CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ

ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಪ್ರಮಾಣ: ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದರು. ಧಾರ್ಮಿಕ ನಾಯಕರು ಸೇರಿ ಬಿಜೆಪಿಯ ಉಚ್ಛಾಟಿತ ಶಾಸಕರೂ ಉಪಸ್ಥಿತರಿದ್ದರು.

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು..., ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ
ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ
Image Credit source: PTI

Updated on: Jun 03, 2026 | 4:50 PM

ಬೆಂಗಳೂರು, ಜೂನ್​​ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು.

ಮುಖ್ಯಾಂಶಗಳು

  • ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
  • ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ಗೆಹ್ಲೋಟ್​​
  • ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿ

ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ
ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್​​ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ; ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಪ್ರಮಾಣವಚನಕ್ಕೂ ಮುನ್ನ ವಿಶೇಷ ಪೂಜೆ

ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್​​ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರಿಂದ ವಿಶೇಷ ಪೂಜೆ ನೆರವೇರಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:16 pm, Wed, 3 June 26

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us