ರಾಜಕೀಯ ಎದುರಾಳಿಗಳನ್ನ ಸೈದ್ಧಾಂತಿಕವಾಗಿ ಎದುರಿಸಲಾಗದ BJP ಇಡಿ, ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಳ್ತಿದೆ -ದಿನೇಶ್ ಗುಂಡೂರಾವ್ ವಾಗ್ದಾಳಿ

| Updated By: ಆಯೇಷಾ ಬಾನು

Updated on: Jun 12, 2022 | 2:56 PM

ED&CBI ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆದ್ರೆ ಸಂವಿಧಾನಿಕ ಸಂಸ್ಥೆಗಳು ಈಗ ಬಿಜೆಪಿಯ ಅಂಗ ಸಂಸ್ಥೆಗಳಾಗಿವೆ. ಮೋದಿ ಪ್ರಧಾನಿಯಾದ ನಂತರ ವಿಪಕ್ಷಗಳ ಮೇಲೆ ಟಾರ್ಗೆಟ್ ಮಾಡಲಾಗುತ್ತಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ED, CBI, IT ದಾಳಿ ನಡೆದಿದೆ.

ರಾಜಕೀಯ ಎದುರಾಳಿಗಳನ್ನ ಸೈದ್ಧಾಂತಿಕವಾಗಿ ಎದುರಿಸಲಾಗದ BJP ಇಡಿ, ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಳ್ತಿದೆ -ದಿನೇಶ್ ಗುಂಡೂರಾವ್ ವಾಗ್ದಾಳಿ
ದಿನೇಶ್ ಗುಂಡೂರಾವ್
Follow us on

ಬೆಂಗಳೂರು: ಸೋನಿಯಾ ಗಾಂಧಿ(Sonia Gandhi), ರಾಹುಲ್ ಗಾಂಧಿಗೆ(Rahul Gandhi) ಇಡಿ(Enforcement Directorate) ನೋಟಿಸ್ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ರಾಜಕೀಯ ಎದುರಾಳಿಗಳನ್ನ ಸೈದ್ಧಾಂತಿಕವಾಗಿ ಎದುರಿಸಲಾಗದ BJP ಇಡಿ, ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಳ್ತಿದೆ. ಸೋನಿಯಾ, ರಾಹುಲ್ಗೆ ಇಡಿ ಸಮನ್ಸ್ ಬಿಜೆಪಿಯ ಕುತಂತ್ರ ಭಾಗ ಎಂದು ವಾಗ್ದಾಳಿ ನಡೆಸಿದ್ದಾರೆ.

ED&CBI ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆದ್ರೆ ಸಂವಿಧಾನಿಕ ಸಂಸ್ಥೆಗಳು ಈಗ ಬಿಜೆಪಿಯ ಅಂಗ ಸಂಸ್ಥೆಗಳಾಗಿವೆ. ಮೋದಿ ಪ್ರಧಾನಿಯಾದ ನಂತರ ವಿಪಕ್ಷಗಳ ಮೇಲೆ ಟಾರ್ಗೆಟ್ ಮಾಡಲಾಗುತ್ತಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ED, CBI, IT ದಾಳಿ ನಡೆದಿದೆ. ಆದರೆ ಒಬ್ಬರೇ ಒಬ್ಬರು ಬಿಜೆಪಿ ನಾಯಕರ ಮೇಲೆ ದಾಳಿ ನಡೆದಿಲ್ಲ. ಹಾಗಾದರೆ ಬಿಜೆಪಿಯವರೇನು ಸಚ್ಛಾರಿತ್ರ್ಯರೆ? ಸದ್ಗುಣ ಸಂಪನ್ನರೆ? ಆಪರೇಷನ್ ಕಮಲದಲ್ಲಿ ಸಾವಿರಾರು ಕೋಟಿ ಹಣ ಕೈಬದಲಾಗಿದೆ. ಜಾರಿ ನಿರ್ದೇಶನಾಲಯದ ಪ್ರಕಾರ ಇದು ಅಕ್ರಮ ಸಂಪತ್ತಲ್ಲವೆ? ಆಪರೇಷನ್ ಕಮಲಕ್ಕೆ ಹೂಡಿಕೆಯಾದ ಹಣದ ಮೂಲ ಯಾವುದು? ಆಳುವ ಸರ್ಕಾರದ ಕೈಗೊಂಬೆಯಾಗಿ ದ್ವೇಷದ ಸಾಧನವಾಗಿರುವ ED ಸಾಂವಿಧಾನಿಕ ಸಂಸ್ಥೆ ಎಂದು ಕರೆಸಿಕೊಳ್ಳುವ ಅರ್ಹತೆಯೇ ಇಲ್ಲ. ದೇಶದಲ್ಲಿ ಆಳುವ ಸರ್ಕಾರವೊಂದು‌ ಸಾಂವಿಧಾನಿಕ ಸಂಸ್ಥೆಗಳನ್ನು ಇಷ್ಟು ಕೀಳುಮಟ್ಟದಲ್ಲಿ ದುರ್ಬಳಕೆ ಮಾಡಿಕೊಂಡ ಉದಾಹರಣೆ ಇಲ್ಲ. ಭಾರತೀಯ ಜನತಾ ಪಕ್ಷದ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿ ನಡೆಯನ್ನು ಪ್ರಜ್ಞಾವಂತ ಸಮಾಜ ಖಂಡಿಸಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೀದರ: ಪೀರ್​ ಪಾಷಾ ಮಸೀದಿಯೇ ಮೂಲ ಅನುಭವ ಮಂಟಪ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಜೂನ್ 2 ರಂದು ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದೆ. ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ್ದು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಟಿಸುತ್ತಿದ್ದು, ಇದು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಎಜೆಎಲ್‌ಗೆ ಭೂಮಿ ಹಂಚಿಕೆಯಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ಜೂನ್ 2 ರಂದು ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿದ್ದು, ಜೂನ್ 8 ರಂದು ಸೋನಿಯಾ ಗಾಂಧಿ ಅವರು ಏಜೆನ್ಸಿಯ ಮುಂದೆ ಹಾಜರಾಗಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:56 pm, Sun, 12 June 22