ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್‌ಗೆ ಅರ್ಜಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 15, 2023 | 8:18 PM

ಡಿಕೆ ಶಿವಕುಮಾರ್(DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಸಿಬಿಐ(CBI) ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್(High Court) ತಡೆ ನೀಡಿದ ಹಿನ್ನೆಲೆ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್‌ಗೆ ಅರ್ಜಿ
ಡಿಕೆ ಶಿವಕುಮಾರ್​
Follow us on

ಬೆಂಗಳೂರು, ನ.15: ಡಿಕೆ ಶಿವಕುಮಾರ್(DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಸಿಬಿಐ(CBI) ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್(High Court) ತಡೆ ನೀಡಿದ ಹಿನ್ನೆಲೆ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಹೀಗಾಗಿ ಶೀಘ್ರ ವಿಚಾರಣೆಗೆ ಸಿಬಿಐ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನ.22 ಕ್ಕೆ ನಿಗದಿಪಡಿಸಿದೆ.

ಡಿಕೆಶಿ ಆಸ್ತಿ ಕೇಸ್​​: ತೀರ್ಪಿನ ವಿವರ ಬಿಡುಗಡೆ ಮಾಡಿದ್ದ ಹೈಕೋರ್ಟ್

ಹೌದು, ಅಕ್ಟೋಬರ್​​​​​ 20 ರಂದು ಈ ಕೇಸ್​ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್​​​​ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದಕ್ಕೆ ಕಾರಣವೇನು ಎಂಬುದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪಿನ ವಿವರವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಸಿಬಿಐ 84 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್​ ಸಲ್ಲಿಸಿದ್ದ 2412 ಪುಟಗಳಷ್ಟು ದಾಖಲೆ ಪರಿಶೀಲಿಸಿದೆ. ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖಾ ಪ್ರಗತಿ ವರದಿ ಸಲ್ಲಿಸಿದ್ದು, ನಗದು ವ್ಯವಹಾರ ಬಗ್ಗೆ ಉಲ್ಲೇಖಿಸಲಾಗಿತ್ತು. ಜೊತೆಗೆ ಅಗಾಧ ಪ್ರಮಾಣದ ಅನುಮಾನಾಸ್ಪದ ನಗದು ವ್ಯವಹಾರ ಬಗ್ಗೆ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಕೆಆರ್​ ಪುರ ತಹಶೀಲ್ದಾರ್ ಅಜಿತ್ ಆಗಿದ್ದ ರೈಗೆ ಜಾಮೀನು

ಇನ್ನು ತೀರ್ಪಿನಲ್ಲಿ ಸಿಬಿಐ ಸಲ್ಲಿಸಿದ ವರದಿ ಉಲ್ಲೇಖ ಮಾಡಿದ್ದು, ಮುಚ್ಚಿದ ಲಕೋಟೆಯಲ್ಲಿನ‌ ಮಾಹಿತಿ ಈ ಹಂತದಲ್ಲಿ ಬಹಿರಂಗ ಮಾಡಲಾಗದು. 70 ಸ್ಥಿರಾಸ್ತಿ, 30 ಚರಾಸ್ತಿ, 47 ಆದಾಯ, 125 ವಿವಿಧ ಖರ್ಚುಗಳ ಉಲ್ಲೇಖ ಮಾಡಿದ್ದು, ಹಲವು ಅನುಮಾನಾಸ್ಪದ ನಗದು ವ್ಯವಹಾರಗಳ ಉಲ್ಲೇಖವಿದೆ ಎಂದು ನ್ಯಾ.ಕೆ.ನಟರಾಜನ್‌ರವರಿದ್ದ ಹೈಕೋರ್ಟ್ ಪೀಠ ತೀರ್ಪು ನೀಡಿತ್ತು.ಇನ್ನು  ಐಟಿ ಇಲಾಖೆ, ಇಡಿ, ಸಿಬಿಐ ದಾಖಲೆಗಳನ್ನು ಸಂಗ್ರಹಿಸಿದೆ. ತನಿಖೆಯ ಈ ಹಂತದಲ್ಲಿ ಅಂತಿಮ ನಿರ್ಣಯ ಮಾಡಲಾಗದು. ಡಿಕೆ ಶಿವಕುಮಾರ್​ ಸಲ್ಲಿಸಿದ ದಾಖಲೆಗಳನ್ನು ತನಿಖಾಧಿಕಾರಿ ಪರಿಶೀಲಿಸಬೇಕು. ಕೋರ್ಟ್ ಈ ಹಂತದಲ್ಲಿ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗದು ಎಂದು ಹೈಕೋರ್ಟ್ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.