ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಎಸ್‌ಎಂವಿಟಿ ಮತ್ತು ಬೆಳಗಾವಿ ನಡುವೆ ನವೆಂಬರ್ 7 ರಿಂದ 10ರ ವರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಘೋಷಿಸಿದೆ. 20 ಬೋಗಿಗಳನ್ನು ಹೊಂದಿರುವ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
Image Credit source: Getty Images

Updated on: Nov 06, 2026 | 2:04 PM

ಬೆಂಗಳೂರು, ನವೆಂಬರ್​​ 06: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಬೆಳಗಾವಿ ನಡುವೆ ಎರಡೂ ದಿಕ್ಕಿನಲ್ಲಿ ತಲಾ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ನಡೆಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು–ಬೆಳಗಾವಿಗೆ ತೆರಳಲಿರುವ 06551 ಸಂಖ್ಯೆಯ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 7 ಮತ್ತು 9ರಂದು ರಾತ್ರಿ 7 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಡಲಿದೆ. ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರಿಗೆ ತೆರಳಲಿರುವ 06552 ಸಂಖ್ಯೆಯ ರೈಲು ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡಲಿದೆ. ಮರುದಿನ ಬೆಳಗ್ಗೆ 5 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ರೈಲು ನಿಲುಗಡೆ ಇರುವ ಸ್ಥಳಗಳು

20 ಬೋಗಿಗಳನ್ನು ಹೊಂದಿರುವ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಈ ವಿಶೇಷ ರೈಲುಗಳನ್ನು ಘೋಷಿಸಲಾಗಿದೆ.

Loading...

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ವಿಜೃಂಭಣೆಯ ದೀಪಾವಳಿ ಜಾತ್ರಾ ಮಹೋತ್ಸವ: ಭಕ್ತರಿಗೆ ಪ್ರಮುಖ ಸೂಚನೆಗಳು ಇಲ್ಲಿವೆ!

ಬೆಂಗಳೂರು–ಬೆಳಗಾವಿ ಮಾರ್ಗದಲ್ಲಿ ಪ್ರಯಾಣಿಸಲು ಯೋಜಿಸಿರುವವರು ಪ್ರಯಾಣಕ್ಕೂ ಮುನ್ನ ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರೈಲು ವೇಳಾಪಟ್ಟಿಯ ಕುರಿತು ರೈಲ್ವೆಯ ಅಧಿಕೃತ ವ್ಯವಸ್ಥೆಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ. ನವೆಂಬರ್ 7ರಿಂದ 10ರವರೆಗೆ ನಾಲ್ಕು ಟ್ರಿಪ್‌ಗಳು ನಿಗದಿಯಾಗಿದ್ದು, ಬೆಂಗಳೂರು ಕಡೆಗಿನ ಕೊನೆಯ ವಿಶೇಷ ರೈಲು ನವೆಂಬರ್ 11ರಂದು ಬೆಳಗ್ಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:03 pm, Fri, 6 November 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us