AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​

ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ ಕುರಿತು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
ಕಿರಣ್ ಹನುಮಂತ್​ ಮಾದಾರ್
|

Updated on: Aug 14, 2024 | 4:46 PM

Share

ಬೆಂಗಳೂರು, ಆ.14: ಯಾವುದೇ ಕಾರಣಕ್ಕೂ ಗ್ಯಾರಂಟಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಸ್ಪಷ್ಟನೆ ನೀಡಿದರು. ಇಂದು(ಬುಧವಾರ) ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷನಾಗಿ ಹೇಳ್ತಿದ್ದೀನಿ, ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಕೆಲ ಕಡೆ ಆದಾಯ ಹೆಚ್ಚಿರುವವರು ಗ್ಯಾರಂಟಿ ಪಡೆಯುತ್ತಿದ್ದಾರೆ. ಇದರ ಬಗ್ಗೆ ದೂರು ಇವೆ, ಅಂತಹದ್ದನ್ನು ಪರಿಶೀಲನೆ ಮಾಡುತ್ತೇವೆ ಎಂದರು.

ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ

ಪ್ರತಿ ಯೋಜನೆಗೆ ಐಡಿ ಕಾರ್ಡ್ ಮಾಡಬೇಕೆಂಬ ಪ್ರಸ್ತಾಪ ಇದೆ. ಇನ್ನು ಬಜೆಟ್​​ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದ್ದು, ಉಚಿತ ಪ್ರಯಾಣದಿಂದ ಪ್ರವಾಸೋದ್ಯಮ ವಹಿವಾಟು ಹೆಚ್ಚಾಗಿದೆ. 224 ಕ್ಷೇತ್ರದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಮಾಡಿದ್ದೇವೆ. ಪ್ರತಿ ಕ್ಷೇತ್ರದಲ್ಲಿ ಓರ್ವ ಸಮಿತಿ ಅಧ್ಯಕ್ಷರು, ಸದಸ್ಯರ ನೇಮಿಸಿದ್ದೇವೆ. ಗ್ಯಾರಂಟಿಗಳಲ್ಲಿ ಲೋಪ ಆಗಬಾರದು, ಲಂಚ ಕೇಳಬಾರದು. ಇವೆಲ್ಲವನ್ನ ನೋಡಿಕೊಳ್ಳುವುದಕ್ಕೆ ನಾವು ಸಮಿತಿ ರಚನೆ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಇದೇ ವೇಳೆ ಗ್ಯಾರಂಟಿಗೆ ಶಾಸಕರ ಅಸಮಾಧಾನ ವಿಚಾರ, ‘ಅವೆಲ್ಲವೂ ಸುಳ್ಳು, ಗ್ಯಾರಂಟಿ ತಂದುಬಿಟ್ಟರಲ್ಲ ಎಂದು ವಿರೋಧ ಪಕ್ಷಗಳು ಕೈ ಹಿಸುಕಿಕೊಳ್ಳುತ್ತೀವೆ. ಇನ್ನು ಗ್ಯಾರಂಟಿಯಿಂದ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಉತ್ತರಿಸಿ, ‘ಯಾವ ಸಚಿವರು ಹೇಳೋದಕ್ಕೆ ಆಗಲ್ಲ, ಯಾವ ಮುನಿಯಪ್ಪನು ಹೇಳಿಲ್ಲ, ಅವೆಲ್ಲವು ಸುಳ್ಳು. ಏನ್ ಕೊಡಬೇಕೋ ಕೊಟ್ಟಿದೆ. ಎಸ್​ ಎಮ್ ಕೃಷ್ಣ ಅವರು ಇದ್ದಾಗ ಬಜೆಟ್ 26 ಸಾವಿರ ಕೋಟಿ, ಈಗ ಮೂರು ಲಕ್ಷ ಕೋಟಿಯಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ