AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್

ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ದೂರು ನೀಡಿದ್ದರು.

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್
ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes
ರಮೇಶ್​ ಎಮ್​.
| Edited By: |

Updated on: Mar 05, 2026 | 3:11 PM

Share

ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​ಗೂ ಎಕ್ಸ್​​ನ ಪೋಸ್ಟ್​​​ಗೂ ಸಂಬಂಧವಿಲ್ಲವೆಂದು ಡಿಕೆ ಶಿವಕುಮಾರ್​ ಪರ ವಕೀಲ ಹೆಚ್.ವಿ.ಪ್ರವೀಣ್ ಗೌಡ ವಾದಿಸಿದ್ದಾರೆ. ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆಗೆ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದನ್ನು ಡಿಕೆ ಶಿವಕುಮಾರ್​​ ಸೇರಿದಂತೆ ಕಾಂಗ್ರೆಸ್​​ ನಾಯಕರು ತಿರುಚಿ ಪೋಸ್ಟರ್​​ಗಳನ್ನು ಹಾಕಿದ್ದರು.

ಇದನ್ನೂ ಓದಿ: ಕರಸೇವಕರ ಪಟ್ಟಿ ಕೋಡುತ್ತೇನೆ, ತಾಕತ್ತಿದ್ದರೆ ಸಿದ್ದರಾಮಯ್ಯ ಬಂಧಿಸಲಿ: ಸುನೀಲ ಕುಮಾರ, ಬಿಜೆಪಿ ಶಾಸಕ

ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಆರೋಪ ಹಿನ್ನೆಲೆ ದೂರು ದಾಖಲಾಗಿತ್ತು. ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಬಿಆರ್​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್