ಕೆಎಎಸ್ ಪರೀಕ್ಷೆ ಸಿದ್ಧತೆ, ಭದ್ರತೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಸಭೆ: ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿಟ್ಟಾಗಿ ಎಕ್ಸಾಂ ನಡೆಸುವಂತೆ ಸೂಚನೆ

ಪಾರದರ್ಶಕವಾಗಿ ಹಾಗೂ ಅಕ್ರಮ ರಹಿತವಾಗಿ ಕೆಎಎಸ್ (KPSC) ಪರೀಕ್ಷೆ ನಡೆಸಲು ಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನ ಭದ್ರತೆ, ಸಿಸಿಟಿವಿ ನಿಗಾ ಹಾಗೂ ಇಬ್ಬರು ಮೇಲ್ವಿಚಾರಕರ ನೇಮಕಕ್ಕೆ ಸಭೆಯಲ್ಲಿ ನಿರ್ದೇನ ನೀಡಿದ್ದಾರೆ. ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕದಂತಹ ಪರೀಕ್ಷೆ ಸುಧಾರಣಾ ಕ್ರಮಗಳಿಗೆ ಸಭೆಯಲ್ಲಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.

ಕೆಎಎಸ್ ಪರೀಕ್ಷೆ ಸಿದ್ಧತೆ, ಭದ್ರತೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಸಭೆ: ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿಟ್ಟಾಗಿ ಎಕ್ಸಾಂ ನಡೆಸುವಂತೆ ಸೂಚನೆ
ಕೆಎಎಸ್ ಪರೀಕ್ಷೆ ಸಿದ್ಧತೆ, ಭದ್ರತೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಸಭೆ
Edited By:

Updated on: Nov 12, 2026 | 2:34 PM

ಬೆಂಗಳೂರು, ನವೆಂಬರ್​​ 12: ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿಟ್ಟಾಗಿ KPSC ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್​​ ಸೂಚನೆ ನೀಡಿದ್ದಾರೆ. ಕೆಎಎಸ್ ಪರೀಕ್ಷೆ ಸಿದ್ಧತೆ, ಭದ್ರತೆ ಬಗ್ಗೆ ಗೃಹಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್​​ ಮೂಲಕ ಸಭೆ ನಡೆಸಿದ ಅವರು ಪಾರದರ್ಶಕವಾಗಿ ಮತ್ತು ಅಕ್ರಮ ರಹಿತ ಪರೀಕ್ಷೆ ನಡೆಸಲು ಸಿದ್ಧತೆಗೆ ನಿರ್ದೇಶನ ನೀಡಿದ್ದಾರೆ. ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಿ, ಸುಳ್ಳು ವದಂತಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕದಂತಹ ಪರೀಕ್ಷೆ ಸುಧಾರಣಾ ಕ್ರಮಗಳಿಗೆ ಸಭೆಯಲ್ಲಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ನೀಡಿರುವ ಸೂಚನೆಗಳು

  • ಕೆಪಿಎಸ್ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ
  • ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ನಿಗಾ ವಹಿಸಬೇಕು
  • ಪೊಲೀಸ್ ನೇಮಕಾತಿ ಪರೀಕ್ಷೆಯ ಮಾದರಿಯಲ್ಲಿಯೇ ಸೂಕ್ತ ಭದ್ರತೆ ವ್ಯವಸ್ಥೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ
  • ಪರೀಕ್ಷಾ ಕೇಂದ್ರದ ಆವರಣದಲ್ಲಿ ಯಾವುದೇ ಅನಧಿಕೃತ ವ್ಯಕ್ತಿಯ ಪ್ರವೇಶಕ್ಕೆ ಅವಕಾಶ ನೀಡಬೇಡಿ, ಪ್ರವೇಶಕ್ಕೆ ಅನುಮತಿ ಇರುವ ವ್ಯಕ್ತಿಯೂ ಭದ್ರತಾ ತಪಾಸಣೆಗೆ ಒಳಪಡಬೇಕು
  • ಪರೀಕ್ಷಾ ಕೇಂದ್ರದ ಸೂಕ್ಷ್ಮತೆಯನ್ನು ಗುರುತಿಸಿ, ಅದಕ್ಕೆ ತಕ್ಕಂತೆ ಸಿಬ್ಬಂದಿ ನಿಯೋಜನೆ ಮಾಡುವಂತೆ ಸೂಚನೆ
  • ಹೆಚ್ಚುವರಿ ಭದ್ರತಾ ಉಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಬಹುದು
  • ಭದ್ರತೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅಗತ್ಯವಿದ್ದಲ್ಲಿ ಇತರ ಕಡೆಗಳಿಂದ ನಿಯೋಜಿಸಿ
  • ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್‌ನೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ಅಂತಹ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.
  • ಇದೇ ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ ಮಾಡಲಾಗುತ್ತಿದ್ದು, ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜು ಸಿಬ್ಬಂದಿಯಾಗಿರಬೇಕು
  • ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪರೀಕ್ಷಿಸಿದ ನಂತರ ಮತ್ತೊಮ್ಮೆ ತಪಾಸಣೆ ನಡೆಸುವುದು

ಇದನ್ನೂ ಓದಿ: 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನ.15ರಂದು ಪೂರ್ವಭಾವಿ ಪರೀಕ್ಷೆ: ಅಕ್ರಮ ತಡೆಗೆ ಹೇಗಿದೆ ಗೊತ್ತಾ ಕೆಪಿಎಸ್​​ಸಿ ಮಾಸ್ಟರ್​​ ಪ್ಲ್ಯಾನ್​​?

Loading...

ಇನ್ನು ಡಿಸಿ, ಎಸ್​ಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ನಡೆಸಿದ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ, ಡಿಜಿ ಮತ್ತು ಐಜಿಪಿ ಡಾ.ಸಲೀಮ್, ಒಳಾಡಳಿತ ಇಲಾಖೆ ಎಸಿಎಸ್ ರಾಜೇಂದ್ರ ಕುಮಾರ್ ಕಟಾರಿಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸಿಎಸ್ ಡಾ.ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಕೆ.ಜಿ.ಜಗದೀಶ್, ಕೆಪಿಎಸ್​ಸಿ ಕಾರ್ಯದರ್ಶಿ ಕೆ.ಜ್ಯೋತಿ, ಪರೀಕ್ಷಾ ನಿಯಂತ್ರಕ ಹೆಚ್.ಪ್ರಸನ್ನ ಮತ್ತು ಖಜಾನೆ ಇಲಾಖೆ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
Loading...
Unable to load recommendations.
Follow Us