AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ನಾವು ಲಂಚ ಪಡೆದಿದ್ದೆವಾ? ಮಂಚಕ್ಕೆ ಹೋಗಿದ್ದೆವಾ? ಬಿಜೆಪಿಗೆ ಹೆದರೋ ಮಾತೇ ಇಲ್ಲ; ಡಿಕೆ ಶಿವಕುಮಾರ್

ನಮ್ಮ ನಾಯಕರನ್ನ ಮುಗಿಸುವುದಕ್ಕೆ ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್​ನವರು ದೇಶಕ್ಕಾಗಿ ಪ್ರಾಣ ಬೇಕಾದರೂ ಕೊಡಲು ಸಿದ್ಧ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

DK Shivakumar: ನಾವು ಲಂಚ ಪಡೆದಿದ್ದೆವಾ? ಮಂಚಕ್ಕೆ ಹೋಗಿದ್ದೆವಾ? ಬಿಜೆಪಿಗೆ ಹೆದರೋ ಮಾತೇ ಇಲ್ಲ; ಡಿಕೆ ಶಿವಕುಮಾರ್
ಡಿ ಕೆ ಶಿವಕುಮಾರ
TV9 Web
| Edited By: |

Updated on:Jun 15, 2022 | 1:26 PM

Share

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷದವರು ಯಾವುದೇ ಕಳ್ಳತನ ಮಾಡಿಲ್ಲ. ನಾವೇನು ಲಂಚ ಪಡೆದಿದ್ದೆವಾ? ಅಥವಾ ಮಂಚಕ್ಕೆ ಹೋಗಿದ್ದೆವಾ? 40 ಪರ್ಸೆಂಟ್ ಕಮಿಷನ್​ಗಾಗಿ ಸಚಿವರು ರಾಜೀನಾಮೆ ಕೊಡಲಿಲ್ವಾ? ನಮ್ಮ ನಾಯಕರನ್ನು ಮುಗಿಸುವುದಕ್ಕೆ ಬಿಜೆಪಿಯವರು (BJP Leaders) ಹೊರಟಿದ್ದಾರೆ. ಕಾಂಗ್ರೆಸ್​ನವರು ದೇಶಕ್ಕಾಗಿ ಪ್ರಾಣ ಬೇಕಾದರೂ ಕೊಡಲು ಸಿದ್ಧ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಕೊವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra) ಪಾಲ್ಗೊಂಡಿದ್ದಕ್ಕಾಗಿ ಅವರು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದರು.

ಬಿಜೆಪಿಯವರು ಎಷ್ಟೇ ಕೇಸ್ ಹಾಕಿದರೂ ನಾವು ಹೆದರುವುದಿಲ್ಲ. ಬಿಜೆಪಿಯ ಸಿಎಂ, ಕೇಂದ್ರ ಸಚಿವರು, ಸಚಿವರು ರ್ಯಾಲಿ ಮಾಡಿದ್ದಾರೆ. ಆ ಸಂಬಂಧ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ಅವರ ರ್ಯಾಲಿ ಬಗ್ಗೆ ಯಾವುದೇ ಚಾರ್ಜ್​ಶೀಟ್ ದಾಖಲಾಗಿಲ್ಲ. ರಾಜ್ಯ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಮ್ಮ ರಾಷ್ಟ್ರ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಕೇಂದ್ರ ಸರ್ಕಾರ ಬಹಳ ದೊಡ್ಡ ತಪ್ಪು ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡುವುದೇ ತಪ್ಪಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡಾ.ಅಶ್ವತ್ಥ್ ನಾರಾಯಣ ದೇಶ ಕಂಡ ಅತ್ಯಂತ ಭ್ರಷ್ಟ ಸಚಿವ; ವಿಸಿಗಳ ನೇಮಕದಲ್ಲಿ ದುಡ್ಡು ಮಾಡಿದ್ದಾರೆ ಎಂದು ಆರೋಪ ಮಾಡಿದ ಡಿ.ಕೆ.ಶಿವಕುಮಾರ್

ಇದನ್ನೂ ಓದಿ
Image
DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು
Image
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಪತ್ರ: ನೆರೆರಾಜ್ಯದ ಯೋಜನೆಗೆ ತಕರಾರು ತಪ್ಪು ಎಂದ ಗೋವಿಂದ ಕಾರಜೋಳ
Image
Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ
Image
ತಮಿಳುನಾಡಿಗೆ ಟಾಂಗ್! ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರದಿಂದಲೂ ನಿರ್ಣಯ

ಬಿಜೆಪಿಯವರು ಯಾವ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ? ನಮ್ಮ ನಾಯಕರು ಮಾಡಿಕೊಂಡಿದ್ದ ಸಂಸ್ಥೆಯನ್ನ ನಾವು ಮುಂದುವರೆಸಿದ್ದೇವೆ. ಕೇಂದ್ರ ಸರ್ಕಾರ ಬಹಳ ದೊಡ್ಡ ತಪ್ಪು ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡುವುದು ಹಕ್ಕು. ಹೋರಾಟ ಮಾಡದಿದ್ದರೇ ಏನು ಮಾಡಲು ಸಾಧ್ಯ? ರಾಜ್ಯದಲ್ಲಿ ತುರ್ತುಪರಿಸ್ಥಿತಿ ಹೇರಿಕೆ ಮಾಡಿಲ್ಲ. ಕಾಂಗ್ರೆಸ್ ನವರು ಯಾವುದೇ ಕಳ್ಳತನ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಏನಿದು ಪ್ರಕರಣ?:

ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು 29 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದರು. ಬಳಿಕ ನ್ಯಾಯಾಲಯದ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದರು. ಆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:24 pm, Wed, 15 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ