AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್: ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ

ಐಟಿ ನಗರಿ ಬೆಂಗಳೂರಿನಲ್ಲಿ ಸೈಬರ್ ಅಪರಾಧಿಗಳು ತಮ್ಮ ಕುತಂತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ. 'ಡಿಜಿಟಲ್ ಅರೆಸ್ಟ್' ಎಂಬ ಹೊಸ ವಂಚನೆಯ ಮೂಲಕ ಇಬ್ಬರು ಬಾಲ್ಯ ಸ್ನೇಹಿತೆಯರನ್ನ ವಿವಸ್ತ್ರಗೊಳಿಸಿ ಕಿರುಕುಳ ನೀಡಿ ಬಳಿಕ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಮನಿಲಾಂಡರಿಂಗ್ ಆರೋಪದ ನೆಪದಲ್ಲಿ ವಿಡಿಯೋ ಕರೆ ಮಾಡಿ ಸೈಬರ್ ವಂಚಕರು ಈ ಕೃತ್ಯ ಎಸಗಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್: ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ
Women
TV9 Web
| Edited By: |

Updated on: Jul 23, 2025 | 11:18 PM

Share

ಬೆಂಗಳೂರು (ಜುಲೈ.23): ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಬೆಂಗಳೂರಿನಲ್ಲಿ ಇಬ್ಬರು ಸ್ನೇಹಿತೆಯರಿಗೆ (Friends)  ‘ಡಿಜಿಟಲ್ ಅರೆಸ್ಟ್’ (digital arrest)ಹೆಸರಿನಲ್ಲಿ ವಿವಸ್ತ್ರಗೊಳಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಣ ಅಕ್ರಮ ವರ್ಗಾವಣೆ, ಕಳ್ಳ ಸಾಗಣೆಯ ಆರೋಪದ ಹೆಸರಿನಲ್ಲಿ ಕರೆ ಮಾಡಿದ್ದ ಸೈಬರ್‌ ವಂಚಕನೊಬ್ಬ (cybercrime), ಡಿಜಿಟಲ್ ಅರೆಸ್ಟ್‌ ಹೆಸರಿನಲ್ಲಿ ಬೆದರಿಸಿ ದೈಹಿಕ ತಪಾಸಣೆ ನೆಪದಲ್ಲಿ ಸ್ನೇಹಿತೆಯರನ್ನು ಬೆತ್ತಲೆಗೊಳಿಸಿ ಕಿರುಕುಳ ನೀಡಿದ್ದು, ಬಳಿಕ 58 ಸಾವಿರ ರೂಪಾಯಿ ಸುಲಿಗೆ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು (Bengaluru) ಪೂರ್ವ ವಿಭಾಗದ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮನಿಲಾಂಡರಿಂಗ್ ಆರೋಪದ ನೆಪದಲ್ಲಿ ವಿಡಿಯೋ ಕರೆ ಮಾಡಿದ ಸೈಬರ್ ವಂಚಕ, ದೈಹಿಕ ತಪಾಸಣೆ ನೆಪದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಸತತ 9 ಗಂಟೆಗಳ ಕಾಲ ಕಿರುಕುಳ ನೀಡಿದ್ದಾನೆ. ಬಳಿಕ 58 ಸಾವಿರ ಹಣ ಪೀಕಿ ಮತ್ತಷ್ಟು ಹಣ ನೀಡುವಂತೆ ಕಿರುಕುಳ ನೀಡಿದ್ದಾನೆ. ಕೊನೆ ಸ್ನೇಹಿತೆಯರು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯರು ನೀಡಿದ ದೂರಿನ ಮೇರೆಗೆ ಸೈಬರ್‌ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 318(4) ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ, ತಂದೆ-ಮಗನ ಕತ್ತು ಸೀಳಿ ಹತ್ಯೆ

ಥಾಯ್ಲೆಂಡ್‌ನಲ್ಲಿ ಬೋಧಕಿಯಾಗಿರುವ ಮಹಿಳೆ, ತನ್ನ ಬಾಲ್ಯ ಸ್ನೇಹಿತೆಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಸ್ನೇಹಿತೆಯ ಮನೆಯಲ್ಲಿ ತಂಗಿದ್ದ ಮಹಿಳೆಗೆ ಜುಲೈ 17ರಂದು ಬೆಳಿಗ್ಗೆ 11ರ ಸುಮಾರಿಗೆ ಅನಾಮಧೇಯ ನಂಬರ್‌ನಿಂದ ಕರೆಯೊಂದು ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ, ತಾನು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ‘ಜೆಟ್ ಏರ್‌ವೇಸ್‌’ಗೆ ಸಂಬಂಧಿಸಿದ ಹಣ ವರ್ಗಾವಣೆಯಲ್ಲಿ ತಾವು ಭಾಗಿಯಾಗಿದ್ದೀರಿ’ ಎಂದು ಆರೋಪಿಸಿದ್ದ. ಅಲ್ಲದೇ ಅಕ್ರಮ ಹಣ ವರ್ಗಾವಣೆ, ಕಳ್ಳಸಾಗಣೆ ಹಾಗೂ ಹತ್ಯೆ ಪ್ರಕರಣದಲ್ಲೂ ತಮ್ಮ ಹೆಸರಿದೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳು ತಮ್ಮ ಬಳಿಯಿವೆ ಎಂದು ಹೇಳಿದ್ದ. ಇದರಿಂದ ಆಘಾತಕ್ಕೆ ಒಳಗಾದ ಮಹಿಳೆ, ತಾನು ಕೆಲವು ದಿನಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡಿದ್ದೇನೆ. ಆ ಪ್ರಕರಣಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ವಿವರಿಸಿದ್ದರು. ಮಹಿಳೆಯ ಡೆಬಿಟ್‌ ಕಾರ್ಡ್ ನಂಬರ್‌ ಅನ್ನು ಸರಿಯಾಗಿ ಹೇಳಿದ್ದ ಆರೋಪಿ, ಇಬ್ಬರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದ’ ಎಂದು ಎಂದು ತಿಳಿದುಬಂದಿದೆ.

ಅದಾದ ಕೆಲವೇ ಹೊತ್ತಿನಲ್ಲಿ ಮಹಿಳೆಯರಿಗೆ ನಕಲಿ ಬಂಧನದ ವಾರಂಟ್‌ ಕಳುಹಿಸಿದ್ದ ವಂಚಕ, ಬ್ಯಾಂಕ್‌ ಖಾತೆಗಳಲ್ಲಿರುವ ಹಣವನ್ನು ವರ್ಗಾವಣೆ ಮಾಡುವಂತೆಯೂ ಬೆದರಿಕೆ ಹಾಕಿದ್ದ. ಹೆದರಿದ ಮಹಿಳೆಯರು, 58,477 ಅನ್ನು ಆರೋಪಿ ಹೇಳಿದ್ದ ಖಾತೆಗೆ ಹಾಕಿದ್ದರು. ಈ ಪ್ರಕರಣದಿಂದ ಕೈಬಿಡಬೇಕಾದರೆ ದೈಹಿಕ ತಪಾಸಣೆ ನಡೆಸುವುದು ಅಗತ್ಯವಿದೆ ಎಂದು ಹೇಳಿ ಇಬ್ಬರೂ ಸ್ನೇಹಿತೆಯರನ್ನು ಬೆತ್ತಲಾಗುವಂತೆ ಒತ್ತಾಯಿಸಿದ್ದ. ಮೈಮೇಲಿರುವ ಮಚ್ಚೆ ಅಥವಾ ಗುರುತುಗಳನ್ನು ತೋರಿಸುವಂತೆ ಸೂಚಿಸಿದ್ದ. ವಿಧಿ ಇಲ್ಲದೇ ಸಂತ್ರಸ್ತೆಯರು ಬೆತ್ತಲೆಯಾಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ