ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಬಿಜೆಪಿ ಸಮರ್ಥಿಸಿಕೊಂಡಿದೆ, ಈಶ್ವರಪ್ಪ ರಾಜೀನಾಮೆ ನೀಡಲೇಬೇಕು -ಡಿಕೆಶಿ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸ್ತಿದ್ದಾರೆ. ಸಚಿವ ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. -ಡಿಕೆ ಶಿವಕುಮಾರ್

ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಬಿಜೆಪಿ ಸಮರ್ಥಿಸಿಕೊಂಡಿದೆ, ಈಶ್ವರಪ್ಪ ರಾಜೀನಾಮೆ ನೀಡಲೇಬೇಕು -ಡಿಕೆಶಿ
ಡಿಕೆ ಶಿವಕುಮಾರ್
Follow us
TV9 Web
| Updated By: ಆಯೇಷಾ ಬಾನು

Updated on:Feb 20, 2022 | 11:11 AM

ಬೆಂಗಳೂರು: ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ತೀರ್ಮಾನ ಮಾಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಕ್ಷಮೆ ಕೇಳುವುದೆಲ್ಲಾ ಬೇಕಾಗಿಲ್ಲ. ಈಶ್ವರಪ್ಪ ರಾಜೀನಾಮೆ ನೀಡಲೇಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯ ಮಾಡಿದ್ದಾರೆ.

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸ್ತಿದ್ದಾರೆ. ಸಚಿವ ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ. ಈಶ್ವರಪ್ಪರನ್ನ ವಜಾ ಮಾಡದಿದ್ದರೆ ಹೋರಾಟ ಮಾಡ್ತೇವೆ. ಜಿಲ್ಲಾ, ತಾಲೂಕು ಮಟ್ಟದಲ್ಲೂ ಹೋರಾಟ ಮಾಡ್ತಿದ್ದೇವೆ. ನಿಮ್ಮ ದುರಾಡಳಿತದಲ್ಲಿ ಏನೆಲ್ಲಾ ನಡೆಯುತ್ತಿದ್ದೆ ಇದೆಲ್ಲ ಸಾಕ್ಷಿ. ಸಚಿವ ಈಶ್ವರಪ್ಪರನ್ನ ಸಮರ್ಥಿಸುತ್ತಿರುವುದಕ್ಕೆ ನಮ್ಮ ಖಂಡನೆ ಇದೆ. ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ರು, ಏಕೆ ಕೇಸ್ ಹಾಕಿದ್ರಿ? ಪೋಷಕರಿದ್ದಾರೆ, ಶಿಕ್ಷಕರಿದ್ದಾರೆ ಅವೆಲ್ಲಾ ನಿಮಗೇಕೆ? ರಾಜ್ಯದಲ್ಲಿ ಅಶಾಂತಿ ಮೂಡಿಸುವುದಕ್ಕೆ ಪ್ರಯತ್ನಿಸುತ್ತಿದ್ದೀರಿ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.

ಯಾಱರು ಏನೇನು ಮಾತನಾಡುತ್ತಿದ್ದಾರೋ ಮಾತನಾಡಲಿ. ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರು ಬಂದು ಬೆಂಬಲ ಕೊಟ್ಟರು. ನಮ್ಮ ಧರಣಿ ಕುರಿತು ಬೇರೆ ರಾಜ್ಯಗಳಿಂದಲೂ ಕರೆ ಬರುತ್ತಿವೆ. ಕರ್ನಾಟಕದ ಕಾಂಗ್ರೆಸ್ ಶಾಸಕರು ಒಳ್ಳೇ ಕೆಲಸ ಮಾಡ್ತಿದಾರೆ. ಒಳ್ಳೇದು ಅಂತ ಬೇರೆ ರಾಜ್ಯಗಳ ರಾಜಕಾರಣಿಗಳು ಹೇಳ್ತಿದ್ದಾರೆ. ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರು ಬಂದು ಹೇಳಿದ್ದಾರೆ. ಸಿಂಗಾಪುರ ಪಿಎಂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡಿದ್ದಾರೆ. ಬೇರೆಬೇರೆ ದೇಶಗಳಿಂದ ಕೇಂದ್ರದ ನಡೆ ಬಗ್ಗೆ ಟೀಕೆ ಬರ್ತಿವೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ರು.

ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಲ್ಲಿ ಬಿಜೆಪಿ ತುರ್ತು ಸಭೆ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ವಿಚಾರಕ್ಕೆ ಸಂಬಂಧಿಸಿ ಬೆಳವಣಿಯನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಲ್ಲಿ ಬಿಜೆಪಿ ತುರ್ತು ಸಭೆ ನಡೆಸಲು ತೀರ್ಮಾನಿಸಿದೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಭೆ ನಿಗದಿಯಾಗಿದೆ. ರಾಜ್ಯವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿರುವ ಹಿನ್ನೆಲೆ ಮುಂದಿನ‌ ಕಾರ್ಯತಂತ್ರದ ಬಗ್ಗೆ ಬಿಜೆಪಿ ನಾಯಕರು ಚರ್ಚಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಿಎಂ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿಎಸ್ವೈ, ಸಚಿವ ಈಶ್ವರಪ್ಪ ಸೇರಿದಂತೆ ರಾಜ್ಯದ ಬಿಜೆಪಿ ಪ್ರಮುಖರು ಸಭೆ ನಡೆಸಲಿದ್ದಾರೆ.

‘ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ’ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ವಿಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ ಈ ವಿವಾದದ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನನ್ನ ಸ್ನೇಹಿತರೇ’ ಮತ್ತೆ ಹೇಳಿಕೆ ನೀಡಿ ವಿವಾದ ಬೆಳೆಸುವುದು ನನಗಿಷ್ಟವಿಲ್ಲ. ನಾನೊಂದು ಹೇಳಿಕೆ ಕೊಟ್ಟರೆ ಅವರೊಂದು ಹೇಳುತ್ತಾರೆ. ಹೀಗಾಗಿ ಈ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ರಾಜ್ಯದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಸದನದಲ್ಲಿ ಚರ್ಚಿಸಲು ವಿಪಕ್ಷಗಳು ಅವಕಾಶ ನೀಡಬೇಕು ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ.

ಇದನ್ನೂ ಓದಿ: 58 ವರ್ಷದಿಂದ ಇದ್ದ ದೇಗುಲದ ಗುಡ್ಡಪ್ಪ ನೇಮಕ ವಿವಾದಕ್ಕೆ ತೆರೆ; ದೇವಾಲಯದ ಕೊಳಕ್ಕೆ ತಳ್ಳಿ ಅರ್ಚಕರ ಆಯ್ಕೆ ಮಾಡಿದ ಬಸಪ್ಪ

ಬುರ್ಖಾನೂ ತೆಗೆಸಬಾರದು, ಹಿಜಾಬ್ ಕೂಡ ತೆಗೆಸಬಾರದು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಫರ್ಮಾನು

Published On - 11:08 am, Sun, 20 February 22

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ