ಅನುದಾನಿತ, ಖಾಸಗಿ ಕಾಲೇಜುಗಳಿಗೂ ಡಿಜಿಟಲೀಕರಣ ವಿಸ್ತರಣೆ: ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ವಿಕೇಂದ್ರೀಕರಣಕ್ಕೆ ಚಾಲನೆ ಕೊಡಲಾಗಿದೆ. ಶಿಕ್ಷಣ ಕ್ಷೇತ್ರದ ಮೇಲೆ ಸರಕಾರದ ನಿಯಂತ್ರಣ ಇರಬಾರದೆನ್ನುವುದೇ ನಮ್ಮ ಆಶಯವಾಗಿದೆ.

ಅನುದಾನಿತ, ಖಾಸಗಿ ಕಾಲೇಜುಗಳಿಗೂ ಡಿಜಿಟಲೀಕರಣ ವಿಸ್ತರಣೆ: ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 15, 2022 | 6:48 PM

ಬೆಂಗಳೂರು: ಯೂನಿಫೈಡ್‌ ಡೇಟಾ ಮತ್ತು ಡಿಜಿಟಲೀಕರಣಗಳೇ (Digitisation) ಇಡೀ ಜಗತ್ತಿನ ಶಿಕ್ಷಣ ಕ್ಷೇತ್ರದಲ್ಲಿ ನಿರ್ಣಾಯಕ ಶಕ್ತಿಗಳಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡೇ ರಾಜ್ಯದಲ್ಲೂ ಸರಕಾರಿ ಶಿಕ್ಷಣ ಸಂಸ್ಥೆಗಳ ಡಿಜಿಟಲೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೂ ಕಡ್ಡಾಯಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಅಂತರರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ‘ಸೀಮಾತೀತ ಶಿಕ್ಷಣ ಕ್ಷೇತ್ರದಲ್ಲಿ ನಾವೀನ್ಯತೆಯ ಭವಿಷ್ಯ’ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ವಿಕೇಂದ್ರೀಕರಣಕ್ಕೆ ಚಾಲನೆ ಕೊಡಲಾಗಿದೆ. ಶಿಕ್ಷಣ ಕ್ಷೇತ್ರದ ಮೇಲೆ ಸರಕಾರದ ನಿಯಂತ್ರಣ ಇರಬಾರದೆನ್ನುವುದೇ ನಮ್ಮ ಆಶಯವಾಗಿದೆ. ಹೀಗಾಗಿ ಸಂಶೋಧನೆ ಮತ್ತು ಸಹಭಾಗಿತ್ವಗಳಿಗೆ ಹಾಗೂ ಟ್ವಿನ್ನಿಂಗ್ ಪದವಿ ಕೋರ್ಸುಗಳಿಗೆ ಮುಕ್ತ ಅವಕಾಶ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಮರ್ಥ ಕಾಯ್ದೆಯನ್ನೂ ಜಾರಿಗೆ ತರಲಾಗುವುದು ಎಂದು ಅವರು ವಿವರಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಆದ್ಯತೆ ನೀಡುತ್ತಿದೆ. ರಾಜ್ಯದಲ್ಲಿ ಜಾಗತಿಕ ಮಟ್ಟದ ಸೌಲಭ್ಯಗಳಿದ್ದರೂ ಅದರ ಸಮರ್ಪಕ ಉಪಯೋಗವಾಗುತ್ತಿಲ್ಲ. ನಮ್ಮಲ್ಲಿ 20 ಸಾವಿರ ನವೋದ್ಯಮಗಳಿದ್ದು, ಇವು ಶಿಕ್ಷಣದ ಗುಣಮಟ್ಟ ವರ್ಧನೆಗೆ ಕೈಜೋಡಿಸಬೇಕು. ಉದ್ಯಮ ವಲಯವು ಶಿಕ್ಷಣ ಕ್ಷೇತ್ರದ ಜತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ನುಡಿದರು.

ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿವರ್ತನೆಗಳು ತ್ವರಿತ ಗತಿಯಲ್ಲಿ ಸಂಭವಿಸುತ್ತಿವೆ. ಗುಣಮಟ್ಟದ ಶಿಕ್ಷಣ ಮಾತ್ರ 21ನೇ ಶತಮಾನದ ಜ್ಞಾನಾಧಾರಿತ ವ್ಯವಸ್ಥೆಗೆ ಆಧಾರವಾಗಿದೆ. ಇದು ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತಿದೆ. ಹೀಗಾಗಿ ಗುಣಮಟ್ಟ ಮತ್ತು ಉತ್ಕೃಷ್ಟತೆಯೊಂದಿಗೆ ರಾಜಿ ಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಎನ್‌ಇಪಿ ಜಾರಿಯಲ್ಲಿ ರಾಜ್ಯವು ದೇಶಕ್ಕೆ ಪ್ರಥಮ ಸ್ಥಾನದಲ್ಲಿದ್ದೇವೆ. ಹೀಗಾಗಿ ಜಾಗತಿಕ ರಂಗದಲ್ಲಿ ಕರ್ನಾಟಕವು ಪ್ರಸ್ತುತತೆಯನ್ನು ಉಳಿಸಿಕೊಳ್ಳುವಲ್ಲಿ ಗೆದ್ದಿದೆ. ಎನ್‌ಇಪಿ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಒತ್ತು ಕೊಟ್ಟಿದ್ದು, ಇತ್ತೀಚೆಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಜಾರಿಗೆ ತಂದಿರುವ ನಿಯಮಗಳೂ ಇದಕ್ಕೆ ಪುಷ್ಟಿ ನೀಡುವಂತಿವೆ ಎಂದು ಅವರು ಹೇಳಿದರು.

ಕರ್ನಾಟಕವು ಮೊದಲಿನಿಂದಲೂ ಶಿಕ್ಷಣದಲ್ಲಿ ಹೊಸತನಕ್ಕೆ ಗಮನ ನೀಡುತ್ತ ಬಂದಿದೆ. ಈಗ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಶಿಕ್ಷಣದ ಸುಧಾರಣೆಗಾಗಿ ಅಳವಡಿಸಿಕೊಂಡು, ಸುಸ್ಥಿರ ಮತ್ತು ಸಮಾನ ಅಭಿವೃದ್ಧಿಯನ್ನು ಸಾಧಿಸಲು ತಕ್ಕ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ. ರಾಜ್ಯವು ಎಂದಿನಂತೆ ಇಡೀ ಜಗತ್ತಿನ ಪ್ರತಿಭೆಗಳನ್ನು ತನ್ನತ್ತ ಸೆಳೆಯುತ್ತಿದೆ ಎಂದು ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ಐಎಸ್‌ಡಿಸಿ ಕಾರ್ಯ ನಿರ್ವಾಹಕ ನಿರ್ದೇಶಕ ಟಾಮ್‌ ಜೋಸೆಫ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ ತಿಮ್ಮೇಗೌಡ, ಐಎಸ್‌ಡಿಸಿಯ ಕಲಿಕಾ ವಿಭಾಗದ ನಿರ್ದೇಶಕಿ ತೆರೇಸಾ ಜೇಕಬ್ಸ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ