ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು

ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ.

ಎಐಸಿಸಿಗೆ ಹಣ ಕಳಿಸ್ತಿದ್ದಾರೆ ಎಂಬ ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 29, 2024 | 7:09 PM

ಬೆಂಗಳೂರು, ಮಾ.29: ಚುನಾವಣಾ ಕೆಲಸಕ್ಕಾಗಿ ರಾಜ್ಯ ಕಾಂಗ್ರೆಸ್​, ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪಕ್ಕೆ ಅವರು ಐಟಿ ಅಧಿಕಾರಿನಾ ಎಂದು ಡಿ.ಕೆ ಶಿವಕುಮಾರ್(D. K. Shivakumar) ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷಕ್ಕೆ ಐಟಿ ಇಲಾಖೆ 1823 ಕೋಟಿ ರೂ. ಕಟ್ಟಬೇಕೆಂದು ನೋಟಿಸ್​ ಕೊಟ್ಟಿದೆ. ನಾವು ಎಐಸಿಸಿಗೆ ದುಡ್ಡು ಕಳುಹಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾಹಿತಿ ಇದೆ. ಈ ಹಿನ್ನಲೆ ಅಸೂಯೆಯಿಂದ ಹೆಚ್​.ಡಿ.ದೇವೇಗೌಡರು ಮಾತನಾಡುತ್ತಿದ್ದಾರೆ. ಇವರೇ JDS ಪಕ್ಷವನ್ನು ವಿಲೀನ ಮಾಡಿಬಿಟ್ಟರೆಂಬ ನೋವು ಇದೆ. ವಿರೋಧ ಪಕ್ಷದವರು ಪ್ರಬಲವಾಗಿರಬೇಕು ಎಂದು ನಮ್ಮ ಆಸೆ. ಆದರೆ, ಇವರೇ ಬಿಜೆಪಿ ಜೊತೆಗೆ ಪಾರ್ಟಿ ವಿಲೀನ ಮಾಡುತ್ತಿದ್ದಾರಲ್ಲ. ಬಹಳ ದೊಡ್ಡ ನಾಯಕರು, ನಮ್ಮ ಪಾರ್ಟಿ ಸಂಪರ್ಕ ಮಾಡುತ್ತಿದ್ದಾರೆ. ಈಗ ಹೆಸರು ಹೇಳುವುದಕ್ಕೆ ಹೋಗುವುದಿಲ್ಲ ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ 40 ಶಾಸಕರೊಂದಿಗೆ ಬಿಜೆಪಿ ಸೇರಲು ಸಿದ್ದರಾಗಿದ್ದಾರೆಂದು ಮುನಿರತ್ನ ನಾಯ್ಡು ಹೇಳುತ್ತಾರೆ!

ಎಚ್‌ಡಿಡಿ ಮಾಡಿದ್ದ ಆರೋಪವೇನು?

ಇಂದು(ಮಾ.29) ನಗರದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ರಾಜ್ಯ ಕಾಂಗ್ರೆಸ್‌ನಿಂದ ಎಐಸಿಸಿಗೆ ಹಣವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ದೇವೇಗೌಡರ ಈ ಆರೋಪ ಇದೀಗ ಗಂಭೀರ ಚರ್ಚೆಗೆ ಕಾರಣವಾಗುತ್ತಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಇದಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 29 March 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us