ಸಿದ್ದರಾಮೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಟಕ್ಕರ್: ಶಿವಕುಮಾರೋತ್ಸವ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ

ಸಿದ್ದರಾಮಯ್ಯರ 75ನೇ ಅಮೃತ ಮಹೋತ್ಸವ ಸಮಿತಿಯಿಂದ ಇಂದು ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್​ನಲ್ಲಿ ಸಭೆ ನಡೆಯಲಿದೆ. ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. 

ಸಿದ್ದರಾಮೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಟಕ್ಕರ್: ಶಿವಕುಮಾರೋತ್ಸವ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 13, 2022 | 9:08 AM

ಬೆಂಗಳೂರು: ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaotsava) 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರ 75ನೇ ಅಮೃತ ಮಹೋತ್ಸವವನ್ನು ಆಚರಿಸಲು ಅವರ ಅಭಿಮಾನಿಗಳು, ಬೆಂಬಲಿಗರು ನಿರ್ಧರಿಸಿದ್ದಾರೆ. ಸದ್ಯ ಸಿದ್ದರಾಮೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲಿಗರಿಂದ ಟಕ್ಕರ್ ನೀಡಿದ್ದು, ಶಿವಕುಮಾರೋತ್ಸವ ಮಾಡುವಂತೆ ಡಿ.ಕೆ. ಶಿವಕುಂಆರ ಬೆಂಬಲಿಗರಿಂದ ಸಿದ್ದರಾಮಯ್ಯಗೆ ಕೆಪಿಸಿಸಿ ಮಾಧ್ಯಮ‌ ವಿಭಾಗದ ಸಂಯೋಜಕ ಜಿ.ಸಿ.ರಾಜು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯರ 75ನೇ ಅಮೃತ ಸಮಿತಿಯಿಂದ ಕಾರ್ಯಕ್ರಮ ನಡೆಯುತ್ತಿದ್ದು, ಅದೇ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಿದ್ದು, ಇಂದು ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವಂತೆ ಮನವಿ ಮಾಡಲಾಗಿದೆ. ಸೋನಿಯಾ, ರಾಹುಲ್ ಸೇರಿ ಹಿರಿಯ ನಾಯಕರಿಗೂ ಮನವಿ ಮಾಡಿದ್ದು, ಕಾಂಗ್ರೆಸ್​​ನಲ್ಲೀಗ ಸಿದ್ದರಾಮೋತ್ಸವ VS ಶಿವಕುಮಾರೋತ್ಸವ ಎನ್ನುವಂತ್ತಾಗಿದೆ.

ಇದನ್ನೂ ಓದಿ: ನಾಡಿನ ಬುದ್ಧಿಜೀವಿಗಳು, ಬರಹಗಾರರಿಗೆ ರಕ್ಷಣೆ ಇಲ್ಲವಾಗಿದೆ. ರಕ್ಷಣೆ ನೀಡುವ ವಿಚಾರದಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು -ಸಿದ್ದರಾಮಯ್ಯ ಆಗ್ರಹ

ಅಮೃತ ಮಹೋತ್ಸವ ಸಮಿತಿಯಿಂದ ಮೊದಲ ಅಧಿಕೃತ ಸಭೆ:

ಸಿದ್ದರಾಮಯ್ಯರ 75ನೇ ಅಮೃತ ಮಹೋತ್ಸವ ಸಮಿತಿಯಿಂದ ಇಂದು ಬೆಂಗಳೂರಿನ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್​ನಲ್ಲಿ ಸಭೆ ನಡೆಯಲಿದೆ. ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಸಿದ್ದರಾಮಯ್ಯ ಪ್ರತಿ ಟೀಕೆಗೂ ಠಕ್ಕರ್ ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ:

ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಸಿದ್ದರಾಮೋತ್ಸವ  ಏಕವ್ಯಕ್ತಿ ಪ್ರದರ್ಶನಕ್ಕೆ ಕಾರಣವಾಗುತ್ತಿದೆ ಎಂಬ ಬೇಗುದಿ ಕಾಂಗ್ರೆಸ್ ಪಕ್ಷದಲ್ಲೇ ಭುಗಿಲೆದ್ದ ಬೆನ್ನಲ್ಲೆ ಇದರ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಲು ಪ್ರಾರಂಭಿಸಿತ್ತು. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತಿರುಗಿಬಿದ್ದು ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಟ್ವೀಟ್ ಮಾಡುತ್ತಿದೆ. ಈ ಟ್ವೀಟ್‌ ವಾರ್‌ ಈಗಲೂ ಮುಂದುವರಿದಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗಳಿಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದ ಪುರೋಹಿತರು; ವಿಡಿಯೋ ಇಲ್ಲಿದೆ

ಸಿದ್ದರಾಮಯ್ಯ ಅವರ ಟೀಕೆಗಳನ್ನು ಖಂಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿದ್ದರಾಮಯ್ಯರ ಪ್ರತಿ ಮಾತಿಗೂ ಠಕ್ಕರ್‌ ನೀಡಿದ್ದಾರೆ. ಆ ಮೂಲಕ ಸಿದ್ದರಾಮೋತ್ಸವ ಇನ್ನೊಂದು ಸುತ್ತಿನ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಸಿಎಂ ಆಗಿದ್ದ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿ ಜೈಲಿಗೆ ಕಳುಹಿಸಿ, ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವಲ್ಲಿ ಶಾಮೀಲಾಗಿದ್ದೀರಿ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ತಿರಗೇಟು ನೀಡಿದ ಪ್ರಲ್ಹಾದ್‌ ಜೋಶಿಯವರು ಖಡಕ್ ಉತ್ತರ ಕೊಟ್ಟಿದ್ದಾರೆ.