Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ

ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರಾಗಿದೆ. ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಮೈದಾನದಲ್ಲಿ ಪಟಾಕಿ ಸ್ಟಾಲ್​​ಗಳಲ್ಲಿ ಭರ್ಜರಿ ಮಾರಾಟವಾಗುತ್ತಿದ್ದು, ಅತ್ತ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಕೂಡ ತಟ್ಟುತ್ತಿದೆ. ಗ್ರೀನ್ ಪಟಾಕಿಗಳ ಬೆಲೆ ದುಪ್ಪಟ್ಟಾಗಿರುವುದಕ್ಕೆ ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

Deepavali: ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಜೋರು, ಗ್ರಾಹಕರಿಗೆ ತಟ್ಟಿದ ಪಟಾಕಿ ಬೆಲೆಯೇರಿಕೆ ಬಿಸಿ
Follow us
| Updated By: ಗಣಪತಿ ಶರ್ಮ

Updated on: Oct 31, 2024 | 7:35 AM

ಬೆಂಗಳೂರು, ಅಕ್ಟೋಬರ್ 31: ದೀಪಗಳ ಹಬ್ಬ ದೀಪಾವಳಿಗೆ ರಾಜಧಾನಿ ಬೆಂಗಳೂರು ಭರ್ಜರಿ ಸಿದ್ಧತೆ ಮಾಡಿದ್ದು, ನಗರದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಇತ್ತ ಪಟಾಕಿ ಮಾರಾಟ ಕೂಡ ಜೋರಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಸೇರಿ ಹಲವೆಡೆ ಮೈದಾನಗಳಲ್ಲಿ ಪಟಾಕಿ ಸ್ಟಾಲ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದೆ. ಮೊದಲ ದಿನವಾದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇದ್ದರೂ ಕೂಡ ಹಾಕಿರುವ ಬಂಡವಾಳಕ್ಕೆ ತಕ್ಕ ವ್ಯಾಪಾರ ಆಗುತ್ತಿರುವುದಕ್ಕೆ ವ್ಯಾಪಾರಿಗಳು ಖುಷಿಯಾಗಿದ್ದಾರೆ. ಇನ್ನು ಹಸಿರು ಪಟಾಕಿಗಳ ಮಾರಾಟ ಮಾಡಲು ಮಾತ್ರ ಅವಕಾಶ ಕೊಟ್ಟಿರುವುದರಿಂದ ಪೊಲೀಸರು ನೀಡಿರುವ ಮಾರ್ಗಸೂಚಿಯಂತೆಯೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪಟಾಕಿ ವ್ಯಾಪಾರ ನಡೆಸಲಾಗುತ್ತಿದೆ.

ಇನ್ನು ಬಗೆ ಬಗೆಯ ಗ್ರೀನ್ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸೂರಿನಿಂದ ಬಂದಿರುವ ಪಟ್ ಪಟ್ ಪಟಾಕಿಗಳು ಗ್ರಾಹಕರ ಗಮನಸೆಳೆಯುತ್ತಿವೆ. ಗ್ರೀನ್ ಪಟಾಕಿಗೆ ಮಾತ್ರ ಮಾರಾಟಕ್ಕೆ ಅವಕಾಶ ಇರುವುದರಿಂದ ಢಂ ಢಂ ಅಂತಾ ಸದ್ದುಮಾಡುವ ದೊಡ್ಡ ದೊಡ್ಡ ಪಟಾಕಿಗಳಿಗೆ ಹುಡುಕಾಡುವ ಜನರಿಗೆ ಸ್ವಲ್ಪ ಬೇಸರವಾಗಿದೆ. ಅತ್ತ ಪಟಾಕಿಗಳ ಬೆಲೆ ಏರಿಕೆಯಾಗಿರುವುದು ಕೂಡ ಗ್ರಾಹಕರನ್ನು ನಿರಾಸೆಗೊಳಿಸಿದೆ.

ಸದ್ಯ ಇಂದಿನಿಂದ ದೀಪಾವಳಿಯ ಆಚರಣೆ ಶುರುವಾಗಿದ್ದು, ಹಬ್ಬವನ್ನು ದೀಪಗಳ ಜೊತೆ ರಂಗೇರಿಸಲು ಪಟಾಕಿಗಳು ಕೂಡ ಸಜ್ಜಾಗಿವೆ. ಇತ್ತ ಪಟಾಕಿಯಿಂದ ಆಗಬಹುದಾದ ಅನಾಹುತಗಳನ್ನ ತಪ್ಪಿಸಲು ಪೊಲೀಸ್ ಇಲಾಖೆ ಕೆಲ ಸಲಹೆ ಸೂಚನೆಗಳನ್ನ ನೀಡಿದೆ.

ಪಟಾಕಿ ಸಿಡಿಸುವವರಿಗೆ ಪೊಲೀಸರ ಸಲಹೆಗಳೇನು?

  • ಲೈಸೆನ್ಸ್ ಪಡೆದ ಅಂಗಡಿಯಿಂದ ಮಾತ್ರ ಪಟಾಕಿ ಖರೀದಿಸಿ.
  • ಅತಿ ಹೆಚ್ಚು ಶಬ್ದ,ಮಾಲಿನ್ಯ ಉಂಟು ಮಾಡೋ ಪಟಾಕಿ ಬೇಡ.
  • ಚಿಕ್ಕ ಮಕ್ಕಳು ಒಬ್ಬರೇ ಪಟಾಕಿ ಹಚ್ಚಲು ಬಿಡಬಾರದು.
  • ತೆರೆದ ಮೈದಾನ, ಕಡಿಮೆ ಜನರಿರೋ ಪ್ರದೇಶದಲ್ಲಿ ಮಾತ್ರ ಪಟಾಕಿ ಸಿಡಿಸಿ.
  • ಪಟಾಕಿ ಹಚ್ಚುವ ಕಡೆ ಬೆಂಕಿ ನಿರೋಧಕ, ನೀರು ಬಳಸಿ.

ಇದನ್ನೂ ಓದಿ: ಪಟಾಕಿ ದುರಂತ ಕರಿ ನೆರಳು: ಅತ್ತಿಬೆಲೆಯಲ್ಲಿ ಪಟಾಕಿ ಮಾರಾಟ ಕುಸಿತ

ಒಟ್ಟಿನಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ದೀಪಗಳ ಜೊತೆಗೆ ಪಟಾಕಿಗಳಿಗೂ ಬೇಡಿಕೆ ಹೆಚ್ಚಾಗಿದೆ. ಇತ್ತ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆ ತನಕ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕೊಡಲಾಗಿದ್ದು, ಪರಿಸರಕ್ಕೆ ಹಾನಿಮಾಡದಂತೆ ಪರಿಸರಸ್ನೇಹಿ ದೀಪಾವಳಿ ಆಚರಿಸುವ ಮೂಲಕ ಜವಬ್ದಾರಿಯುತ ನಾಗರೀಕರಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ
ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ
ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ
ದರ್ಶನ್ ಜಾಮೀನು ಪಡೆದ ಬಳಿಕ ಬಳ್ಳಾರಿ ದುರ್ಗಾದೇವಿಗೆ ವಿಜಯಲಕ್ಷ್ಮಿ ಪೂಜೆ
ದರ್ಶನ್ ಜಾಮೀನು ಪಡೆದ ಬಳಿಕ ಬಳ್ಳಾರಿ ದುರ್ಗಾದೇವಿಗೆ ವಿಜಯಲಕ್ಷ್ಮಿ ಪೂಜೆ
ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್​
ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್​
ಜೈಲು ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡಿಂಗ್ ಮಾಡಿದ ಪೊಲೀಸ್
ಜೈಲು ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡಿಂಗ್ ಮಾಡಿದ ಪೊಲೀಸ್