AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಂವಿಧಾನಿಕ ಹಿಜಾಬ್ ತೀರ್ಪಿಗೆ ಅಸಮ್ಮತಿ: ಕ್ಯಾಂಪಸ್ ಫ್ರಂಟ್ ಅಫ್ ಇಂಡಿಯಾ

ಅಸಂವಿಧಾನಿಕ ತೀರ್ಪಿಗೆ ಅಸಮ್ಮತಿ ಎನ್ನುತ್ತಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ನ್ಯಾಯದ ನಿರೀಕ್ಷೆಯಲ್ಲಿದ್ದ ತೀರ್ಪು ನಿರೀಕ್ಷೆ ಮಾಡಿದ್ವಿ. ಆದರೆ ತೀರ್ಪು ಖೇದಕರ ತೀರ್ಪು ಆಗಿದೆ. ಸರ್ಕಾರದ ಆದೇಶಗಳನ್ನೇ ಕೋರ್ಟ್ ಎತ್ತಿ ಹಿಡಿದಿದೆ ಎಂದು ತಿಳಿಸಿದೆ.

ಅಸಂವಿಧಾನಿಕ ಹಿಜಾಬ್ ತೀರ್ಪಿಗೆ ಅಸಮ್ಮತಿ: ಕ್ಯಾಂಪಸ್ ಫ್ರಂಟ್ ಅಫ್ ಇಂಡಿಯಾ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 21, 2022 | 3:29 PM

Share

ಬೆಂಗಳೂರು: ಹಿಜಾಬ್ (Hijab) ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(Campus Front of India), ಇಂದು ಸುದ್ದಿಗೋಷ್ಠಿ ನಡೆಸಿದೆ. ಅಸಂವಿಧಾನಿಕ ತೀರ್ಪಿಗೆ ಅಸಮ್ಮತಿ ಎನ್ನುತ್ತಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ನ್ಯಾಯದ ನಿರೀಕ್ಷೆಯಲ್ಲಿದ್ದ ತೀರ್ಪು ನಿರೀಕ್ಷೆ ಮಾಡಿದ್ವಿ. ಆದರೆ ತೀರ್ಪು ಖೇದಕರ ತೀರ್ಪು ಆಗಿದೆ. ಸರ್ಕಾರದ ಆದೇಶಗಳನ್ನೇ ಕೋರ್ಟ್(Court) ಎತ್ತಿ ಹಿಡಿದಿದೆ ಎಂದು ತಿಳಿಸಿದೆ.

ಶಿರವಸ್ತ್ರವನ್ನು ಇಸ್ಲಾಂನ ಕಡ್ಡಾಯ ಆಚರಣೆಯೇ ಅಲ್ಲ ಎಂದು ಹೈಕೋರ್ಟ್ ತಿಳಿಸಿದೆ: ರೋಷನ್ ನವಾಜ್

ಶಿರವಸ್ತ್ರವನ್ನು ಇಸ್ಲಾಂನ ಕಡ್ಡಾಯ ಆಚರಣೆಯೇ ಅಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಇದು ರಾಜ್ಯದ ಮುಸಲ್ಮಾನ ಸಮುದಾಯಕ್ಕೆ ಬಹಳ ಆಘಾತ ತಂದಿದೆ. ನ್ಯಾಯಾಲಯವು ಅಸಂವಿಧಾನಿಕವಾಗಿ ತೀರ್ಪನ್ನು ಪ್ರಕಟಿಸಿದೆ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವೇ ಎಂದು ಪ್ರಶ್ನಿಸಿದೆ. ಇದು ಸಂಪೂರ್ಣವಾಗಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸುವ ರೀತಿ. ಯಾಕೆಂದರೆ ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶದ ವಿಚಾರವೇ ಉದಾಹರಣೆ. ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಇನ್ನು ಬಾಕಿ ಇದೆ ಎಂದು ಅಡ್ವಾಕೇಟ್ ರೋಷನ್ ನವಾಜ್ ಹೇಳಿದ್ದಾರೆ.

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆಕೊಟ್ಟ ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಲು ಮನವಿ

ಹಿಜಾಬ್ ಪ್ರಕರಣದ ತೀರ್ಪು ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆಕೊಟ್ಟ ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸುವಂತೆ ಕೋರಿ ರಿಜಿಸ್ಟ್ರಾರ್ ಜನರಲ್‌ಗೆ ವಕೀಲ ಎನ್.ಪಿ.ಅಮೃತೇಶ್ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ತೀರ್ಪನ್ನ ಕೆಲ ಸಂಘಟನೆ ತೀವ್ರವಾಗಿ ಟೀಕಿಸಿವೆ. ಕೋರ್ಟ್‌ನ ಘನತೆಯನ್ನ ಕುಗ್ಗಿಸಲು ಸಂಘಟನೆಗಳು ಯತ್ನಿಸಿವೆ. ಕರ್ನಾಟಕ ಬಂದ್‌ಗೆ ಕರೆ ಕೊಟ್ಟವರ ವಿರುದ್ಧ ಕ್ರಮಕ್ಕೆ ವಕೀಲ ಎನ್.ಪಿ.ಅಮೃತೇಶ್ ಮನವಿ ಮಾಡಿದ್ದು, ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸುವಂತೆ ಕೋರಿದ್ದಾರೆ.

 ಹಿಜಾಬ್​ ಕುರಿತ ತೀರ್ಪು ಏನು ಹೇಳುತ್ತದೆ?

ವಿಶ್ವ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಮಾರ್ಚ್​ 15 ರಂದು ಕರ್ನಾಟಕ ಹೈಕೋರ್ಟ್​ನ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದರು.

ಉಡುಪಿಯಿಂದ ಶುರುವಾಗಿದ್ದ ಹಿಜಾಬ್​ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು,  ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತಿಳಿಸಿದೆ.

ಇದನ್ನೂನ ಓದಿ:

Hijab Verdict: ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್​ನಿಂದ ಬೆದರಿಕೆ

Karnataka Bandh: ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‌

Published On - 2:35 pm, Mon, 21 March 22