿಂದ ಮಾನಸಿಕ ಒತ್ತಡ ಹೆಚ್ಚಳ

ಬೆಂಗಳೂರು: ನಿರಂತರವಾಗಿ ಚಳಿ ಹಾಗೂ ಮಳೆ; ಡೆಂಗ್ಯೂ, ಚಿಕನ್ ಗುನ್ಯಾ ಕೇಸ್ ಹೆಚ್ಚಳ

Published On - 11:32 am, Mon, 15 November 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ