ಹೊಸ ಪಡಿತರ ಕಾರ್ಡ್​ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ- ಕೆಎಚ್ ಮುನಿಯಪ್ಪ

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದರು.

ಹೊಸ ಪಡಿತರ ಕಾರ್ಡ್​ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ- ಕೆಎಚ್ ಮುನಿಯಪ್ಪ
ಕೆ.ಎಚ್​.ಮುನಿಯಪ್ಪ
Edited By: ಆಯೇಷಾ ಬಾನು

Updated on: Aug 04, 2023 | 1:18 PM

ಬೆಂಗಳೂರು, ಆ.04: ನೀತಿ ಸಂಹಿತೆ ಜಾರಿ ಹಿನ್ನೆಲೆ ರೇಷನ್​​ ಕಾರ್ಡ್(Ration Card)​ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ(KH Muniyappa) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮುನಿಯಪ್ಪ, ಹೊಸ ಪಡಿತರ ಕಾರ್ಡ್ ವಿತರಣೆ ಸಂಬಂಧ ಮಾಹಿತಿ ನೀಡಿದರು. ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ ಎಂದು ಹೇಳಿದರು.

ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಎಂದು. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ. ಸುಮಾರು 556 ಕೋಟಿ ಹಣವನ್ನ ಹಾಕಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲ ಆಗಿದೆ. ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಕಾರ್ಡ್​ನಲ್ಲಿರುವ ಮೃತರ ಹೆಸರನ್ನು ತೆರವುಗೊಳಿಸಲು ಸೂಚಿಸಲಾಗಿದೆ. ರಾಗಿ, ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದರು.

ಇದನ್ನೂ ಓದಿ: ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆ ಟೀಕಿಸಿದ ಬಿಜೆಪಿ ಸಂಸದ ಎಸ್​​ ಮುನಿಸ್ವಾಮಿ

ಆಂಧ್ರ ಹಾಗೂ ತೆಲಂಗಾಣ ಸರ್ಕಾರ ಅಕ್ಕಿ ನೀಡಲು ಮುಂದಾಗಿವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. 1 ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದೆ. ಸೆಪ್ಟೆಂಬರ್​ ತಿಂಗಳಿನಲ್ಲಿ 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ. 34 ರೂ ಗೆ ಅಕ್ಕಿ ಕೊಡುತ್ತೇವೆ ಅಂದರೆ ನಾವು ತೆಗೆದುಕೊಳ್ಳಲು ಸಿದ್ದರಿದ್ದೇವೆ ಎಂದರು.

ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ

ಇನ್ನು ಇದೇ ವೇಳೆ ವೈಟ್​ಬೋರ್ಡ್​ ಕಾರು ಹೊಂದಿರುವವರಿಗೆ ಬಿಪಿಎಲ್​ ​​ಕಾರ್ಡ್​ ಇಲ್ಲ, ಯಲ್ಲೋ ಬೋರ್ಡ್ ಕಾರು ಇದ್ದರೆ BPL ಕಾರ್ಡ್ ನೀಡಲಾಗುವುದು. ಈ ಬಗ್ಗೆ ಚರ್ಚೆ ಮಾಡಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Fri, 4 August 23

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us