ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಚ್​ಕೆ ಪಾಟೀಲ್

ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್​ ನೀಡಿದ್ದ ಪ್ರತ್ಯೇಕ್ಷ ರಾಷ್ಟ್ರದ ಹೇಳಿಕೆ, ರಾಷ್ಟ್ರ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ದಾವಣಗೆರೆಯಲ್ಲಿ ನಡೆದ ಜಿಲ್ಲಾಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ಸಂಸದ ಡಿಕೆ ಸುರೇಶ್​ಗೆ ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು ಎಂದಿದ್ದರು. ಇದಕ್ಕೆ ಕಿಡಿಕಾರಿದ ಕಾನೂನು ಸಚಿವ ಹೆಚ್​​ಕೆ ಪಾಟೀಲ್​, ಅವರಿಗೆ ಕ್ಷಮೆಯಾಚನೆ ಮಾಡಲು 24 ಗಂಟೆಗಳ ಗಡುವು ನೀಡಿದ್ದಾರೆ.

ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಚ್​ಕೆ ಪಾಟೀಲ್
ಕೆಎಸ್​ ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿದ ಹೆಚ್​ಕೆ ಪಾಟೀಲ್​
Edited By:

Updated on: Feb 08, 2024 | 10:18 PM

ಬೆಂಗಳೂರು, ಫೆ.08: ದೇಶದ್ರೋಹಿ ಹೇಳಿಕೆ ನೀಡಿದ ಸಂಸದ  ಡಿಕೆ ಸುರೇಶ್​ಗೆ  ಗುಂಡಿಕ್ಕಬೇಕು ಎಂಬ ಮಾಜಿ ಸಚಿವ ಕೆಎಸ್​ ಈಶ್ವರಪ್ಪ(KS Eshwarappa) ಹೇಳಿಕೆ ವಿಚಾರ, ‘ಮಾಜಿ ಸಚಿವ  ಈಶ್ವರಪ್ಪಗೆ ಕಾನೂನು ಸಚಿವ ಎಚ್ ಕೆ ಪಾಟೀಲ್(HK Patil) ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇಂಥಹ ಪ್ರಚೋದನಕಾರಿ ಮಾತುಗಳನ್ನು ಆಡಿದರೆ ಒಮ್ಮಿಂದೊಮ್ಮೆಲೆ ಹೀರೋ ಆಗುತ್ತೇವೆ ಎನ್ನುವ ಕಲ್ಪನಾ ಲೋಕದಲ್ಲಿ ಇರುತ್ತಾರೆ. ಆದ್ದರಿಂದಲೇ ಬಹಳ ದೊಡ್ಡ ಪ್ರಮಾದಗಳನ್ನು ಮಾಡುತ್ತಿರುತ್ತಾರೆ ಎಂದು ಕಿಡಿಕಾರಿದರು.

24 ಗಂಟೆಯೊಳಗೆ ಈಶ್ವರಪ್ಪ ತಮ್ಮ ಮಾತನ್ನು ವಾಪಸ್ ಪಡೆಯಬೇಕು

ರಾಜಕಾರಣದಲ್ಲಿ 40 ರಿಂದ 50 ವರ್ಷ ಇರುವಂತವರು ಈ ರೀತಿಯ ಮಾತುಗಳನ್ನಾಡುವುದು ಸಮಾಜದ ಮೇಲೆ ಬಹಳ ದುಷ್ಪರಿಣಾಮವನ್ನು ಬೀರುತ್ತವೆ. ಆದ್ದರಿಂದ 24 ಗಂಟೆಯೊಳಗೆ ಈಶ್ವರಪ್ಪ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಏನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತೇವೆ ಎನ್ನುವ ಮೂಲಕ ಈಶ್ವರಪ್ಪಗೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು: ಮಾಜಿ ಶಾಸಕ ಕೆಎಸ್​ ಈಶ್ವರಪ್ಪ

ಘಟನೆ ವಿವರ

ದಾವಣಗೆರೆ ನಗರದಲ್ಲಿ ಇಂದು ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಈಶ್ವರಪ್ಪ, ‘ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ, ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ. ಒಂದು ಕಡೆ ಮೋದಿ ಹಾಗೂ ಹಾಗೂ ಇನ್ನೊಂದು ಕಡೆ ಶ್ರೀರಾಮ ಚಂದ್ರ, ಇದು ಬಿಜೆಪಿ ಸಿದ್ದಾಂತ ಎಂದು ಹೇಳಿದ್ದರು. ಇದಕ್ಕೆ ಕಿಡಿಕಾರಿದ ಹೆಚ್​​ಕೆ ಪಾಟೀಲ್​, ಕ್ಷಮೆಯಾಚನೆ ಮಾಡಲು 24 ಗಂಟೆಗಳ ಗಡುವು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ