ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಸಮ್ಮತಿಯ ವಿಚ್ಚೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್
ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ದಂಪತಿಯ ಪರಸ್ಪರ ಸಮ್ಮತಿ ವಿಚ್ಚೇದನ ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ವೈಮನಸ್ಯ ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ ಅಂತ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರು: ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ದಂಪತಿಯ ಪರಸ್ಪರ ಸಮ್ಮತಿ ವಿಚ್ಚೇದನ (Divorce) ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಆದೇಶಿಸಿದೆ. ವೈಮನಸ್ಯ ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ ಅಂತ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಸಮ್ಮತಿಯ ವಿಚ್ಚೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ದಂಪತಿ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.
ವೈಮನಸ್ಸು ಇದ್ದರೂ ಒಂದೇ ಮನೆಯಲ್ಲಿದ್ದುಕೊಂಡೇ ವಿಚ್ಛೇದನ ಕೋರಿ ಪತಿ ಹಾಗೂ ಪತ್ನಿ ಕೌಟುಂಬಿನ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಅರ್ಜಿ ಸಲ್ಲಿಸಿದ್ದರೂ ಒಂದೇ ಮನೆಯಲ್ಲಿ ಪತಿ, ಪತ್ನಿ ವಾಸಿಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಸಮ್ಮತಿಯ ವಿಚ್ಚೇದನ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ: ಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಚೇದನ ನಿರಾಕರಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ. ವೈಮನಸ್ಸು ಹೊಂದಿದ ದಂಪತಿ ಸಾಮಾನ್ಯವಾಗಿ ಕಿತ್ತಾಡಿಕೊಳ್ಳುತ್ತಾರೆ. ವೈಮನಸ್ಸು ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ. ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ವಿಚ್ಚೇದನ ನಿರಾಕರಿಸುವಂತಿಲ್ಲ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಪಡಿಸಿದ ಹೈಕೋರ್ಟ್ ಮತ್ತೆ ಅಲ್ಲಿಗೇ ಪ್ರಕರಣ ಮರಳಿಸಿದೆ. ಪರಸ್ಪರ ಒಪ್ಪಿಗೆಯ ವಿಚ್ಚೇದನ ಅರ್ಜಿ, ಮಧ್ಯಸ್ಥಿಕೆದಾರರ ವರದಿ ಆಧರಿಸಿ ತೀರ್ಮಾನ ಕೈಗೊಳ್ಳುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 pm, Wed, 14 June 23