ರಾಮೇಶ್ವರಂ ಕೆಫೆಯಲ್ಲಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋಗಿದ್ದಾನೆ: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಕೆಶಿ

Bomb Blast In rameshwaram cafe :ಬೆಂಗಳೂರು ಕುಂದಲಹಳ್ಳಿ ಸಮೀಪದ ಬ್ರೂಕ್‌ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ ಇಂದು (ಮಾ.1) ಮಧ್ಯಾಹ್ನ ಸಂಭವಿಸಿದ ಭೀಕರ ಬಾಂಬ್ ಸ್ಫೋಟದ ಸಿಸಿಟಿವಿ ದೃಶ್ಯ ಬಹಿರಂಗವಾಗಿದೆ. ಈ ಸ್ಫೋಟವನ್ನು ಆರಂಭದಲ್ಲಿ ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಬಳಿಕ ಇದು ಬಾಂಬ್ ಸ್ಫೋಟ ಎಂಬುವುದು ದೃಢವಾಗಿದೆ. ಇನ್ನು ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸ್ಫೋಟ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋಗಿದ್ದಾನೆ: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಕೆಶಿ
Edited By:

Updated on: Mar 01, 2024 | 9:00 PM

ಬೆಂಗಳೂರು, (ಮಾರ್ಚ್ 01): ಬೆಂಗಳೂರಿನ (Bengaluru) ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast )ಸಂಭವಿಸಿದ್ದು, ಸ್ಫೋಟದ ಶಬ್ದಕ್ಕೆ ಸುತ್ತಮುತ್ತಲಿನ ಸ್ಥಳೀಯರೇ ಬೆಚ್ಚಿಬಿದ್ದಿದ್ದಾರೆ. ಯಾರಿಗೆ ಏನಾಗಿದೆ ಎಂದು ಗೊತ್ತಾಗಿಲ್ಲ. ಕಣ್ಣು ತೆರೆದು ಬಿಡುವಷ್ಟರಲ್ಲೇ ಎಲ್ಲವೂ ಚೆಲ್ಲಾಪಿಲ್ಲಿಯಾಗಿದೆ. ವಸ್ತುಗಳೆಲ್ಲಾ ಪುಡಿಪುಡಿಯಾಗಿ ಬಿದ್ದಿವೆ. ಇನ್ನು ಘಟನಾ ಸ್ಥಳದಲ್ಲೇ ಬ್ಯಾಟರಿ, ಟೈಮರ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಟೈಮರ್​ ಇಟ್ಟು ಬಾಂಬ್ ಸ್ಪೋಟಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಟೈಮರ್​ ಇಟ್ಟು ಬಾಂಬ್ ಸ್ಟೋಟಿಸಲಾಗಿದೆ ಎನ್ನುವುದನ್ನು ಸ್ವತಃ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಖಚಿತಪಡಿಸಿದ್ದಾರೆ. ಅಲ್ಲದೇ ಬಾಂಬ್ ಇಟ್ಟು ಹೋಗಿರುವ ವ್ಯಕ್ತಿ ಕಲವೇ ಕ್ಷಣಗಳಲ್ಲಿ ಬಂಧಣವಾಗಲಿದೆ ಎಂದಿದ್ದಾರೆ.

ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇದೇ ಸುದ್ದಿಗಾರರೊಂದಿಗೆ ಮಾತನಾಡಿ ಡಿಕೆ ಶಿವಕುಮಾರ್, ಮಧ್ಯಾಹ್ನ 12ರ ಸುಮಾರಿಗೆ 30 ವರ್ಷದ ವ್ಯಕ್ತಿ ಬ್ಯಾಗ್ ತಂದಿಟ್ಟಿದ್ದ. ನಂತರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಸೇವಿಸಿ ಹೋಗಿದ್ದಾರೆ. ಟೈಮರ್ ಇಟ್ಟು ಮಧ್ಯಾಹ್ನ 12.55ಕ್ಕೆ ಕಡಿಮೆ ತೀವ್ರತೆ ಬಾಂಬ್ ಸ್ಫೋಟವಾಗಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಸ್ಥಳದಲ್ಲಿ ಬ್ಯಾಟರಿ ಜತೆ ಟೈಮರ್ ಪತ್ತೆ, ಟೈಂ ಬಾಂಬ್‌ ಶಂಕೆ?

ಕೆಲವೇ ಕ್ಷಣದಲ್ಲಿ ಆರೋಪಿ ಬಂಧನ

ಸ್ಫೋಟದಲ್ಲಿ ಗ್ರಾಹಕರು, ಸಿಬ್ಬಂದಿ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಜೀವಕ್ಕೆ ಅಪಾಯವಿಲ್ಲ. ಬ್ಯಾಗ್ ತಂದಿಟ್ಟಿದ್ದ ವ್ಯಕ್ತಿಯ ಚಹರೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸ್ ಇಲಾಖೆಯ ವಿವಿಧ ತಂಡಗಳು ತನಿಖೆ ನಡೆಸುತ್ತಿವೆ. ಕೆಲವೇ ಕ್ಷಣದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಮಾಡಲಿದ್ದಾರೆ. ಬೆಂಗಳೂರು ಸುರಕ್ಷಿತವಾಗಿದೆ, ಜನರು ಆತಂಕಪಡುವುದು ಬೇಡ ಎಂದು ಹೇಳಿದರು.

ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತೆ.

ಇನ್ನು ಡಿಸಿಎಂ, ಗೃಹ ಸಚಿವರು ಸ್ಪೋಟ ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ. ಯಾರು ಆತಂಕಪಡುವ ಅಗತ್ಯವಿಲ್ಲ. ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರಿಗೂ ಕಿವಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಯಾರಿಗೂ ತೊಂದರೆ ಇಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಿಳಿಸಿದರು.

ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ವಾಚ್

ಬಾಂಬ್ ಬ್ಲಾಸ್ಟ್ ಎನ್ನುವುದು ತಿಳಿಯುತ್ತಿದ್ದಂತೆಯೇ ಈ ಪ್ರಕರಣವನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಇಟ್ಟು ಹೋಗಿರವ ಆರೋಪಿ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ಪರಿಶೀನೆ ನಡೆದಿದೆ. ರಾಮೇಶ್ವರಂ ಕೆಫೆ ಮಾರ್ಗದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪೊಲಿಸರು ಪರಿಶೀಲನೆ ನಡೆಸಿದ್ದು, ಆತನ ಬಟ್ಟೆ ಹಾಗೂ ಚಲನವಲನ ಮೇಲೆ ಕಣ್ಣಿಟ್ಟಿದ್ದಾರೆ. ಬೆಳಗ್ಗೆ 12 ಗಂಟೆಯಿಂದ ಆರೋಪಿ ಎಲ್ಲೆಲ್ಲಿ ಓಡಾಡಿದ್ದ ಎಂದು ರಸ್ತೆಯುದ್ದಕ್ಕೂ ಮೂವ್ಮೆಂಟ್ ಆಗಿರುವುದನ್ನು ಕೂಲಂಕುಷ ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ