ಮಹಿಳಾ ಪ್ರಯಾಣಿಕರಿಂದ ದೂರುಗಳು ಬಂದರೆ ಶಿಸ್ತು ಕ್ರಮ: ಸಾರಿಗೆ ಇಲಾಖೆಯಿಂದ ಸುತ್ತೋಲೆ

ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆ ಶಿಸ್ತು ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ.

ಮಹಿಳಾ ಪ್ರಯಾಣಿಕರಿಂದ ದೂರುಗಳು ಬಂದರೆ ಶಿಸ್ತು ಕ್ರಮ: ಸಾರಿಗೆ ಇಲಾಖೆಯಿಂದ ಸುತ್ತೋಲೆ
ಮಹಿಳಾ ಪ್ರಯಾಣಿಕರಿಂದ ದೂರುಗಳು ಬಂದರೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಸುತ್ತೋಲೆ ಹೊರಡಿಸಿದ ಕರ್ನಾಟಕ ಸಾರಿಗೆ ಇಲಾಖೆ
Follow us
|

Updated on: Jun 22, 2023 | 7:04 PM

ಬೆಂಗಳೂರು: ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಬಸ್ ನಿರ್ವಾಹಕ ಅಥವಾ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ (Karnataka Transport Dept) ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಸರ್ಕಾರವು ರಾಜ್ಯದ ಸಮಸ್ತ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವಾದ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಜಾರಿಗೆ ತಂದಿದೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಚಾಲನಾ ಸಿಬ್ಬಂದಿಗಳ ಪರಿಶ್ರಮವು ಹೆಚ್ಚಿನ ಮಟ್ಟದಲ್ಲಿರುತ್ತದೆ. ಆದರೆ ಕೆಲವೊಂದು ಅಹಿತಕರ ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿದೆ ಎಂದು ಇಲಾಖೆಯು ಅಸಮಾಧಾನ ಹೊರಹಾಕಿದೆ.

ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪುಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Chitradurga: ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ, ಬಸ್​ ನಿರ್ವಾಹಕನ ಮೇಲೆ ಹಲ್ಲೆ; ವಿಡಿಯೋ ವೈರಲ್

ಅದಾಗ್ಯೂ, ಮಹಿಳೆಯರು ಇರುವ ಬಸ್‌ ನಿಲ್ದಾಣ ಅಥವಾ ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್‌ ನಿಲ್ಲಿಸದೇ ಇರುವುದು ಅಥವಾ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಮಹಿಳೆಯರಿಗೆ ವಿತರಿಸುವ ಟಿಕೆಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ ಅಥವಾ ಬಸ್ ನಿಲುಗಡೆ ಸ್ಥಳಗಳಲ್ಲಿ ನಿಲುಗಡ ನೀಡಿ ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳನ್ನು ಹತ್ತಿಸಿ ಇಳಿಸಬೇಕು. ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಇಲಾಖೆಯು ತಿಳಿಸಿದೆ.

ಇನ್ನು ಮುಂದೆ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ ಸಂಬಂಧಪಟ್ಟ, ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಶಕ್ತಿ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ. ಈ ಸುತ್ತೋಲೆಯಲ್ಲಿರುವ ಅಂಶಗಳ ಬಗ್ಗೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ತಿಳುವಳಿಕೆಯನ್ನು ನೀಡುವಂತೆ ಅಧಿಕಾರಿಗಳಿಗೆ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ