ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್​​​ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ

ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆ, ವೀಡಿಯೋಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡದೆ ವಾರ್ತಾ ಇಲಾಖೆ ತಾರತಮ್ಯ ಮಾಡುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದು, ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಸ್ಪೀಕರ್​​ಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ ಎಂದವರು ಆಗ್ರಹಿಸಿದ್ದಾರೆ.

ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ: ವಿಧಾನಸಭೆ ಸ್ಪೀಕರ್​​​ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
ವಿಧಾನಸಭೆ ಸ್ಪೀಕರ್​​​ಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ
Edited By:

Updated on: Aug 24, 2026 | 1:01 PM

ಮುಖ್ಯಾಂಶಗಳು

  • ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ಆರೋಪ
  • ಸ್ಪೀಕರ್ ಜಿ.ಎಸ್. ಪಾಟೀಲ್​​ಗೆ ವಿಪಕ್ಷ ನಾಯಕ ಅಶೋಕ್​​ ಪತ್ರ
  • ವಾರ್ತಾ ಇಲಾಖೆ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಎಚ್ಚರಿಕೆ

ಬೆಂಗಳೂರು, ಆಗಸ್ಟ್​​ 24: ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ವಿಪಕ್ಷ ನಾಯಕರು ಮತ್ತು ವಿಪಕ್ಷ ಶಾಸಕರ ಹೇಳಿಕೆಗಳ ಫೋಟೋ, ವೀಡಿಯೋಗಳನ್ನು ಮಾಧ್ಯಮಗಳಿಗೆ ವಾರ್ತಾ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್​. ಅಶೋಕ್​​ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸೋದಾಗಿ ಉಲ್ಲೇಖಿಸಿ ವಿಧಾನಸಭೆ ಸ್ಪೀಕರ್​​​ಗೆ ಆರ್.ಅಶೋಕ್ ಪತ್ರ ಬರೆದಿದ್ದಾರೆ.

ಆರ್​​. ಅಶೋಕ್​​ ಬರೆದ ಪತ್ರದಲ್ಲೇನಿದೆ?

Assembly session: ಟಿವಿಯಲ್ಲಿ ತೋರಿಸದ ವಾರ್ತಾ ಇಲಾಖೆ ವಿರುದ್ಧ ವಿಪಕ್ಷ ನಾಯಕ ಅಶೋಕ್ ಆಕ್ರೋಶ | #TV9D

ಆಗಸ್ಟ್​​ 13ರಿಂದ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿರೋಧ ಪಕ್ಷದ ನಾಯಕರು ಮತ್ತು ಶಾಸಕರು ನೀಡುವ ಹೇಳಿಕೆಗಳು, ಭಾಷಣಗಳು ಹಾಗೂ ಧ್ವನಿ-ದೃಶ್ಯ/ವೀಡಿಯೋಗಳು ಮುದ್ರಣ ಹಾಗೂ ಟಿವಿ ಮಾಧ್ಯಮಗಳಲ್ಲಿ ಸಮರ್ಪಕವಾಗಿ ಪ್ರಸಾರವಾಗುತ್ತಿಲ್ಲ. ಮುಖ್ಯಮಂತ್ರಿಗಳು, ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಹೇಳಿಕೆಗಳಿಗೆ ಹೆಚ್ಚಿನ ಪ್ರಚಾರ ದೊರೆಯುತ್ತಿದೆ . ಆ ಮೂಲಕ ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ತಾರತಮ್ಯ ನಡೆಯುತ್ತಿದೆ. ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಈ ರೀತಿಯ ತಾರತಮ್ಯವು ಹಿಂದೆಂದು ನಡೆದಿರುವುದಿಲ್ಲ ಎಂದವರು ಆರೋಪಿಸಿದ್ದಾರೆ.

ಇದನ್ನೂ ಓದಿ:  ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​

ಹಕ್ಕುಚ್ಯುತಿ ಮಂಡಿಸುವ ಎಚ್ಚರಿಕೆ

ತಾವು ಕೂಡಲೇ ಸಂಬಂಧಿಸಿದ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ, ಈ ತಾರತಮ್ಯವನ್ನು ಸರಿಪಡಿಸಲು ಕೋರುತ್ತೇನೆ. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದು ಸ್ಪೀಕರ್ ಜಿ.ಎಸ್. ಪಾಟೀಲ್​​ಗೆ ಬರೆದ ಪತ್ರದಲ್ಲಿ ಆರ್. ಅಶೋಕ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:01 pm, Mon, 24 August 26

Loading...
Unable to load recommendations.
Follow Us