ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜುಗಳಿಗೆ ರಜೆ; ಸರ್ಕಾರದ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ಕೆಂಡಾಮಂಡಲ

ಅಗ್ನಿಪಥ್ ಯೋಜನೆ ತಂದಿದ್ದೀರಾ, ಆ ಮಕ್ಕಳು ಡಿಗ್ರಿ ಪಾಸ್ ಮಾಡಬಾರದಾ? ಇಷ್ಟು ವರ್ಷ ದೇಶವನ್ನು ಎಂಥೆಂತ ಸಂದರ್ಭಗಳಲ್ಲಿ ರಕ್ಷಣೆ ಮಾಡಿದ್ದಾರಲ್ಲ. ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳಿಸಲಿ ನೋಡೋಣ.

ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜುಗಳಿಗೆ ರಜೆ; ಸರ್ಕಾರದ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ಕೆಂಡಾಮಂಡಲ
ಡಿಕೆ ಶಿವಕುಮಾರ್
Follow us
TV9 Web
| Updated By: sandhya thejappa

Updated on:Jun 19, 2022 | 12:21 PM

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದು, ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ? ರೋಡಲ್ಲಿ ಏನು ಸೆಕ್ಯುರಿಟಿ ಕೊಡಬೇಕೋ ಕೊಡಿ. ರೋಡ್ ಶೋ ಮಾಡಿ ರಾಜಕೀಯ ಮಾಡಿ. ಆದರೆ ವಿದ್ಯಾರ್ಥಿ ಗಳನ್ನು ಯಾಕೆ ಅನುಮಾನದಿಂದ ನೋಡ್ತಿದ್ದೀರಾ? ನಮ್ಮ ವಿದ್ಯಾರ್ಥಿಗಳೇನು ಟೆರರಿಸ್ಟ್​ಗಳಾ? ಎಂದು ಪ್ರಶ್ನಿಸಿದ್ದಾರೆ.

ಅಗ್ನಿಪಥ್ ಯೋಜನೆ ತಂದಿದ್ದೀರಾ, ಆ ಮಕ್ಕಳು ಡಿಗ್ರಿ ಪಾಸ್ ಮಾಡಬಾರದಾ? ಇಷ್ಟು ವರ್ಷ ದೇಶವನ್ನು ಎಂಥೆಂತ ಸಂದರ್ಭಗಳಲ್ಲಿ ರಕ್ಷಣೆ ಮಾಡಿದ್ದಾರಲ್ಲ. ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳಿಸಲಿ ನೋಡೋಣ. ಮಂತ್ರಿಗಳ ಮಕ್ಕಳು ಇಂಜಿನಿಯರ್ ಆಗಬೇಕು, ಡಾಕ್ಟರ್ ಆಗಬೇಕು. ಆದರೆ ಬಡವರ ಮಕ್ಕಳು ಮಾತ್ರ ಸೆಕ್ಯುರಿಟಿ ಗಾರ್ಡ್​ಗಳಾಗಬೇಕಾ? ಮೋದಿ ಬರುತ್ತಿರುವುದು ಜನರಿಗೆ ಅನುಕೂಲ ಅಲ್ಲ, ನಾಯಕರ ಅನುಕೂಲಕ್ಕೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಕಾಬೂಲ್ ಗುರುದ್ವಾರ ದಾಳಿಯ ಹೊಣೆ ಹೊತ್ತ ಐಸಿಸ್ ಉಗ್ರರು: ಮೃತರ ಸಂಖ್ಯೆಯನ್ನು ಮನಸೋಯಿಚ್ಛೆ ಹೆಚ್ಚಿಸಿ ಹೇಳಿದ ಭಯೋತ್ಪಾದಕರು

ಇದನ್ನೂ ಓದಿ
Image
Dinesh Karthik: ಭಾರತ ಟಿ20 ವಿಶ್ವಕಪ್ ಗೆಲ್ಲ ಬೇಕಾದ್ರೆ ಈ ಆಟಗಾರನನ್ನು ಆಯ್ಕೆ ಮಾಡಬೇಕು ಎಂದ ಡೇಲ್ ಸ್ಟೈನ್
Image
ಕಾಬೂಲ್ ಗುರುದ್ವಾರ ದಾಳಿಯ ಹೊಣೆ ಹೊತ್ತ ಐಸಿಸ್ ಉಗ್ರರು: ಮೃತರ ಸಂಖ್ಯೆಯನ್ನು ಮನಸೋಯಿಚ್ಛೆ ಹೆಚ್ಚಿಸಿ ಹೇಳಿದ ಭಯೋತ್ಪಾದಕರು
Image
ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ಸಿದ್ಧ; ಜಿಲ್ಲೆಯಲ್ಲಿ ಹಲವೆಡೆ ವಾಹನ ಸಂಚಾರ ಬದಲಾವಣೆ
Image
Employment: ಸ್ನಾತಕೋತ್ತರ ಪದವೀಧರರಿಗೆ ಸುಪ್ರೀಂ ಕೋರ್ಟ್​ನಲ್ಲಿನ ಉದ್ಯೋಗಾವಕಾಶ, 210 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇದೇ ವೇಳೆ ಪಠ್ಯ ಪರಿಷ್ಕರಣೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್,​ ಪಠ್ಯದಲ್ಲಿ ಹಲವಾರು ಸ್ವಾಮೀಜಿಗಳಿಗೆ ಅಪಮಾನ ಆಗಿದೆ. ಕೆಲ ಶ್ರೀಗಳಿಂದ ಟ್ವೀಟ್ ಮೂಲಕ ದೂರು ಕೊಡುವ ಕೆಲಸ ಆಗಿದೆ. ಆದರೆ ಇನ್ನಷ್ಟು ಸ್ವಾಮೀಜಿಗಳು ಧ್ವನಿ ಎತ್ತಬೇಕು. ಶ್ರೀಗಳು ರಾಜಕಾರಣಕ್ಕೆ ಬೆಂಬಲ ಕೊಡುವುದು ಬೇಡ. ಸ್ವಾಮೀಜಿಗಳು ಇರುವುದು ಸಂಸ್ಕೃತಿ, ನ್ಯಾಯ ಉಳಿಸಲು. ಸರ್ಕಾರಕ್ಕೆ ಹೆದರಿಕೊಂಡು ಸುಮ್ಮನಿರುವುದು ಬೇಡ. ಸರ್ಕಾರ ಶಾಂತಿ ಭಂಗ ಮಾಡುವ ಕೆಲಸ ಮಾಡುತ್ತಿದೆ. ಅವಮಾನ ಆದಾಗ ಒಕ್ಕಲಿಗರ ಸಂಘ ಏಕೆ ಮಾತಾಡ್ತಿಲ್ಲ? ಬೇರೆ ಸಂಘಟನೆಗಳು ಯಾಕೆ ಮಾತಾಡ್ತಿಲ್ಲ. ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಿರಬಹುದು. ಆದರೆ ಇದರಲ್ಲಿ ಹಾಗೆ ಇರಬಾರದು ಎಂದು ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Sun, 19 June 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ