AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಕೆಶಿ ಕರೆ, ಆ.31ರಂದು ರಾಜಭವನ ಚಲೋ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಮತ್ತೆ ರಾಜ್ಯಪಾಲರ ವಿರುದ್ಧ ಹೋರಾಟಕ್ಕೀಳಿದು, ಆ.31ರಂದು ರಾಜಭವನ ಚಲೋಗೆ ಕರೆ ನೀಡಿದ್ದಾರೆ.

ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಕೆಶಿ ಕರೆ, ಆ.31ರಂದು ರಾಜಭವನ ಚಲೋ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Aug 27, 2024 | 4:28 PM

Share

ಬೆಂಗಳೂರು, ಆ.27: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK shivakumar)​ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನಲೆ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು ಎಂದು ಸೂಚನೆ ನೀಡಿದ್ದಾರೆ.

ಹೆಚ್​ಡಿಕೆ ವಿರುದ್ದ ಡಿಕೆಶಿ ಕಿಡಿ

ಇದೇ ವೇಳೆ ‘ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು, ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸ್ ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ SIT ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ SIT ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ ಎಂದು ಹೇಳಿದರು. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು.

ಇದನ್ನೂ ಓದಿ:ರಾಜಭವನ-ಸರ್ಕಾರ ಸಂಘರ್ಷ: ರಾಜ್ಯಪಾಲರಿಂದ 11 ಮಸೂದೆ ವಾಪಸ್

‘ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದರು. ‘ಯಾರೇ ಆಗಿರಲಿ, ಫೋರ್ಜರಿ ಮಾಡಿದವರ ಬಗ್ಗೆ ದೂರು ಕೊಡಬೇಕು. ನಾನು ಜಾಮೀನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ನಾನು ಕುಮಾರಸ್ವಾಮಿ ಬ್ರದರ್ ಆಸ್ತಿ ವಿವರವನ್ನೆಲ್ಲ ಕೇಳಿದ್ದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?