ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ: ಆರೋಪಿ ಪರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಕೊಟ್ಟ ಕಾರಣವೇನು? ​​

2020ರಲ್ಲಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ: ಆರೋಪಿ ಪರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಕೊಟ್ಟ ಕಾರಣವೇನು?  ​​
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 12, 2023 | 6:15 PM

ಬೆಂಗಳೂರು: 2020ರಲ್ಲಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ (DJ Halli and KG Halli Violence) ಸಂಬಂಧಿಸಿದಂತೆ ಆರೋಪಿಯೊಬ್ಬ ವಿರುದ್ಧ ಕಾನೂನುಬಾಹಿರ ಚುಟುವಟಿಕೆ ತಡೆ ಕಾಯ್ದೆ(ಯುಎಪಿಎ) ಹಾಗೂ ಸಾರ್ವಜನಿಕ ಆಸ್ತಿ ತಡೆ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಎನ್​ಐಎ ವಿಶೇಷ್​ ಕೋರ್ಟ್​ ಕ್ರಮ ರದ್ಧುಪಡಿಸಲು ಕರ್ನಾಟಕ ಹೈಕೋರ್ಟ್​ ನಿರಾಕರಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಏಪ್ರಿಲ್ 5ರಂದು ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25ನೇ ಆರೋಪಿಯಾಗಿರುವ ಮೊಹಮ್ಮದ್ ಶರೀಫ್​ ಪರವಾಗಿ ಆರೋಪಿಯ ಪತ್ನಿ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿದಾರರ ವಿರುದ್ಧ ಆರೋಪಗಳು ಯುಎಪಿಎ ಕಾಯ್ದೆ 1967ರ ಕಾಲಂ 15ಕ್ಕೆ ಪೂರವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಿದೆ.

ಜನಸಮೂಹ ಹಿಂಸಾಚಾರ ಹಿನ್ನೆಲೆ, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣವನ್ನು ವಹಿಸಿಕೊಂಡಿದ್ದು, ಈ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜೊತೆಗೆ ಅಪರಾಧ ಕೃತ್ಯವನ್ನು ಅರಿತುಕೊಂಡ  ವಿಶೇಷ ನ್ಯಾಯಾಲಯವು ಕಾನೂನೂ ಕ್ರಮಕ್ಕೆ ಮುಂದಾಗಿತ್ತು.

ಇದನ್ನೂ ಓದಿ: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಕೇಸ್‌; ಪೊಲೀಸ್ ಠಾಣೆ ಮೇಲಿನ ದಾಳಿ ಭಯೋತ್ಪಾದನಾ ಕೃತ್ಯ ಎಂದು ಸಾರಿದ ಹೈಕೋರ್ಟ್

ಮೊಹಮ್ಮದ್ ಶರೀಫ್​ ಪರ ವಕೀಲ ವಾದ ಮಂಡಿಸಿದ್ದು, ಅರ್ಜಿದಾರರ ವಿರುದ್ಧ ಯುಎಪಿಎ ಅಡಿಯಲ್ಲಿ ಯಾವುದೇ ಆರೋಪಗಳಿಲ್ಲ. ಕೇವಲ ಐಪಿಸಿ ಅಡಿಯಲ್ಲಿ ಹೊಣೆಗಾರರಾಗಿರುತ್ತಾರೆ ಎಂದು ವಾದ ಮಂಡಿಸಿದ್ದಾರೆ. ಎನ್ಐಎ ನ್ಯಾಯಾಲಯ ವಿಚಾರಣೆ ನಡೆಸುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ ಎನ್ಐಎ ನ್ಯಾಯಾಲಯದಲ್ಲಿನ ಪ್ರಕ್ರಿಯೆಯನ್ನು ವಜಾ ಮಾಡಬೇಕು ಎಂದು ಅರ್ಜಿದಾರರ ವಕೀಲರು ಹೇಳಿದ್ದಾರೆ.

ಮತ್ತೊಂದೆಡೆ ಬಲವಾಗಿ ಆಕ್ಷೇಪಿಸಿದ್ದ ಎನ್ಐಎ ಪರ ವಿಶೇಷ ಪ್ರಾಸಿಕ್ಯೂಟರ್​ ಪಿ. ಪ್ರಸನ್ನಕುಮಾರ,  ಆರೋಪಿಯ ಜಾಮೀನು ಅರ್ಜಿಯನ್ನು ಈ ಹಿಂದೆ ನಿರಾಕರಿಸಿದಾಗ ಈ ಅಂಶಗಳನ್ನು ಈಗಾಗಲೇ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಅರ್ಜಿದಾರರ ವಿರುದ್ಧದ ದೋಷಾರೋಪ ಪಟ್ಟಿಯನ್ನು ನ್ಯಾಯಪೀಠ ಗಮನಿಸಿದ್ದು, ಆ ಪ್ರಕಾರ ಅವರು ಹಿಂಸಾಚಾರಕ್ಕಾಗಿ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಸಭೆಯಲ್ಲಿ ಭಾಗವಹಿಸಿದ್ದರು. ಇದು ಯುಎಪಿಎಯ ನಿಬಂಧನೆಗೆ ಒಳಪಡುತ್ತಿದ್ದು, ವಿಶೇಷವಾಗಿ ವಾಹನಗಳನ್ನು ಸುಡಲು ಬಳಸಲಾಗಿರುವ ಸಾಧನಗಳ ಅಂಶವನ್ನು ಸಾಮಾನ್ಯ ಆರೋಪಗಳಲ್ಲಿ ಪರಿಗಣಿಸಲಾಗಿದೆ.

ಇದನ್ನೂ ಓದಿ: ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಸದ್ಯ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಾಣುತ್ತಿಲ್ಲ, ಆದರೂ ಎರಡು ವರ್ಷಗಳ ಕಾಲ ಪ್ರಕರಣವನ್ನು ಎಳೆಯಲಾಗುತ್ತಿದೆ ಎಂಬ ಅರ್ಜಿದಾರರ ವಕೀಲರ ವಾದವನ್ನು ನ್ಯಾಯಪೀಠ ತಳ್ಳಿಹಾಕಿದ್ದು, ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ಸಂಖ್ಯೆಯ ಆರೋಪಿಗಳು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂಬುದು ಗಮನಾರ್ಹ ವಿಷಯವಾಗಿದೆ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:15 pm, Wed, 12 April 23

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ