ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್​ ಐಎಎಸ್ ಘನತೆ ಕುಗ್ಗಿಸಿದ್ದಾರೆ: ಡಿಕೆ ಶಿವಕುಮಾರ್

DK Shivakumar Press Meet: ಡಿಕೆ ಶಿವಕುಮಾರ್ ತುಷಾರ್ ಗಿರಿ ನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಇಂಥ ನೀಚ ಕೆಲಸಕ್ಕೆ ಕೈ ಹಾಕಿದ್ದು ಇಡೀ ಐಎಎಸ್​ಗೆ ಅವಮಾನ ಎಂದಿದ್ದಾರೆ.

ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್​ ಐಎಎಸ್ ಘನತೆ ಕುಗ್ಗಿಸಿದ್ದಾರೆ: ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ
Follow us
TV9 Web
| Updated By: ಆಯೇಷಾ ಬಾನು

Updated on: Nov 17, 2022 | 11:22 AM

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್(Tushar Girinath) ಇಂಥ ನೀಚ ಕೆಲಸಕ್ಕೆ ಕೈ ಹಾಕಿದ್ದು ಇಡೀ ಐಎಎಸ್​ಗೆ(IAS) ಅವಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಬಿಎಂಪಿ ಬಿಜೆಪಿ ಕಾರ್ಯಕರ್ತರ ಕೈಯ್ಯಲ್ಲಿ ಕೆಲಸ ಮಾಡಿಸುತ್ತಿದೆ. ನಿನ್ನೆ ಇದ್ದಕ್ಕಿದ್ದಂತೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದೆ. ಚಿಲುಮೆ ಟ್ರಸ್ಟ್ ನಿಯಮ ಉಲ್ಲಂಘಿಸಿದೆ ಎನ್ನೋದು ಸ್ಪಷ್ಟವಾಗಿದೆ. ಈಗಾಗಲೇ ದಾಖಲೆಗಳನ್ನು ಅಪ್ಲೋಡ್ ಮಾಡಲಾಗಿದ್ದಕ್ಕೆ ಯಾರು ಜವಾಬ್ದಾರಿ? ಎಲ್ಲಿ ಎಫ್ಐಆರ್ ದಾಖಲು ಮಾಡಿದ್ದೀರ? ಯಾರನ್ನಾದ್ರೂ ಅರೆಸ್ಟ್ ಮಾಡಿದ್ದೀರಾ? ಎಲ್ಲದರಲ್ಲೂ ಲಂಚಾವತಾರ ನಡೆಯುತ್ತಿದೆ. ನೈಜ ಓಟರ್ ಐಡಿ ಕಿತ್ತುಹಾಕಲು ಇದೆಲ್ಲ ಮಾಡಲಾಗಿದೆ. ಎಸ್​ಸಿ, ಎಸ್‌ಟಿ ಓಟರ್ ಗಳ ದಾಖಲೆ ಕಿತ್ತುಹಾಕಲು ಹೀಗೆ ಮಾಡಲಾಗಿದೆ. ಒಂದೇ ರಸ್ತೆಯಲ್ಲಿ ಹೊಂಬಾಳೆ ಟ್ರಸ್ಟ್, ಹೊಂಬಾಳೆ ಕಂಪನಿ ಮಾಡಿಕೊಂಡಿದ್ದಾರೆ. ಅಲ್ಲಿಯೇ ಅವರದೇ ಮಾಲೀಕತ್ವದ ಚಿಲುಮೆ ಸಂಸ್ಥೆ ಮಾಡಲಾಗಿದೆ. ಇವರಿಗೆ ಒಂದೇ ಒಂದು ಚುನಾವಣೆ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

ಇದನ್ನೂ ಓದಿ: ನಂಬಿಕೆ ದ್ರೋಹ: ಮತದಾರರ ಪಟ್ಟಿ ನವೀಕರಣ ನೆಪದಲ್ಲಿ ಬೆಂಗಳೂರಿನ ಸಾವಿರಾರು ಮಂದಿಯ ಸೂಕ್ಷ್ಮ ಮಾಹಿತಿ ಸಂಗ್ರಹಿಸಿದ ಎನ್​ಜಿಒ

ಇದು ದೇಶದಲ್ಲೇ ಚರ್ಚೆ ಆಗಬೇಕಿರುವ ವಿಚಾರ. ಕೂಡಲೇ ಚುನಾವಣಾ ಆಯೋಗ ಸಮಗ್ರ ತನಿಖೆ ಮಾಡಬೇಕು. ಅಕ್ರಮದಲ್ಲಿ ಭಾಗಿಯಾದವರ ಮೇಲೆ ಎಫ್​ಐಆರ್​​ ದಾಖಲಿಸಬೇಕು. ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧವೂ FIR ದಾಖಲಿಸಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ವೋಟರ್​ ಐಡಿ ಅಕ್ರಮದ ಪಿತಾಮಹ ಡಾ.ಅಶ್ವತ್ಥ್​ ನಾರಾಯಣ. ಇವರ ಸಹಕಾರ ಇಲ್ಲದೇ ಈ ರೀತಿ ನಡೆಯುತ್ತಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಾಹಿತಿ ಸಂಗ್ರಹಿಸಿದ ಕಂಪನಿ ಮಾಲೀಕರ ವಿರುದ್ಧ ದೂರು ನೀಡ್ತೇವೆ. ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ