ಜನರು ಇನ್ಮುಂದೆ ಮೋದಿ ಪ್ರವಚನ ಕೇಳ್ತಾ ಕೂರೋದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಉಚಿತ ಕೊರೊನಾ ಲಸಿಕೆ ವಿತರಣೆ ಆಗಬೇಕು. ಇಲ್ಲಿನ್ನೂ ಆಕ್ಸಿಜನ್​ ಸಮಸ್ಯೆಯೇ ಬಗೆಹರಿದಿಲ್ಲ. ಅಗತ್ಯ ವೈದ್ಯಕೀಯ ಸೇವೆ ಲಭ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ. ಕೊರೊನಾ ಸರ್ಟಿಫಿಕೇಟ್​ನಲ್ಲೂ ಭ್ರಷ್ಟಾಚಾರ ಆಗಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಜನರು ಇನ್ಮುಂದೆ ಮೋದಿ ಪ್ರವಚನ ಕೇಳ್ತಾ ಕೂರೋದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್
Follow us
Skanda
| Updated By: ಸಾಧು ಶ್ರೀನಾಥ್​

Updated on: Apr 23, 2021 | 2:13 PM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವುದಕ್ಕೆ ಸರ್ಕಾರ ಜಾರಿಗೆ ತಂದಿರುವ ಕೊರೊನಾ ಕಠಿಣ ನಿಯಮಾವಳಿಗಳು ಕಾರಣ. ಅವು ನಮಗೇ ಅರ್ಥವಾಗುತ್ತಿಲ್ಲ, ಇನ್ನು ಜನಸಾಮಾನ್ಯರಿಗೆ ಅರ್ಥವಾಗುತ್ತಾ? ಸೋಂಕಿತರಿಗೆ ಆಕ್ಸಿಜನ್, ರೆಮ್​ಡೆಸಿವರ್, ವೆಂಟಿಲೇಟರ್ ಸಿಗ್ತಾ ಇಲ್ಲ. ಇನ್ನೊಂದೆಡೆ ಕೊರೊನಾ ಲಸಿಕೆ ವಿತರಣೆಯೂ ಸರಿಯಾಗಿ ಆಗ್ತಾ ಇಲ್ಲ. ಹೀಗಿದ್ದಾಗ ಪ್ರಧಾನಿ ಮೋದಿ ಪ್ರವಚನವನ್ನು ಜನ ಇನ್ನು ಕೇಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಅಂಗಡಿ, ಮುಂಗಟ್ಟು ಮುಚ್ಚಿಸಿದರೆ ತೆರಿಗೆ ಸಂಗ್ರಹವೇಕೆ? ಎಲ್ಲಾ ರೀತಿಯ ತೆರಿಗೆ ಸಂಗ್ರಹಿಸಲಾಗ್ತಾ ಇದೆ. ಇನ್ನೊಂದೆಡೆ ಉಸ್ತುವಾರಿ ಸಚಿವರಿಗೆ ಜಿಲ್ಲೆಗೆ ತೆರಳಲು ಮುಖ್ಯಮಂತ್ರಿ ಸೂಚನೆ ನೀಡಿದ್ದರೂ ಸಚಿವ ಬಿ.ಶ್ರೀರಾಮುಲು ಪ್ರಚಾರದಲ್ಲಿ ತೊಡಗಿದ್ದಾರೆ. ಅವರ ಮೇಲೆ ಕೇಸ್ ದಾಖಲಿಸಬೇಕು ಎಂದು ಸಿಡಿಮಿಡಿಗೊಂಡಿದ್ದಾರೆ.

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಉಚಿತ ಕೊರೊನಾ ಲಸಿಕೆ ವಿತರಣೆ ಆಗಬೇಕು. ಇಲ್ಲಿನ್ನೂ ಆಕ್ಸಿಜನ್​ ಸಮಸ್ಯೆಯೇ ಬಗೆಹರಿದಿಲ್ಲ. ಅಗತ್ಯ ವೈದ್ಯಕೀಯ ಸೇವೆ ಲಭ್ಯವಾಗುತ್ತಿಲ್ಲ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡ್ತಿದೆ. ಕೊರೊನಾ ಸರ್ಟಿಫಿಕೇಟ್​ನಲ್ಲೂ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ನಲಪ್ಪಾಡ್ ಕೇಸ್ ಬಗ್ಗೆ ಮಾತನಾಡಿ, ಅದೆಲ್ಲವೂ ಬೋಗಸ್ ಕಂಪ್ಲೆಂಟ್ ಸುಮ್ಮನೇ ರಾಜಕೀಯಕ್ಕಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್ 

ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಲಿ: ಈ ಬಗ್ಗೆ ಪ್ರಕಾಶ್ ಅಮ್ಮಣ್ಣಾಯ ಹೇಳೋದೇನು?

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ