AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಗ್ರೆಸ್​’ ಪ್ರಚಾರ ತಂತ್ರ ಸಭೆಯಲ್ಲಿ ಅಸಮಾಧಾನ ಸ್ಫೋಟ? ಸಭೆಯಲ್ಲಿ ನಡೆದಿದ್ದೇನು?

ಗ್ಯಾರಂಟಿಗಳನ್ನ ಜಾರಿ ಮಾಡಿ, ಜನರ ಮನಸು ಗೆದ್ದು ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಇಟ್ಟಿರುವ ಗುರಿ ಮುಟ್ಟಲು, ಲೋಕಸಭಾ ಕ್ಷೇತ್ರಗಳನ್ನ ಕಬ್ಜ ಮಾಡಲು ಕೆಪಿಸಿಸಿ ಕಚೇರಿಯಲ್ಲಿ ಪ್ರಚಾರ ಸಮಿತಿ ಸಭೆ ನಡೆಸಲಾಯ್ತು. ಆದ್ರೇ, ಇದೇ ಸಭೆಯಲ್ಲಿ ಅಸಮಾಧಾನದ ಕಿಚ್ಚು ಸ್ಫೋಟಗೊಂಡಿದೆ.

‘ಕಾಂಗ್ರೆಸ್​’ ಪ್ರಚಾರ ತಂತ್ರ ಸಭೆಯಲ್ಲಿ ಅಸಮಾಧಾನ ಸ್ಫೋಟ? ಸಭೆಯಲ್ಲಿ ನಡೆದಿದ್ದೇನು?
ಕೆಪಿಸಿಸಿ ಪ್ರಚಾರ ಸಮಿತಿ ಸಭೆ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 04, 2023 | 7:43 AM

Share

ಬೆಂಗಳೂರು, (ಸೆಪ್ಟೆಂಬರ್ 04): ಲೋಕಸಭೆ (Loksabha Elections 2024)ಗುರಿ ಇಟ್ಟುಕೊಂಡು ವೋಟ್ ಶೇರಿಂಗ್ ಹೆಚ್ಚಿಸಿಕೊಳ್ಳಲು ಕಾರ್ಯಕರ್ತರಿಗೆ ಗಾಳ ಹಾಕುತ್ತಿರುವ ಕೈ ಪಡೆ, ಆಪರೇಷನ್ ಹಸ್ತ(Operation Hasta) ನಡೆಸುತ್ತಿದೆ, ಆದ್ರೆ, ಇದೇ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಕಿಚ್ಚು ಸ್ಫೋಟಗೊಂಡಿದೆ. ಅಂದಹಾಗೆ, ಲೋಕಸಭೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ (Congress) ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆ ನಡೆಸಿ. ಪದಾಧಿಕಾರಿಗಳನ್ನ ಅಭಿನಂದಿಸಿ, ಹುರಿದುಂಬಿಸಲಾಯ್ತು. ಈ ಮೂಲಕ ಲೋಕಸಭೆಗೆ ಪ್ರಚಾರ ಕಾರ್ಯದ ರೂಪರೇಷೆ ಚರ್ಚೆ ನಡೆಸಲಾಯ್ತು. ಆದ್ರೆ, ಸಭೆಯಲ್ಲಿ ಕೆಲ ನಾಯಕರ ಅಸಮಾಧಾನ ಸ್ಫೋಟವಾಗಿದೆ.

ಆಪರೇಷನ್ ಹಸ್ತ ಪಾಲಿಟಿಕ್ಸ್​ಗೆ ಅಸಮಾಧಾನ?

KPCC ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಭಾಪತಿ ಬಿ‌.ಎಲ್.ಶಂಕರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಿದ್ದರು. ಲೋಕಸಭಾ ಗೆಲುವಿಗೆ ರಣತಂತ್ರ ರೂಪಿಸಲಾಯ್ತು. ಆದ್ರೆ, ಇದೇ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಪ್ರಸ್ತಾಪಿಸಿದ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಹೌದು.. ಆಪರೇಷನ್ ಹಸ್ತ ಪಾಲಿಟಿಕ್ಸ್‌ಗೆ ಪ್ರಚಾರ ಸಮಿತಿ ಸಭೆಯಲ್ಲಿ ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಾವು ಮೊದಲಿಂದಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಾ ಬಂದಿದ್ದೇವೆ. ಯುವ ಕಾಂಗ್ರೆಸ್ ಸೇರಿದಂತೆ ಅನೇಕ ವಿಭಾಗಗಳಲ್ಲಿ ಕೆಲಸ ಮಾಡಿದ್ದೇವೆ. ಆದರೆ ಬೇರೆ ಪಕ್ಷಗಳಿಂದ ನೇರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ, ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ, ಹೀಗಿದ್ದಾಗ ನಾವು ಏನು ಮಾಡಬೇಕು? ಎಂದು ಆಪರೇಷನ್ ಹಸ್ತಕ್ಕೆ ಪದಾಧಿಕಾರಿಗಳು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ಸುದೀಪ್​ ಬರ್ತ್​ಡೇ ಪಾರ್ಟಿಯಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ರಾ ಡಿಕೆ ಶಿವಕುಮಾರ್? ಬಿಜೆಪಿ ನಾಯಕರೊಂದಿಗಿನ ಫೋಟೋ ವೈರಲ್

‘ಶಾಸಕರಿಗೆ ದಯವಿಟ್ಟು ನಿಗಮ ಮಂಡಳಿ ಕೊಡಬೇಡಿ’

ಇನ್ನೂ ಪ್ರಚಾರ ಸಮಿತಿ ಸಭೆಯಲ್ಲಿ ನಿಗಮ ಮಂಡಳಿ ಕೂಗೆದ್ದಿದೆ. ಶಾಸಕರಿಗೆ ದಯವಿಟ್ಟು ನಿಗಮಮಂಡಳಿ ಕೊಡಬೇಡಿ ಎಂದು ಕಿತ್ತೂರು ಕರ್ನಾಟಕ ಹೈದರಾಬಾದ್ ಕರ್ನಾಟಕದ ಭಾಗದ ಪ್ರಚಾರ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ. ನಿಗಮ ಮಂಡಳಿ ಸ್ಥಾನ ಕಾರ್ಯಕರ್ತರಿಗೆ ನೀಡದೇ ಹೋದರೆ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ. ಇನ್ನು ಪ್ರಚಾರ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ B.L​.ಶಂಕರ್, ಚುನಾವಣೆ, ಸ್ಥಳೀಯ ಸಂಸ್ಥೆ ಕಮಿಟಿ, ಶಾಸಕರಿಗಿಂತ ಹೆಚ್ಚಾಗಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿ ಅಂತಾ ಸಲಹೆ ಕೊಟ್ಟರು.

ಈ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರು ವರ್ಸಸ್ ಸಚಿವರ ನಡುವಿನ ಪತ್ರ ಸಮರ ತಾರಕಕ್ಕೇರಿದೆ. ಶಾಸಕರ ಮೇಲೆ ಸಚಿವರು, ಸಚಿವರ ವಿರುದ್ಧ ಶಾಸಕರು ಪರಸ್ಪರ ದೂರು ಪ್ರತಿದೂರುಗಳನ್ನ ನೀಡಿದ್ದಾರಂತೆ. ಸಚಿವರ ನಡೆ ವಿರುದ್ಧ ಶಾಸಕರು ಸಿಎಂಗೆ ಪತ್ರ ಬರೆದಿದ್ರೆ, ಇತ್ತ ಶಾಸಕರ ನಡೆ ಬಗ್ಗೆಯೂ ಸಚಿವರು ಸಿಎಂ, ಡಿಸಿಎಂಗೆ ದೂರಿದ್ದಾರೆ. ಸಚಿವರ ನಡವಳಿಕೆ ಸರಿಪಡಿಸಿ ಎಂದು ಶಾಸಕರು ರೊಚ್ಚಿಗೆದ್ದಿದ್ರೆ, ಹೊಸ ಶಾಸಕರು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಇದರಿಂದ ಸರ್ಕಾರಕ್ಕೆ ಧಕ್ಕೆಯಾಗುತ್ತಿದೆ ಎಂದು ಸಚಿವರು ಡಿಸಿಎಂ ಡಿಕೆ ಶಿವಕುಮಾರ್​ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ