Bengaluru Rain: ರಾಜಧಾನಿಯಲ್ಲಿ ವರುಣನ ಅಬ್ಬರ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

| Updated By: ಆಯೇಷಾ ಬಾನು

Updated on: Aug 29, 2022 | 10:48 PM

ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

Bengaluru Rain: ರಾಜಧಾನಿಯಲ್ಲಿ ವರುಣನ ಅಬ್ಬರ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಮಳೆ
Follow us on

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ(Karnataka Rains). ಅಲ್ಲದೆ ಬೆಂಗಳೂರಿನಲ್ಲೂ ಮಳೆ(Bengaluru Rain) ಹೆಚ್ಚಾಗಿದ್ದು ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಭೀಕರ ಮಳೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಅನುಮತಿಯ ಮೇರೆಗೆ ಆಗಸ್ಟ್ 30ರ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಹಲವು ರಸ್ತೆಗಳಲ್ಲಿ ಮಳೆ ನೀರು ನಿಂತಲ್ಲೆ ನಿಂತಿದೆ. ಮಲ್ಲೇಶ್ವರಂನ ಕೆಲವು ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸವಾರರು ಹರಸಾಹಸ ಪಡ್ತಿದ್ದಾರೆ. ನಾಯಂಡಹಳ್ಳಿ,ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ನಗರದ ಬಹುತೇಕ ಅಂಡರ್ ಪಾಸ್ ಗಳು ಮಳೆ‌ನೀರಿನಿಂದ ಆವೃತವಾಗಿವೆ. ಉತ್ತರಹಳ್ಳಿ 39.5mm, ನಾಯಂಡಗಳ್ಳಿ 49.5mm ಮಳೆ, ಹಂಪಿ ನಗರ 44.5mm ಮಳೆ, ಹೆಚ್.ಗೊಲ್ಲಹಳ್ಳಿ 44.5mm, ಕೋಣನಕುಂಟೆ 55.0mm, ಅರಕೆರೆ(ಬೊಮ್ಮನಹಳ್ಳಿ) 47.5mm, ಬಿಳೇಕಹಳ್ಳಿ 60.5mm ಪ್ರಮಾಣದಲ್ಲಿ ಮಳೆಯಾಗಿದೆ.

ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರದ ಕೊಂಬೆ

ಬೆಂಗಳೂರಿನ ಮಲ್ಲೇಶ್ವರಂನ 8ನೇ ಕ್ರಾಸ್‌ನಲ್ಲಿ ಮಳೆಯಿಂದಾಗಿ ಕೊಂಬೆ ಬಿದ್ದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂ ಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ.

Published On - 9:59 pm, Mon, 29 August 22