ಕರ್ನಾಟಕದಲ್ಲಿ ಕೊವಿಡ್​ನಿಂದ 4.5 ಲಕ್ಷ ಮಂದಿ ಸಾವು: ಸರ್ಕಾರದ ವಿರುದ್ಧ ಹರಿಹಾಯ್ದ ಡಿಕೆ ಶಿವಕುಮಾರ್

ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಕೊವಿಡ್​ನಿಂದ ಮೃತಪಟ್ಟವರ ಅಂಕಿಅಂಶಗಳನ್ನು ಮುಚ್ಚಿಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಕರ್ನಾಟಕದಲ್ಲಿ ಕೊವಿಡ್​ನಿಂದ 4.5 ಲಕ್ಷ ಮಂದಿ ಸಾವು: ಸರ್ಕಾರದ ವಿರುದ್ಧ ಹರಿಹಾಯ್ದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 06, 2022 | 2:00 PM

ಬೆಂಗಳೂರು: ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಕೊವಿಡ್​ನಿಂದ ಮೃತಪಟ್ಟವರ ಅಂಕಿಅಂಶಗಳನ್ನು ಮುಚ್ಚಿಟ್ಟಿದೆ. ಕೊವಿಡ್​ನಿಂದ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೆವು. ಆದರೆ ಸರ್ಕಾರ ನಮ್ಮ ಹೇಳಿಕೆಯನ್ನು ಒಪ್ಪಿರಲಿಲ್ಲ. ಕರ್ನಾಟಕದಲ್ಲಿ ಈವರೆಗೆ 4.5 ಲಕ್ಷ ಜನರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ನಮ್ಮ ಕನಕಪುರ ತಾಲೂಕಿನಲ್ಲೇ 500 ಜನ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರ ಕೇವಲ 100 ಜನರು ಮೃತಪಟ್ಟಿದ್ದಾರೆ ಎನ್ನುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದರು.

ಕೊರೊನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಭಾರತದಲ್ಲಿ ಕೊರೊನಾ ಸೋಂಕಿನಿಂದ 47 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಇದು ದೇಶಕ್ಕೆ ಬಿಜೆಪಿ ಸರ್ಕಾರವು ಕೊಟ್ಟ ಗಿಫ್ಟ್ ಎಂದು ವ್ಯಂಗ್ಯವಾಡಿದರು. ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಸಹ ಹೇಳಿದೆ. ಆದರೆ ಆರೋಗ್ಯ ಸಚಿವರು ಇದನ್ನು ಮುಚ್ಚಿ ಹಾಕುತ್ತಿದ್ದಾರೆ. ಕೂಡಲೇ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಬೇಕು. ಕೊರೊನಾದಿಂದ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಸರ್ಕಾರದಿಂದ ಭ್ರಷ್ಟರ ರಕ್ಷಣೆ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ. ಆದರೆ ಬಿಜೆಪಿ ಸರ್ಕಾರ ಏನೂ ಆಗಿಯೇ ಇಲ್ಲ ಎಂದು ಹೇಳುತ್ತಿದೆ. ನಾವೆಲ್ಲಾ ಯಾರ ರಕ್ಷಣೆಯಿಂದ ಬದುಕುತ್ತೇವೆ ಎಂದು ನಂಬಿಕೆ ಇಟ್ಟುಕೊಂಡಿದ್ದೇವೆಯೋ ಅವರ ಬಳಿಯೇ ಇವರು ಲಕ್ಷಲಕ್ಷ ಹಣ ಕಿತ್ತುಕೊಂಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಯುವಕರ ಭವಿಷ್ಯಕ್ಕಿಂತಲೂ ನಮಗೆ ಸಚಿವ ಅಶ್ವತ್ಥ ನಾರಾಯಣ ಅಥವಾ ಗೃಹ ಸಚಿವ ಆರಗ ಜ್ಞಾನೇಂದ್ರರ ಹಿತಾಕಸ್ತಿಗಳು ಮುಖ್ಯವಲ್ಲ. ಪರೀಕ್ಷೆ ಬರೆದ ಕೆಲ ಯುವಕರನ್ನೇನೋ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣದ ಪಾಲುದಾರರು, ಸೂತ್ರದಾರರು ಹಾಗೂ ಅಕ್ರಮ ಎಸಗಿದವರನ್ನು ಈವರೆಗೆ ಬಂಧಿಸಿಲ್ಲ. ಬಂಧಿತರು ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಬಿಜೆಪಿ ನಾಯಕರ ಹೆಸರುಗಳನ್ನು ವ್ಯವಸ್ಥಿತವಾಗಿ ಮುಚ್ಚಿಡುವ ಪ್ರಯತ್ನಗಳು ನಡೆಯುತ್ತಿವೆ. ಇದು ಕೇವಲ ನೇಮಕಾತಿ ಹಗರಣವಷ್ಟೇ ಅಲ್ಲ. ಬಿಜೆಪಿಯ ಕರ್ಮಕಾಂಡ ಎಂದು ಹರಿಹಾಯ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ Vs ಸಚಿವ ಡಾ. ಅಶ್ವತ್ಥ್‌ ನಾರಾಯಣ ; ಮಾತಿನ ಸಮರ

ಇದನ್ನೂ ಓದಿ: PSI Recruitment Scam: ಆಯ್ಕೆ ಪಟ್ಟಿ ರದ್ದತಿ ಮುಖ್ಯವಲ್ಲ, ಅಕ್ರಮದಲ್ಲಿ ಭಾಗಿಯಾದವರು ಹೊರಬರಬೇಕು; ಡಿಕೆ ಶಿವಕುಮಾರ್

Published On - 2:00 pm, Fri, 6 May 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ