ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಕೆ ಶಿವಕುಮಾರ್ ಆಗ್ರಹ

| Updated By: ಆಯೇಷಾ ಬಾನು

Updated on: Jul 27, 2022 | 5:03 PM

ಪ್ರವೀಣ್ ನೆಟ್ಟಾರು ಕುಟುಂಬ, ಸ್ನೇಹಿತ ವರ್ಗಕ್ಕೆ ಸಂತಾಪಗಳು. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಕೆ ಶಿವಕುಮಾರ್ ಆಗ್ರಹ
ಡಿಕೆ ಶಿವಕುಮಾರ್
Follow us on

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ(Praveen Nettar) ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್(DK Shivakumar) ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರವೀಣ್ ನೆಟ್ಟಾರು ಭೀಕರ ಹತ್ಯೆಗೀಡಾಗಿದ್ದು ಬೇಸರದ ಸಂಗತಿ. ಪ್ರವೀಣ್ ನೆಟ್ಟಾರು ಕುಟುಂಬ, ಸ್ನೇಹಿತ ವರ್ಗಕ್ಕೆ ಸಂತಾಪಗಳು. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ಪೈಶಾಚಿಕ ಕೃತ್ಯ ಇಲ್ಲಿಗೆ ಕೊನೆಯಾಗಲಿ -ಎಂ.ಬಿ. ಪಾಟೀಲ್

ಇನ್ನು ಪ್ರವೀಣ್ ಹತ್ಯೆಗೆ ಕೆಪಿಸಿಸಿ ಪ್ರಚಾರ ಸಮೀತಿ ಆಧ್ಯಕ್ಷ ಎಂ.ಬಿ. ಪಾಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಹತ್ಯೆ ಖಂಡನೀಯ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಪ್ರವೀಣ ಕುಟುಂಬಸ್ಥರಿಗೆ ಸಂತಾಪ. ಪೈಶಾಚಿಕ ಕೃತ್ಯ ಇಲ್ಲಿಗೆ ಕೊನೆಯಾಗಲಿ, ರಾಜ್ಯ-ದೇಶದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲಿ. ಹಂತಕರನ್ನ ಪತ್ತೆ ಹಚ್ಚಿ ಉಗ್ರ ಶಿಕ್ಷೆ ನೀಡಿ ಎಂದು ಆಗ್ರಹಿಸಿದ್ದಾರೆ.

Published On - 4:59 pm, Wed, 27 July 22