ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಗುಡ್ನ್ಯೂಸ್: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಎಸ್‌ಎಂವಿಟಿ ಮತ್ತು ಬೆಳಗಾವಿ ನಡುವೆ ನವೆಂಬರ್ 7 ರಿಂದ 10ರ ವರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಘೋಷಿಸಿದೆ. 20 ಬೋಗಿಗಳನ್ನು ಹೊಂದಿರುವ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಬೆಂಗಳೂರು, ನವೆಂಬರ್ 06: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಬೆಳಗಾವಿ ನಡುವೆ ಎರಡೂ ದಿಕ್ಕಿನಲ್ಲಿ ತಲಾ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ನಡೆಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು–ಬೆಳಗಾವಿಗೆ ತೆರಳಲಿರುವ 06551 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 7 ಮತ್ತು 9ರಂದು ರಾತ್ರಿ 7 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಡಲಿದೆ. ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರಿಗೆ ತೆರಳಲಿರುವ 06552 ಸಂಖ್ಯೆಯ ರೈಲು ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡಲಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.
ರೈಲು ನಿಲುಗಡೆ ಇರುವ ಸ್ಥಳಗಳು
20 ಬೋಗಿಗಳನ್ನು ಹೊಂದಿರುವ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಈ ವಿಶೇಷ ರೈಲುಗಳನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ವಿಜೃಂಭಣೆಯ ದೀಪಾವಳಿ ಜಾತ್ರಾ ಮಹೋತ್ಸವ: ಭಕ್ತರಿಗೆ ಪ್ರಮುಖ ಸೂಚನೆಗಳು ಇಲ್ಲಿವೆ!
ಬೆಂಗಳೂರು–ಬೆಳಗಾವಿ ಮಾರ್ಗದಲ್ಲಿ ಪ್ರಯಾಣಿಸಲು ಯೋಜಿಸಿರುವವರು ಪ್ರಯಾಣಕ್ಕೂ ಮುನ್ನ ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರೈಲು ವೇಳಾಪಟ್ಟಿಯ ಕುರಿತು ರೈಲ್ವೆಯ ಅಧಿಕೃತ ವ್ಯವಸ್ಥೆಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ. ನವೆಂಬರ್ 7ರಿಂದ 10ರವರೆಗೆ ನಾಲ್ಕು ಟ್ರಿಪ್‌ಗಳು ನಿಗದಿಯಾಗಿದ್ದು, ಕೊನೆಯ ಬೆಂಗಳೂರು ಕಡೆಗಿನ ವಿಶೇಷ ರೈಲು ನವೆಂಬರ್ 11ರಂದು ಬೆಳಗ್ಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




