ಬೆಂಗಳೂರು: ಜನವರಿ 9ರಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮೇಕೆದಾಟು ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ಪ್ರಚಾರ ವಾಹನಗಳಿಗೆ ಇಂದು (ಜ.4) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಪ್ರಚಾರ ವಾಹನಗಳಿಗೆ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಲ್ಲ. ಈ ಮೂಲಕ ಪಕ್ಷಾತೀತ ಹೋರಾಟವೆಂದು ಕಾಂಗ್ರೆಸ್ ಪಕ್ಷ ಪ್ರಚಾರ ನಡೆಸುತ್ತಿದೆ. ಇನ್ನು ಕಾಂಗ್ರೆಸ್ ಪಾದಯಾತ್ರೆ ತಡೆದರೆ ಜೈಲ್ ಭರೋ ಚಳವಳಿ ಮಾಡಲು ಕಾಂಗ್ರೆಸ್ ತೀರ್ಮಾನಿಸಿದೆ.
ಪಾದಯಾತ್ರೆ ಬೆಂಗಳೂರು ನಗರ ಪ್ರವೇಶಿಸದಂತೆ ತಡೆ ಒಡ್ಡುವ ಸಾಧ್ಯತೆಯಿದೆ. ಈ ಹಿನ್ನಲೆ ಗಡಿ ಭಾಗದಲ್ಲೇ ಹೆಚ್ಚೆಚ್ಚು ಜನ ಸೇರಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಪ್ರತಿ ಜಿಲ್ಲಾ ಮುಖಂಡರಿಗೂ ಜನ ಸೇರಿಸಲು ಸೂಚನೆ ನೀಡಲಾಗಿದೆ. ಪಾದಯಾತ್ರೆ ಮಾರ್ಗದುದಕ್ಕೆ ಸರ್ಕಾರದಿಂದ ಹೋಟೆಲ್ ವಸತಿ ಬಂದ್ ಮಾಡಿಸುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಾಗಿ ಕಲ್ಯಾಣ ಮಂಟಪ ಬುಕ್ ಮಾಡಲು ತೀರ್ಮಾನಿಸಲಾಗಿದೆ.
ಕಾಂಗ್ರೆಸ್ ಪಾದಯಾತ್ರೆ
ಗದಗ: ನರಗುಂದ ಕ್ಷೇತ್ರದ ಅಭಿವೃದ್ಧಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಿಂದ ಕಾಂಗ್ರೆಸ್ ನಾಯಕರ ಪಾದಯಾತ್ರೆ ಮಾಡಿದ್ದಾರೆ. ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿಎಸ್ ಪಾಟೀಲ್, ಮಾಜಿ ಸಚಿವ ಬಿಆರ್ ಯಾವಗಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಪಾದಯಾತ್ರೆ ವೇಳೆ ಕೆಲ ಕಾರ್ಯಕರ್ತರು ಮಾಸ್ಕ್ ಧರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮಾಸ್ಕ್ ಹಾಕಿಕೊಳ್ಳದ ಕಾರ್ಯಕರ್ತನನ್ನು ಸಚಿವರು ತಳ್ಳಿದ್ದಾರೆ. ಕಾರ್ಯಕರ್ತ ಮಾಸ್ಕ್ ಧರಿಸದಿದ್ದಕ್ಕೆ ಸಿಸಿ ಪಾಟೀಲ್ ಗರಂ ಆಗಿದ್ದರು. ಒಮ್ಮೆ ಹೇಳಿದರೆ ತಿಳಿದುಕೊಳ್ಳಬೇಕು ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ
Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!
ಬೋಲ್ಡ್ ದೃಶ್ಯಗಳಲ್ಲೇ ಮಿಂಚುತ್ತಿದ್ದಾರೆ ಕೃತಿ ಶೆಟ್ಟಿ; ವೈರಲ್ ಆಗುತ್ತಿವೆ ಫೋಟೋಗಳು