ಕಾವೇರಿ ನದಿ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಆದೇಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 25, 2024 | 9:22 PM

ಕಾವೇರಿ ನದಿ ಮಾಲಿನ್ಯದ ಕುರಿತು ಎಂಎಲ್‌ಸಿ ದಿನೇಶ್ ಗೂಳಿಗೌಡ ಅವರ ಮನವಿ ಮೇರೆಗೆ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಜೊತೆಗೆ ಸಚಿವ ಎಂ.ಬಿ.ಪಾಟೀಲ್, ಈಶ್ವರ್​ ಖಂಡ್ರೆ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕಾವೇರಿ ನದಿ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಆದೇಶ
ಡಿಕೆ ಶಿವಕುಮಾರ್​
Follow us on

ಬೆಂಗಳೂರು, ಜೂ.25: ಕಾವೇರಿ ನದಿ (Cauvery River) ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆದೇಶಿಸಿದ್ದಾರೆ. ಎಂಎಲ್‌ಸಿ ದಿನೇಶ್ ಗೂಳಿಗೌಡ ಮನವಿ ಮೇರೆಗೆ ಡಿಸಿಎಂ ಸೂಚಿಸಿದ್ದಾರೆ. ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲಿಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ.

ಇನ್ನು ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ಎಂ.ಬಿ.ಪಾಟೀಲ್​ ಅವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಆದೇಶಿಸಿದರೆ, ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ಈ ಕುರಿತು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಮಿತಿ ರಚಿಸಿ ಎರಡು ವಾರದಲ್ಲಿ ವಿಸ್ತಾರವಾದ ವರದಿ ಸಲ್ಲಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ

ಕಾವೇರಿ ನದಿಗೆ ತ್ಯಾಜ್ಯ ಮಿಶ್ರಿತ ನೀರು ಪೂರೈಕೆ ಆಗುತ್ತಿರುವುದಕ್ಕೆ ಎಂಎಲ್​ಸಿ ದಿನೇಶ್ ಗೂಳಿಗೌಡ ಅವರು ಈ ಕುರಿತು ಕ್ರಮವಹಿಸಲು ತನಿಖಾ ತಂಡ ರಚನೆ ಮಾಡುವಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರಿಗೆ ಮನವಿ ಮಾಡಿದ್ದರು. ಅದರಂತೆ ಇಂದು ಡಿಸಿಎಂ ಡಿಕೆಶಿ ಅವರು ಸ್ಪಂಧಿಸಿ ಕ್ರಮಕ್ಕೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Tue, 25 June 24